ಮೇಟಿ ರಾಸಲೀಲೆ ಪ್ರಕರಣದ ಸಂತ್ರಸ್ತೆಯಿಂದ ಆತ್ಮಹತ್ಯೆಗೆ ಯತ್ನ
ಬಾಗಲಕೋಟೆ, ಆಗಸ್ಟ್ 13: ಅಬಕಾರಿ ಖಾತೆ ಮಾಜಿ ಸಚಿವ ಎಚ್ ವೈ ಮೇಟಿ ಅವರ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಮಹಿಳೆ ಇಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇಟಿ ಬೆಂಬಲಿಗರಿಂದ ನಿರಂತರ ಬೆದರಿಕೆ ಬರುತ್ತಿದ್ದ ಕಾರಣ, ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವಿಜಯಲಕ್ಷ್ಮಿ ಪ್ರತಿಕ್ರಿಯಿಸಿದ್ದಾರೆ.
ಸಂತ್ರಸ್ತ ಮಹಿಳೆ ವಿಜಯಲಕ್ಷ್ಮಿ ಅವರು ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮಹಿಳೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಹೀಳೆಗೆ 108 ಆಂಬುಲೆನ್ಸ್ ನಲ್ಲೆ ಸೂಕ್ತ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ನಂತರ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬಂದಿರುವ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಅವರು ಪರಿಶೀಲನೆ ನಡೆಸಿದ್ದಾರೆ.

ಮೇಟಿ ಅವರು ಆರೋಪ ಹೊತ್ತ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಸಿಐಡಿ ತನಿಖೆ ನಡೆದು, ಮೇಟಿ ಅವರಿಗೆ ಕ್ಲೀನ್ ಚಿಟ್ ನೀಡಲಾಯಿತು.
ಆದರೆ, ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಸಿದ್ದರಾಮಯ್ಯ ಅವರು ಮನಸ್ಸು ಮಾಡಲಿಲ್ಲ. ಇತ್ತ ಸಂತ್ರಸ್ತ ಮಹಿಳೆ ಇತ್ತೀಚೆಗೆ ಆಯುಷ್ ಇಲಾಖೆಯಲ್ಲಿದ್ದ ತಮ್ಮ ಉದ್ಯೋಗ ಉಳಿಸಿಕೊಳ್ಳಲು ಹೆಣಗಾಡಿ, ಪ್ರತಿಭಟನೆ ನಡೆಸಿದ ಘಟನೆ ಇತ್ತೀಚೆಗೆ ವರದಿಯಾಗಿತ್ತು.
ಮೇಟಿ ಅವರ ಪ್ರಕರಣದಲ್ಲಿ ಬಿಜೆಪಿಯ ಪ್ರಭಾವಿ ನಾಯಕಿ, ಪೊಲೀಸ್ ಅಧಿಕಾರಿ ಅಲ್ಲದೆ ಬಿಎಸ್ ಯಡಿಯೂರಪ್ಪ ಅವರ ಆಪ್ತ ಸಹಾಯಕ, ಸಂಬಂಧಿ ಸಂತೋಷ್ ಪಾತ್ರವಿರುವ ಬಗ್ಗೆ ಮತ್ತೊಮ್ಮೆ ತನಿಖೆ ಆರಂಭಗೊಂಡಿದೆ.
ಸಂತೋಷ್ ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಸುಭಾಷ್ ನಡುವೆ ನಿರಂತರ ಸಂಪರ್ಕವಿರುವುದು ಪತ್ತೆಯಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಈ ಮಹಿಳೆ ಆತ್ಮಹತ್ಯೆಗೆ ಶರಣಾಗುವ ತೀರ್ಮಾನ ಕೈಗೊಂಡಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications