ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದ ಹುಲಿಗೆಮ್ಮ ದೇವಿ ಉತ್ಸವಕ್ಕೆ ಹೋಗೋಣ ಬನ್ನಿ

By Prasad
|
Google Oneindia Kannada News

ಕೊಪ್ಪಳ ಮೇ 06 : ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಪ್ಪಳ ತಾಲೂಕು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ ಮೇ 20ರಂದು ಸಂಜೆ 5-30 ಗಂಟೆಗೆ ಹುಲಿಗಿಯಲ್ಲಿ ನೆರವೇರಲಿದೆ.

ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರೆ ಅಂಗವಾಗಿ ಈಗಾಗಲೆ ಧಾರ್ಮಿಕ ಕಾರ್ಯಕ್ರಮಗಳು ಮೇ 11ರಂದು ಹುಲಿಗೆಮ್ಮ ದೇವಿಗೆ ಕಂಕಣಧಾರಣೆಯ ಮೂಲಕ ಪ್ರಾರಂಭವಾಗಲಿದೆ. ಕಾರ್ಯಕ್ರಮಗಳ ವಿವರಗಳು ಕೆಳಗಿನಂತಿವೆ. [ವಿವಾಹ, ಸಂತಾನ ದೋಷ ನಿವಾರಣೆಗೆ ಮುಗ್ವಾ ಸುಬ್ರಹ್ಮಣ್ಯ ದರ್ಶನ]

Huligemma Devi temple festival in Koppal from 20th May

ಮೇ 19ರಂದು ಸಂಜೆ 7 ಗಂಟೆಗೆ ಉತ್ಸವ.
ಮೇ 20ರಂದು ಸಂಜೆ 5-30 ಗಂಟೆಗೆ ಹುಲಿಗೆಮ್ಮ ದೇವಿ ಮಹಾರಥೋತ್ಸವ.
ಮೇ 21ರಂದು ಬಾಳಿಂಡಿಗೆ, ಕೊಂಡದ ಪೂಜಾ, ಗಂಗಾದೇವಿ ಪೂಜಾ, ಶ್ರೀ ದೇವಿಗೆ ಪ್ರಸಾದ ಕಟ್ಟುವುದು, ಬಾಳಿದಂಡಿಗೆ ಆರೋಹಣ.

Huligemma Devi temple festival in Koppal from 20th May

ಮೇ 22ರಂದು ಪಾಯಸ ಅಗ್ನಿಕುಂಡ, ಕೊಂಡದ ಪೂಜಾ, ಹಿಡಿದಕ್ಷಿಣೆ ವಿತರಣೆ, ಪಡಗದ ಪೂಜಾ, ಗಂಗಾದೇವಿ ಪೂಜಾ, ಶ್ರೀ ದೇವಿಗೆ ಪ್ರಸಾದ ಕಟ್ಟುವುದು ಹಾಗೂ ನಿವೇದನೆ.
ಮೇ 23ರಂದು ಬೆಳಿಗ್ಗೆ 6-30 ಗಂಟೆಗೆ ಅಗ್ನಿಕುಂಡ ಕಾರ್ಯಕ್ರಮ ನೆರವೇರಲಿದೆ.

ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ದೇವಿಯ ಕೃಪೆಗೆ ಪಾತ್ರರಾಗುವಂತೆ ಕೋರಲಾಗಿದೆ. ಜಾತ್ರೆಗೆ ಆಗಮಿಸಲಿರುವ ಲಕ್ಷಾಂತರ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ವಿವಿಧ ಮಾರ್ಗಗಳಿಂದ ಬರುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ದೇವಸ್ಥಾನ ಮತ್ತು ಗ್ರಾಮಪಂಚಾಯಿತಿ ವತಿಯಿಂದ ಟ್ಯಾಂಕರುಗಳ ಮೂಲಕ, ಅರವಟಿಗೆಗಳ ಮೂಲಕ ವ್ಯವಸ್ಥೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. [ಶಿವನ ಸತ್ಯ ಪರಿಚಯ, ಶಿವರಾತ್ರಿಯ ಆಧ್ಯಾತ್ಮಿಕ ರಹಸ್ಯ]

Huligemma Devi temple festival in Koppal from 20th May

ಕಾಣಿಕೆಗೆ ರಶೀದಿ ಪಡೆಯಿರಿ : ಹುಲಿಗೆಮ್ಮ ದೇವಿಗೆ ಸಲ್ಲಿಸುವ ಬೆಳ್ಳಿ, ಬಂಗಾರ, ಕಾಣಿಕೆ ಹಾಗೂ ಮುಡುಪುಗಳನ್ನು ದೇವಸ್ಥಾನದ ಕಚೇರಿಯಲ್ಲಿ ಕೊಟ್ಟು ರಶೀದಿ ಪಡೆಯಬೇಕು ಅಥವಾ ಹುಂಡಿಯಲ್ಲಿ ಹಾಕಬೇಕು. ರಶೀದಿ ಪಡೆಯದೇ ಕೊಡುವ ಕಾಣಿಕೆಗಳು ದೇವಿಯ ನಿಧಿಗೆ ಸೇರುವುದಿಲ್ಲ. ಉಚಿತ ಅನ್ನ ದಾಸೋಹಕ್ಕೆ ದವಸ ಧಾನ್ಯ ನೀಡಬಯಸುವ ಭಕ್ತಾದಿಗಳು ಗಣಕೀಕೃತ ಕೌಟರ್‍ನಲ್ಲಿ ನೀಡಿ ರಸೀದಿ ಪಡೆಯಬಹುದು.

ಪ್ರಾಣಿ ಬಲಿ ನಿಷಿದ್ಧ : ಜಾತ್ರೆಯ ಸಂದರ್ಭದಲ್ಲಿ ಯಾವುದೇ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಹಾಗೂ ದಂಡ ವಿಧಿಸಲಾಗುವುದು. ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಮಹಾನಕ್ಷೆ ತಯಾರಿಸಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಭಕ್ತಾದಿಗಳು ಉದಾರವಾಗಿ ತನುಮನದಿಂದ ದೇಣಿಗೆ ನೀಡಲು ಕೋರಿದೆ. [ವಾರಾಂತ್ಯ ವಿಶೇಷ: ದೇವರಾಯನದುರ್ಗದಲ್ಲಿ ಅಪರೂಪದ ಶಿವ ದೇಗುಲ]

Huligemma Devi temple festival in Koppal from 20th May

ಇಲ್ಲಿಗೆ ಆಗಮಿಸುವುದು ಹೇಗೆ? : ಜಾತ್ರೆಗೆ ಆಗಮಿಸುವ ಭಕ್ತಾದಿಗಳು ಮುನಿರಾಬಾದ್ ರೇಲ್ವೆ ನಿಲ್ದಾಣದಲ್ಲಿ ಇಳಿಯಬೇಕು, ಕೊಪ್ಪಳ, ಗಂಗಾವತಿ ಹಾಗೂ ಹೊಸಪೇಟೆಯಿಂದ ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ 8095679319 ಅಥವಾ 8151016891 ಕ್ಕೆ ಸಂಪರ್ಕಿಸಬಹುದು ಎಂದು ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. (ಚಿತ್ರ ಕೃಪೆ : ಹುಲಿಗೆಮ್ಮ ದೇವಿ ವೆಬ್ ಸೈಟ್)

English summary
Huligemma Devi temple maha rathotsava festival in Huligi village will be held from 20th May. Huligemma temple comes in Huligi village in Munirabad taluk in Koppal district. Thousands of devotees throng to this historical pilgrim place to seek blessings of Huligemma.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X