ಲೋಕಸಭಾ ಚುನಾವಣೆ ಹೊತ್ತಲಿ ಬಿಜೆಪಿಗೆ ಬಿಗ್ ಶಾಕ್: ಇಬ್ಬರು ಬಿಜೆಪಿ ಶಾಸಕರು ರಾಜೀನಾಮೆ ?
ಬೆಂಗಳೂರು , ಫೆಬ್ರವರಿ 27: ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಇತ್ತ ಸದ್ದಿಲ್ಲದೇ ಕಮಲಕ್ಕೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ.
ಹೌದು, ಕೆಲ ದಿನಗಳಿಂದ ಬಿಜೆಪಿಯಿಂದ ಸಾಕಷ್ಟು ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್ ಹಾಗೂ ಹೆಬ್ಬಾರ್ ಅವರು ಕಾಂಗ್ರೆಸ್ ನಾಯಕರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದು, ಸಂಜೆಯೊಳಗೆ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಕಲೇ ಸಾಕಷ್ಟು ಬಿಜೆಪಿ ಶಾಸಕಾಂಗ ಸಭೆ ಹಾಗೂ ಕಾರ್ಯಕ್ರಮದಲ್ಲಿ ಗೈರಾಗಿದ್ದ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ನಾಯಕರಾದ ಡಿ ಕೆ ಶಿವಕುಮಾರ್ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದರು. ಅಲ್ಲದೇ ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ ಸಂದರ್ಭದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರವಾಗಿ ಪ್ರಚಾರ ನಡೆಸಿದ್ದ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಇದೀಗ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಪರ ಮತ ಚಲಾಯಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.
ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿರುವುದರಿಂದ ಬಿಜೆಪಿ ಮೋರ್ಚಾ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಹಿನ್ನೆಲೆ ಶಾಸಕರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಇದರ ನಡುವೆ ಇಂದು ಸಂಜೆ ಎಸ್ ಟಿ ಸೋಮಶೇಖರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕೂಡ ಇಂದು ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಲಿ ಭರ್ಜರಿ ತಯಾರಿ ನಡೆಸಿದ್ದ ರಾಜ್ಯ ಬಿಜೆಪಿಗೆ ಇಬ್ಬರು ಶಾಸಕರು ಬಿಗ್ ಶಾಕ್ ನೀಡಿದ್ದಾರೆ.

ಇನ್ನೂ ಬಿಜೆಪಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ವಿಪ್ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ಗೆ ಮತಹಾಕುವ ಮೂಲಕ ಅಡ್ಡ ಮತದಾನ ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ನಡೆ ಕೂಡ ಸಾಕಷ್ಟು ಕುತೂಹಲ ಮೂಡಿಸಿದ್ದು, ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಅಡ್ಡ ಮತದಾನ ಮಾಡುವ ಭೀತಿ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಮ್ಮೆ ಶಾಸಕರಿಗೆ ವಿಪ್ ಜಾರಿ ಮಾಡಿದೆ. ವಿಧಾನಸೌಧದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಅವರ ಕೊಠಡಿಗೆ ಸಚೇತಕ ದೊಡ್ಡನಗೌಡ ಪಾಟೀಲ್ ವಿಪ್ ಅಂಟಿಸಿದ್ದಾರೆ. ಈ ಎಲ್ಲಾ ಬೆಳವಣೆಗೆಗಳ ನಡುವೆ ಇಂದು ಸಂಜೆ ಇಬ್ಬರು ಬಿಜೆಪಿ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications