Karnataka BJP State President: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಫೈಟ್;‌ ಬಿ ವೈ ವಿಜಯೇಂದ್ರ ಬೆಂಬಲ ಯಾರಿಗೆ?

ಬೆಂಗಳೂರು, ಜುಲೈ 17: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಮತ್ತೆ ಚೇತರಿಸಿಕೊಳ್ಳುತ್ತಿದೆ. ಬಿಜೆಪಿ ಪಾಳಯದಲ್ಲಿ ನೂತನ ಸಾರಥಿ ಆಯ್ಕೆ ವಿಚಾರ ಚರ್ಚೆಯಾಗುತ್ತಿದ್ದು, ಎರಡು ಕ್ಷೇತ್ರದಲ್ಲಿ ಸೋಲು ಕಂಡ ಮಾಜಿ ಸಚಿವ ವಿ ಸೋಮಣ್ಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

ಇನ್ನೂ ಬಿಜೆಪಿ ಪಾಳಯದಲ್ಲಿ ನೂತನ ಸಾರಥಿ ಆಯ್ಕೆ ವಿಚಾರವಾಗಿ ಹಲವು ನಾಯಕರು ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ ನಲ್ಲಿದ್ದು, ರಾಜ್ಯಾಧ್ಯಕ್ಷ ಸ್ಥಾನವನ್ನ ಪಡೆಯುವಲ್ಲಿ ವಿ ಸೋಮಣ್ಣ ಬಿಜೆಪಿ ಹೈಕಮಾಂಡ್‌ ನಾಯಕರನ್ನ ಭೇಟಿ ಮಾಡಿದ್ದಾರೆ ಎನ್ನಲಾಗಿದ್ದು, ಸೋಮಣ್ಣ ಪರ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಬ್ಯಾಟೀಂಗ್‌ ಬೀಸಿದ್ದಾರೆ.

I Also Support If V Somanna Is Given The Post Of State President Says BY Vijayendra

ಹೌದು, ಈ ಕುರಿತು ಸೋಮವಾರ ವಿಧಾನಸೌಧದಲ್ಲಿ ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಕೊಡಲಿ ನನ್ನ ಬೆಂಬಲವೂ ಇದೆ ಎಂದು ಹೇಳಿದ್ದಾರೆ.

ಬೆಂಗಳೂರು ಮಹಾನಗರದಲ್ಲಿ ದೇಶದ ಎಲ್ಲಾ ವಿಪಕ್ಷಗಳು ಒಗ್ಗೂಡಿ ಸಭೆ ಮಾಡುತ್ತಿವೆ. ದೇಶದ ವಿಪಕ್ಷಗಳ ಕಥೆ ಹೇಗಾಗಿದೆ ಅಂದ್ರೆ. ಎತ್ತು ಏರಿಗೆ ಎಳೆದ್ರೆ, ಕೋಣ ನೀರಿಗೆ ಎಳೀತು ಅಂತ, ಅಂತಹ ಪರಿಸ್ಥಿತಿ ವಿಪಕ್ಷಗಳಿಗೆ ಆಗಿದೆ. ಮೋದಿಜಿ ನಾಯಕತ್ವ ಜಗತ್ತು ಕೊಂಡಾಡುತ್ತಿವೆ. 20ಕ್ಕೂ ಹೆಚ್ಚು ರಾಷ್ಟ್ರಗಳು ಅತ್ಯುನ್ನತ ನಾಗರೀಕ ಪ್ರಶಸ್ತಿ ನೀಡಿದೆ. ದೇಶದ ವಿಪಕ್ಷಗಳಿಗೆ ದೇಶ ಕಟ್ಟುವ ಚಿಂತನೆ ಇಲ್ಲ. ಹೇಗಾದ್ರೂ ಮಾಡಿ ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನುವ ಚಿಂತನೆಯನ್ನ ಇಟ್ಟುಕೊಂಡಿದ್ದಾರೆ.

ಮತ್ತೆ ಮೋದಿ ಪ್ರಧಾನಿ ಆಗಬಾರದು ಅನ್ನೋ ಒನ್ ಲೈನ್ ಅಜೆಂಡಾ ಇವರದ್ದು. ಅವರಿಗೆ ಶುಭವಾಗಲಿ, ನೀವೇನೇ ಮಾಡಿದ್ರು ಜನ ಇದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮೂರನೇ ಬಾರಿ ಮೋದಿ ಪ್ರಧಾನಿ ಆಗುವುದನ್ನ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

I Also Support If V Somanna Is Given The Post Of State President Says BY Vijayendra

ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ನನಗೂ ಆ ವಿಚಾರ ಗೊತ್ತಿಲ್ಲ.ಮಾಧ್ಯಮದಲ್ಲಿ ನೋಡಿ ತಿಳಿದುಕೊಂಡೆ‌, ನಾನು ಮೊದಲ ಬಾರಿ ಶಾಸಕನಾಗಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಳ್ಳಲಿ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

ಮಳೆ ಕೊರತೆ, ರೈತರ ಆತ್ಮಹತ್ಯೆಯ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ಹಿರಿಯ ನಾಯಕರ ಜೊತೆ ಚರ್ಚೆ ಮಾಡುತ್ತೇವೆ. ಸದನದಲ್ಲಿ ಇದು ಚರ್ಚೆಯಾಗಬೇಕು, ಮಳೆ‌ ಮುಂದುವರೆದು ಹೋಗುತ್ತದೆ. ರೈತರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಚರ್ಚೆ ಮಾಡಬೇಕು, ಆಡಳಿತ ಪಕ್ಷ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+