ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 06 : ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಬದಲಾಗಲಿದೆ. 371 ಜೆ ಕಾಯ್ದೆಯಡಿ ಹೈದರಾಬಾದ್-ಕರ್ನಾಟಕದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾವಣೆ ಮಾಡಲು ಅನುಮೋದನೆ ನೀಡಲಾಗಿದೆ. ಎಲ್ಲಾ ಸರ್ಕಾರಿ ದಾಖಲೆಗಳಲ್ಲಿ ಹೆಸರು ಬದಲಾಗಲಿದೆ.

ಹೈ-ಕ ವಿಶೇಷ ಸ್ಥಾನಮಾನಕ್ಕೆ ಲೋಕಸಭೆ ಅಸ್ತುಹೈ-ಕ ವಿಶೇಷ ಸ್ಥಾನಮಾನಕ್ಕೆ ಲೋಕಸಭೆ ಅಸ್ತು

ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ. ಸಿ. ಮಾಧುಸ್ವಾಮಿ, "ಸರ್ಕಾರಿ ದಾಖಲೆಗಳಲ್ಲಿ ಹೈದರಾಬಾದ್-ಕರ್ನಾಟಕ ಎಂಬ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಾವಣೆ ಮಾಡಲಾಗುತ್ತದೆ" ಎಂದು ಹೇಳಿದರು.

ಹೈ-ಕರ್ನಾಟಕ ಭಾಗದ ನೌಕರರಿಗೆ 10 ವರ್ಷ ವರ್ಗಾವಣೆ ಇಲ್ಲಹೈ-ಕರ್ನಾಟಕ ಭಾಗದ ನೌಕರರಿಗೆ 10 ವರ್ಷ ವರ್ಗಾವಣೆ ಇಲ್ಲ

 Hyderabad Karnataka To Be Named As Kalyana Karnataka

ಹೈದರಾಬಾದ್-ಕರ್ನಾಟಕದ ವ್ಯಾಪ್ತಿಗೆ ಬರುವ ಜಿಲ್ಲೆಗಳಿಗೆ 371ಜೆ ಅಡಿ ವಿಶೇಷ ಸ್ಥಾನಮಾನ ಸಿಗುತ್ತಿದೆ. ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಸೇರುತ್ತವೆ.

ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ನಿಜಾಮರಿಂದ : ಖರ್ಗೆಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ನಿಜಾಮರಿಂದ : ಖರ್ಗೆ

ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಬಗ್ಗೆ ತೀರ್ಮಾನ ಕೈಗೊಳ್ಳಲು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗಿದೆ. ಇನ್ನು ಮುಂದೆ ಅದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಾಗಿ ಬದಲಾಗಲಿದೆ.

ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂದು ಹೈದರಾಬಾದ್ ಕರ್ನಾಟಕ ಭಾಗದ 41 ಶಾಸಕರು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಂಡಿದೆ.

English summary
In a cabinet meeting Karnataka government decided to change Hyderabad-Karnataka name as Kalyana Karnataka said Law Minister J.C.Madhuswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X