ಕುರುಬರು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೆ ಆಗ್ರಹ, ಪ್ರತಿಭಟನೆ, ಧ್ವಂಸ
ಬಾಗಲಕೋಟೆ, ಜುಲೈ 29: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಎಚ್ ವಿಶ್ವನಾಥ್ ಅವರ ಮುಂದಾಳತ್ವದಲ್ಲಿ ಬಾಗಲಕೋಟೆಯಲ್ಲಿ ಶನಿವಾರ ಭಾರೀ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮನವಿ ಸಲ್ಲಿಸಲು ತೆರಳಿದ್ದ ವೇಳೆ ಜಿಲ್ಲಾಧಿಕಾರಿಯಾಗಿರುವ ಮೇಘಣ್ಣವರ ಇರಲಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಪ್ರತಿಭಟನಾನಿರತರು ದಾಂದಲೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಕೊಠಡಿಯ ಕಿಟಕಿ ಗಾಜುಗಳನ್ನು ಧ್ವಂಸ ಮಾಡಿದರು.

ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರುವ ಪ್ರಯತ್ನದಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇನ್ನು ಗಲಾಟೆ ನಡೆದ ವೇಳೆಯಲ್ಲಿ ಗಾಯಗೊಂಡ ಮನಗುಂಡಿಯ ಮನಸೂರ ಮಠದ ಬಸವರಾಜ ದೇವರು ಅವರನ್ನು ಭಕ್ತರು ಹೊತ್ತುತಂದು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು.
ಒಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿತ್ತು. ಆಕ್ರೋಶಗೊಂಡ ಪ್ರತಿಭಟನಾನಿರತರು ಘೋಷಣೆಗಳನ್ನು ಕೂಗಿದರು.
ಈ ವೇಳೆ ಆಕ್ರೋಶಗೊಂಡ ಗುಂಪನ್ನು ಹತೋಟಿಗೆ ತರಲು ಅನಿವಾರ್ಯವಾಗಿ ಲಘು ಲಾಠಿ ಪ್ರಹಾರ ನಡೆಸಬೇಕಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.












Click it and Unblock the Notifications