ಕಲ್ಯಾಣ ಕರ್ನಾಟಕದ ಜನರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ

ಬೆಂಗಳೂರು, ಸೆಪ್ಟೆಂಬರ್ 20 : ಹೈದ್ರಾಬಾದ್-ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿದೆ. ಐವರು ಸಚಿವರ ಸಂಪುಟ ಉಪ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ.

ಭಾರತ ಸಂವಿಧಾನದ ಅನುಚ್ಛೇಧ 371 (ಜೆ) ಅಡಿಯಲ್ಲಿ ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ನೀಡಿರುವ ಸ್ಥಾನಮಾನದಡಿಯಲ್ಲಿ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಹಾಗೂ ಪರಾಮರ್ಶೆ ಮಾಡಲು ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ.

Hyderabad Karnataka Development : Cabinet Sub Committee Formed

ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ನಿಯಮ 13 (5) ಹಾಗೂ ಸುತ್ತೋಲೆ ಪ್ರಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಈ ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡಲು ಸೂಚನೆ ನೀಡಲಾಗಿದೆ.

ಸಮಿತಿಯಲ್ಲಿರುವವರು : ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದೆ. ಉಳಿದಂತೆ ಸಮಿತಿಯ ಸದಸ್ಯರ ಪಟ್ಟಿ ಕೆಳಗಿನಂತಿದೆ.

* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು
* ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ
* ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್
* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ

ಕಚೇರಿ ಸ್ಥಾಪನೆ : ಬೆಂಗಳೂರಿನಲ್ಲಿರುವ ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಂದು ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+