ಕೊಪ್ಪಳದ ಹುಲಿಗೆಮ್ಮ ದೇವಿ ಉತ್ಸವಕ್ಕೆ ಹೋಗೋಣ ಬನ್ನಿ
ಕೊಪ್ಪಳ ಮೇ 06 : ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ ಮೇ 20ರಂದು ಸಂಜೆ 5-30 ಗಂಟೆಗೆ ಹುಲಿಗಿಯಲ್ಲಿ ನೆರವೇರಲಿದೆ.
ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರೆ ಅಂಗವಾಗಿ ಈಗಾಗಲೆ ಧಾರ್ಮಿಕ ಕಾರ್ಯಕ್ರಮಗಳು ಮೇ 11ರಂದು ಹುಲಿಗೆಮ್ಮ ದೇವಿಗೆ ಕಂಕಣಧಾರಣೆಯ ಮೂಲಕ ಪ್ರಾರಂಭವಾಗಲಿದೆ. ಕಾರ್ಯಕ್ರಮಗಳ ವಿವರಗಳು ಕೆಳಗಿನಂತಿವೆ. [ವಿವಾಹ, ಸಂತಾನ ದೋಷ ನಿವಾರಣೆಗೆ ಮುಗ್ವಾ ಸುಬ್ರಹ್ಮಣ್ಯ ದರ್ಶನ]

ಮೇ 19ರಂದು ಸಂಜೆ 7 ಗಂಟೆಗೆ ಉತ್ಸವ.
ಮೇ 20ರಂದು ಸಂಜೆ 5-30 ಗಂಟೆಗೆ ಹುಲಿಗೆಮ್ಮ ದೇವಿ ಮಹಾರಥೋತ್ಸವ.
ಮೇ 21ರಂದು ಬಾಳಿಂಡಿಗೆ, ಕೊಂಡದ ಪೂಜಾ, ಗಂಗಾದೇವಿ ಪೂಜಾ, ಶ್ರೀ ದೇವಿಗೆ ಪ್ರಸಾದ ಕಟ್ಟುವುದು, ಬಾಳಿದಂಡಿಗೆ ಆರೋಹಣ.

ಮೇ 22ರಂದು ಪಾಯಸ ಅಗ್ನಿಕುಂಡ, ಕೊಂಡದ ಪೂಜಾ, ಹಿಡಿದಕ್ಷಿಣೆ ವಿತರಣೆ, ಪಡಗದ ಪೂಜಾ, ಗಂಗಾದೇವಿ ಪೂಜಾ, ಶ್ರೀ ದೇವಿಗೆ ಪ್ರಸಾದ ಕಟ್ಟುವುದು ಹಾಗೂ ನಿವೇದನೆ.
ಮೇ 23ರಂದು ಬೆಳಿಗ್ಗೆ 6-30 ಗಂಟೆಗೆ ಅಗ್ನಿಕುಂಡ ಕಾರ್ಯಕ್ರಮ ನೆರವೇರಲಿದೆ.
ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ದೇವಿಯ ಕೃಪೆಗೆ ಪಾತ್ರರಾಗುವಂತೆ ಕೋರಲಾಗಿದೆ. ಜಾತ್ರೆಗೆ ಆಗಮಿಸಲಿರುವ ಲಕ್ಷಾಂತರ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ವಿವಿಧ ಮಾರ್ಗಗಳಿಂದ ಬರುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ದೇವಸ್ಥಾನ ಮತ್ತು ಗ್ರಾಮಪಂಚಾಯಿತಿ ವತಿಯಿಂದ ಟ್ಯಾಂಕರುಗಳ ಮೂಲಕ, ಅರವಟಿಗೆಗಳ ಮೂಲಕ ವ್ಯವಸ್ಥೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. [ಶಿವನ ಸತ್ಯ ಪರಿಚಯ, ಶಿವರಾತ್ರಿಯ ಆಧ್ಯಾತ್ಮಿಕ ರಹಸ್ಯ]

ಕಾಣಿಕೆಗೆ ರಶೀದಿ ಪಡೆಯಿರಿ : ಹುಲಿಗೆಮ್ಮ ದೇವಿಗೆ ಸಲ್ಲಿಸುವ ಬೆಳ್ಳಿ, ಬಂಗಾರ, ಕಾಣಿಕೆ ಹಾಗೂ ಮುಡುಪುಗಳನ್ನು ದೇವಸ್ಥಾನದ ಕಚೇರಿಯಲ್ಲಿ ಕೊಟ್ಟು ರಶೀದಿ ಪಡೆಯಬೇಕು ಅಥವಾ ಹುಂಡಿಯಲ್ಲಿ ಹಾಕಬೇಕು. ರಶೀದಿ ಪಡೆಯದೇ ಕೊಡುವ ಕಾಣಿಕೆಗಳು ದೇವಿಯ ನಿಧಿಗೆ ಸೇರುವುದಿಲ್ಲ. ಉಚಿತ ಅನ್ನ ದಾಸೋಹಕ್ಕೆ ದವಸ ಧಾನ್ಯ ನೀಡಬಯಸುವ ಭಕ್ತಾದಿಗಳು ಗಣಕೀಕೃತ ಕೌಟರ್‍ನಲ್ಲಿ ನೀಡಿ ರಸೀದಿ ಪಡೆಯಬಹುದು.
ಪ್ರಾಣಿ ಬಲಿ ನಿಷಿದ್ಧ : ಜಾತ್ರೆಯ ಸಂದರ್ಭದಲ್ಲಿ ಯಾವುದೇ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ದಂಡ ವಿಧಿಸಲಾಗುವುದು. ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಮಹಾನಕ್ಷೆ ತಯಾರಿಸಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಭಕ್ತಾದಿಗಳು ಉದಾರವಾಗಿ ತನುಮನದಿಂದ ದೇಣಿಗೆ ನೀಡಲು ಕೋರಿದೆ. [ವಾರಾಂತ್ಯ ವಿಶೇಷ: ದೇವರಾಯನದುರ್ಗದಲ್ಲಿ ಅಪರೂಪದ ಶಿವ ದೇಗುಲ]

ಇಲ್ಲಿಗೆ ಆಗಮಿಸುವುದು ಹೇಗೆ? : ಜಾತ್ರೆಗೆ ಆಗಮಿಸುವ ಭಕ್ತಾದಿಗಳು ಮುನಿರಾಬಾದ್ ರೇಲ್ವೆ ನಿಲ್ದಾಣದಲ್ಲಿ ಇಳಿಯಬೇಕು, ಕೊಪ್ಪಳ, ಗಂಗಾವತಿ ಹಾಗೂ ಹೊಸಪೇಟೆಯಿಂದ ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ 8095679319 ಅಥವಾ 8151016891 ಕ್ಕೆ ಸಂಪರ್ಕಿಸಬಹುದು ಎಂದು ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. (ಚಿತ್ರ ಕೃಪೆ : ಹುಲಿಗೆಮ್ಮ ದೇವಿ ವೆಬ್ ಸೈಟ್)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications