Get Updates
Get notified of breaking news, exclusive insights, and must-see stories!

ಅಬ್ಬರದ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏನೆಲ್ಲಾ ಅವಾಂತರಗಳು ಸಂಭವಿಸಿದ್ವು?-ಇಲ್ಲಿದೆ ಮಾಹಿತಿ

Karnataka Rain: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಆರ್ಭಟ ಮುಂದುವರೆದಿದ್ದು, ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ಮತ್ತೊಂದೆಡೆ ಹಲವೆಡೆ ಮನೆ ಕುಸಿತ, ಬೆಳೆ ನಾಶ ಸೇರಿದಂತೆ ಹಲವು ಅನಾಹುತಗಳು ಕೂಡ ಸಂಭಿವಿಸಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಸೋಮವಾರ (ಮೇ 20) ರಂದು ಮಳೆರಾಯ ಹಲವು ಜಿಲ್ಲಗಳಲ್ಲಿ ಅವಾಂತೆಗಳನ್ನೇ ಸೃಷ್ಟಿಸಿದ್ದಾನೆ. ಹಾಗಾದರೆ ಎಲ್ಲೆಲ್ಲಿ ಏನೆಲ್ಲಾ ಅವಾಂತರಗಳಾಗಿವೆ ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.

ಸೋಮವಾರ (ಮೇ 20) ಚಾಮರಾಜನಗರ, ಕೊಡಗು, ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿದ್ದು, ಮಳೆರಾಯ ಹಲವಡೆ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ.

Huge damages due to Haevy Rain in More than 15 districts of state on May 20

* ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಹರೇಕಳ ನ್ಯೂಪಡ್ಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಗೋಡೆ ಕುಸಿದು, ಶಾಲಾ ಕಂಪೌಂಡ್ ಗೇಟ್‌ನಲ್ಲಿ ಆಟವಾಡುತ್ತಿದ್ದ ವೇಳೆ 3ನೇ ತರಗತಿ ವಿದ್ಯಾರ್ಥಿನಿ ಶಾಝಿಯಾ ಬಾನು (7) ಎಂಬಾಕೆ ಸಾವನ್ನಪ್ಪಿದ್ದಾಳೆ. ಇನ್ನು ಕುಕ್ಕೆ ಸುಬ್ರಮಣ್ಯದಲ್ಲಿ ಅಂಗಡಿಗಳ ಬಳಿ ಕಬ್ಬಿಣ ಹಿಡಿದ ಜನರಿಗೆ ಸಿಡಿಲ ಶಾಕ್ ತಗುಲಿದೆ.

* ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಹೊಂಗೆ ಹಳ್ಳ ಉಕ್ಕಿ ಹರಿಯುತ್ತಿದೆ. ಅಜ್ಜಂಪುರ ತಾಲೂಕಿನ ಐತಿಹಾಸಿಕ ಶಿವನಿ ಕೆರೆಗೆ ಭಾರೀ ಪ್ರಮಾಣದ ನೀರು ಹರಿದುಬಂದಿದೆ. ಹೊಳೆಹೊನ್ನೂರಿನಲ್ಲಿ ತಗ್ಗು ಪ್ರದೇಶದ ಕಟ್ಟಡಗಳಿಗೆ ನೀರು ನುಗ್ಗಿದ್ದು, ಹಲವು ಮನೆಗಳಿಗೆ ಅಪಾರ ಹಾನಿಯಾಗಿದೆ.

* ಕಡೂರು ಪಟ್ಟಣದ ಹಳೆಪೇಟೆಯಲ್ಲಿ ಭಾರೀ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ, ಕೆ.ಎಚ್.ರಂಗಪ್ಪ (48) ಎಂಬುವರು ಅಸುನೀಗಿದ್ದಾರೆ.

* ಶಿವಮೊಗ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಸಾರ್ವಜನಿಕರು, ವಾಹನ ಸವಾರರು, ಸ್ಥಳೀಯರು ಪರದಾಡಿದ ಘಟನೆ ನಡೆದಿದೆ.

* ಕೊಡಗಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯಾದ್ಯಂತ ಮಳೆಗಾಲದ ವಾತಾವರಣ ಕಂಡುಬಂದಿದೆ.

* ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಇಳ್ಳೇನಹಳ್ಳಿಯಲ್ಲಿ ಸಿಡಿಲಿಗೆ ಹಸುವೊಂದು ಮೃತಪಟ್ಟಿದೆ. ಹುಬ್ಬಳ್ಳಿ, ವಿಜಯನಗರ, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿಯೂ ಜೋರು ಮಳೆಯಾಗಿದ್ದು, ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಟಿ.ಕಲ್ಲಹಳ್ಳಿಯಲ್ಲಿ ಚಪ್ಪರ ಮುರಿದು 8 ಕುರಿಗಳು ಸಾವನ್ನಪ್ಪಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

* ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವೆಡೆ ಅಬ್ಬರದ ಮಳೆ ಸುರಿದಿದ್ದು, ಪರಿಣಾಮ ದೇವನಹಳ್ಳಿಯಲ್ಲಿ ತಗ್ಗು ಪ್ರದೇಶದ ಮನೆ, ಅಪಾರ್ಟ್‌ಮೆಂಟ್‌ಗಳ ನೆಲಮಾಳಿಗೆಗೆ ನೀರು ನುಗ್ಗಿದೆ. ಮೈಸೂರು ಹಾಗೂ ತುಮಕೂರಿನಲ್ಲಿಯೂ ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ ಎನ್ನವ ಮಾಹಿತಿ ಲಭ್ಯವಾಗಿದೆ.

* ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಮಳೆಯಾಗಿದೆ. ಇನ್ನು ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆ ಸುರಿದ ಪರಿಣಾಮ, ದೇವಸ್ಥಾನಕ್ಕೆ ತೆರಳಲು ಚೆಕ್ ಪೋಸ್ಟ್ ಬಳಿ ಬಸ್‌ಗೆ ಕಾಯುತ್ತಿದ್ದ ಸಂದರ್ಭದಲ್ಲಿ ನೂರಾರು ಮಂದಿ ಪರದಾಡಿ ಘಟನೆ ನಡೆದಿದೆ.

* ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ಮಳೆ ನೀರು ಹೊಳೆ ರೂಪದಲ್ಲಿ ಹರಿಯಿತು. ಅಕ್ಕಪಕ್ಕದ ರಸ್ತೆ ಬದಿ ಅಂಗಡಿಗಳಿಗೆ ನೀರು ನುಗ್ಗಿದ ಘಟನೆ ನಡೆದಿದೆ.

* ದಾವಣಗೆರೆ ಜಿಲ್ಲೆಯ ಹಹಲವೆಡೆ ಭಾರೀ ಮಳೆಯಿಂದಾಗಿ, ಕೋಟ್ಯಂತರ ರೂಪಾಯಿ ಬೆಲೆ ಹಾನಿಯಾಗಿದೆ. ನಗರದ ಸಮೀಪದ ದೊಡ್ಡಬಾತಿ ಗ್ರಾಮದಲ್ಲಿ ನೂರಾರು ಹೆಕ್ಟೇರ್‌ ಭತ್ತದ ಬೆಳೆ ನೆಲಕಚ್ಚಿದೆ. ಫಸಲಿಗೆ ಬಂದಿದ್ದ ಭತ್ತ ಕಟಾವಿಗೆ ಮುನ್ನವೇ ನೀರುಪಾಲಾಗಿದೆ. ಶನಿವಾರ ಸಂಜೆ ಮತ್ತು ರಾತ್ರಿ ಬೀಸಿದ ಗಾಳಿ, ಸುರಿದ ಮಳೆಗೆ ಭತ್ತದ ಬೆಳೆಗೆ ಹಾನಿಯಾಗಿದೆ.

ಮತ್ತೊಂದೆಡೆ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಕಂಡುಬಂದಿದ್ದು, ಮುಂದಿನ ಒಂದೆರಡು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+