ಎಚ್.ಡಿ ಕುಮಾರಸ್ವಾಮಿ ಹೇಳಿಕೆ ಸ್ವೀಕಾರ ಮಾಡುತ್ತೇನೆ: ಜಿ. ಪರಮೇಶ್ವರ್
ಬೆಂಗಳೂರು: ಬಳ್ಳಾರಿ ಪ್ರಕರಣ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಿಯಾಕ್ಟ್ ಮಾಡಿದ್ದಾರೆ. ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮಾರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ ಎಂದು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ ಎಂದು ಅವರಿಗೆ ಹೇಳಬಯಸುತ್ತೇನೆ. 38 ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮಾರ್ಥ್ಯ ಮತ್ತು ವ್ಯಕ್ತಿತ್ವನೂ ಅವರಿಗೆ ಗೊತ್ತಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದರು.
ಹುಬ್ಬಳ್ಳಿ ಘಟನೆಯ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ನಾವು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮಹಿಳೆಯೇ ಆ ರೀತಿ ಮಾಡಿಕೊಂಡಿದ್ದಾರೆ ಎನ್ನುವ ಸ್ಪಷ್ಟನೆಯನ್ನು ಕಮಿಷನರ್ ನೀಡಿದ್ದಾರೆ. ಕಮಿಷನರ್ ಸ್ಪಷ್ಟಪಡಿಸಿದ ಮೇಲೆ ಅದಕ್ಕಿಂತ ಇನ್ನೇನು ಬೇಕಾಗಿದೆ. ಎಲ್ಲದರಲ್ಲೂ ರಾಜಕೀಯ ಮಾಡುವುದು ಒಳ್ಳೆಯದಲ್ಲ. ಹೆಣ್ಣುಮಗಳ ವಿಚಾರವನ್ನು ಕೈಗೆತ್ತಿಕೊಂಡು ರಾಜಕೀಯ ಮಾಡುವುದು ಸರಿ ಕಾಣುವುದಿಲ್ಲ ಎಂದು ಹೇಳಿದರು.
ಯಾವ ಪಕ್ಷದವನ್ನು ಅವರ ರಾಜಕೀಯ ಪಕ್ಷದ ಹಿನ್ನೆಲೆಯಲ್ಲಿ ಟಾರ್ಗೆಟ್ ಮಾಡುವುದಿಲ್ಲ. ಪೊಲೀಸರು ಆ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ, ಮಾಡಕೂಡದು. ಇದಕ್ಕೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ. ಯಾವುದೇ ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಅಕ್ರಮ ಬಾಂಗ್ಲಾ ವಲಿಸಗರನ್ನು ಹಿಡಿದು, ಗಡಿಪಾರು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಪ್ರಕರಣಗಳನ್ನು ಮಾಡಿದ್ದೇವೆ. ಬಾಂಗ್ಲಾ ದೇಶದವರು ರಾಜ್ಯದಲ್ಲಿ ಅನಧಿಕೃತವಾಗಿ ಎಲ್ಲಿಯೇ ಇದ್ದರು ಪತ್ತೆ ಹಚ್ಚಿ, ಗಡಿಪಾರು ಮಾಡುತ್ತೇವೆ ಎಂದು ಹೇಳಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications