ಮಲೆನಾಡು ಭಾಗದಲ್ಲಿ ಕಾಡಾನೆ, ಚಿರತೆ ಹಾವಳಿಗೆ ಜನ ತತ್ತರ: ಅರಣ್ಯ ಇಲಾಖೆ ವಿರುದ್ಧ ಜನಾಆಕ್ರೋಶ
ಚಿಕ್ಕಮಗಳೂರು/ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿ, ಚಿರತೆಗಳ ಹಾವಳಿ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಇದರ ಪರಿಣಾಮವಾಗಿ ಹಲವಾರು ಜನ ರೈತರು, ಕಾಫಿ ತೋಟದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಕಳೆದ ನಾಲ್ಕು ದಿನಗಳ ಹಿಂದೆ ಯಲ್ಲಪ್ಪ ಎನ್ನುವ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಬಲಿಯಾದ ಘಟನೆ ಪುರ ಗ್ರಾಮದಲ್ಲಿ ನಡೆದಿತ್ತು.
ಈ ಪ್ರಕರಣಲ್ಲೆ ಸಂಬಂಧಿಸಿದಂತೆ ಕಾಡಾನೆಯನ್ನು ತಕ್ಷಣ ಸೆರೆಹಿಡಿಯುವಂತೆ ಸ್ಥಳೀಯ ರೈತರು ಅರಣ್ಯ ಇಲಾಖೆಯವರಿಗೆ ಆಗ್ರಹಪಡಿಸಿದ್ದು, ಪ್ರತಿಭಟನೆಯನ್ನು ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಓಡಾಡಿಕೊಂಡಿರುವ ಕಾಡಾನೆಯನ್ನು ಸೆರೆಹಿಡಿಯಲು ಐದು ಸಾಕಾನೆಗಳ ತಂಡವನ್ನು ಚಿಕ್ಕಮಗಳೂರು ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮಕ್ಕೆ ಕರೆತರಲಾಗಿದೆ.

ಕಾಡಾನೆ ಇರುವ ಜಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಸಾಕಾನೆಗಳು ಬೀಡ ಬಿಟ್ಟಿವೆ. ಮೂರು ಕಾಡಾನೆಗಳಲ್ಲಿ ಒಂದು ನರಹಂತಕವನ್ನು ಸೆರೆಹಿಡಿಯುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಮೇರೆಗೆ ಶಿವಮೊಗ್ಗದ ಸಕ್ರೆಬೈಲಿನಿಂದ ಐದು ಸಾಕಾನೆಗಳ ತಂಡವನ್ನು ಕರೆತರಲಾಗಿದೆ ಎನ್ನಲಾಗಿದೆ. ಇನ್ನುಳಿದ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಅದರ ಚಲನವಲನಗಳನ್ನು ಗಮನಿಸುವಂತೆ ತಿಳಿಸಲಾಗಿದೆ.
ತೀರ್ಥಹಳ್ಳಿ: 3 ಹಸುಗಳು ಚಿರತೆ ಪಾಲು
ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಉಪಟಳ ಮಾತ್ರವಲ್ಲದೇ ಚಿರತೆ ಸಹ ಪ್ರತ್ಯಕ್ಷವಾಗಿ ಆಗಾಗ ಸ್ಥಳೀಯರಿಗೆ, ರೈತರಿಗೆ ಕಾಟ ಕೊಡುತ್ತಿದೆ. ಹಗಲು ಹೊತ್ತು ಮನೆಯಿಂದ ಹೊರ ಹೋಗುವುದು, ಹೊಗ, ತೋಟಗಳಲ್ಲಿ ಕೆಲಸ ಮಾಡಲು ಹಿಂದೇಟು ಹಾಕುವಂತಾಗಿದೆ. ಮೂರು ಹಸುಗಳನ್ನು ಚಿರತೆ ಪಾಲಾದರೂ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಮಂಗ, ಕಾಡು ಕೋಣ ಹಾವಳಿ ಜೊತೆಗೆ ಚಿರತೆ ಹಾವಳಿ ಉಂಟಾಗಿದೆ. ತೀರ್ಥಹಳ್ಳಿಯಲ್ಲಿ ಅರಳಸುರಳಿ ಭಾಗದಲ್ಲಿ ಸದ್ದು ಮಾಡಿದ್ದ ಚಿರತೆಗಳು ಇದೀಗ ಈಚಲಬೈಲು ಭಾಗದಲ್ಲಿ ಕಾಣಿಸಿಕೊಂಡಿವೆ. ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಈಚಲ ಬೈಲ್ ನಾಗೇಶ್ ಎಂಬುವರ ಮನೆಯ ಕೊಟ್ಟಿಗೆಯಲ್ಲಿ ಶುಕ್ರವಾರ ಬೆಳಗಿನ ಜಾವ ಹಸುಗಳನ್ನು ಚಿರತೆ ಕೊಂದು ರಕ್ತ ಹೀರಿವೆ. ಕಳೆದ ವಾರದ ಹಿಂದೆಯಷ್ಟೇ ಪಕ್ಕದ ಊರಿನ 2 ಹಸುಗಳು ಚಿರತೆ ದಾಳಿಗೆ ಬಲಿಯಾಗಿದೆ. ಈಚಲ ಬೈಲು, ಹಾಲಿಗೆ, ಸುಣ್ಣಧಮನೆ ಸೇರಿದಂತೆ ಈ ಭಾಗದಲ್ಲಿ ಚಿರತೆಗಳ ಹಾವಳಿ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಅರಣ್ಯ ಇಲಾಖೆ ಭರವಸೆ ನೀಡಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications