Get Updates
Get notified of breaking news, exclusive insights, and must-see stories!

ಹಣೆಯಲ್ಲಿ ಬರೆದಿದ್ದರೆ ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್ ಹೀಗೆ ಹೇಳಿದ್ಯಾಕೆ?

ಬೆಂಗಳೂರು, ಅಕ್ಟೋಬರ್29: ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದ್ದಾರೆ.

ಸಹೋದರನ ರಾಜಕೀಯ ಭವಿಷ್ಯ ಬದಲಾಗಲಿದೆ ಹಾಗೂ ಅಣ್ಣನನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡುವ ಆಸೆಯಿದೆ ಎನ್ನುವ ಹಿಂದಿನ ಹೇಳಿಕೆ ಕುರಿತು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ, ಆಸೆಯಿದೆ ಎಂದು ಹೇಳಿದ್ದೆ. ಅವರ ಹಣೆಯಲ್ಲಿ ‌ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಡಿಸಿಎಂ ಆಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

I also want DK Shivakumar to be the Chief Minister Says DK Suresh

ಪಕ್ಷನಿಷ್ಠರಾಗಿ ಡಿ.ಕೆ. ಶಿವಕುಮಾರ್ ನಡೆದುಕೊಳ್ಳುತ್ತಿದ್ದಾರೆ. ಅವರು ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಅವರು ಗಮನ ಹರಿಸುತ್ತಿಲ್ಲವಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಸುರೇಶ್‌ ಅವರು, ಪಕ್ಷದ ಅಧ್ಯಕ್ಷರಾಗಿ ಎಲ್ಲರನ್ನೂ ಸಮಾನವಾಗಿ ನೋಡಬೇಕಿರುವುದು ಅವರ ಕರ್ತವ್ಯ ಎಂದು ಹೇಳಿದರು.

ನವೆಂಬರ್ 15 ರ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ನನಗೆ ನವೆಂಬರ್ ಎಂದರೆ ಕನ್ನಡ ರಾಜ್ಯೋತ್ಸವ ನೆನಪಾಗುತ್ತದೆ. ನಾವು, ನೀವೆಲ್ಲರೂ ಸೇರಿ ಈ ಹಬ್ಬವನ್ನು ಆಚರಣೆ ಮಾಡೋಣ. ಮಿಕ್ಕ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಯವರು, ಎಐಸಿಸಿ ನಾಯಕರಿಗೆ ಕೇಳಬೇಕು ಎಂದರು.

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಅನುಮತಿ ವಿಚಾರಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ ಕೆ ಸುರೇಶ್‌ ಅವರು, ಆರ್‌ ಎಸ್ ಎಸ್ ಪಥಸಂಚಲ‌ನಕ್ಕೆ ಯಾವುದೇ ಕಡಿವಾಣ ಹಾಕಿಲ್ಲ. ದೊಣ್ಣೆ ಹಿಡಿದುಕೊಂಡು ಮಾಡುವ ಪಥ ಸಂಚಲನಕ್ಕೆ ವಿರೋಧವಿದೆ. ದೊಣ್ಣೆ ಹಿಡಿದುಕೊಂಡು ಮಾಡುವ ಪಥಸಂಚಲನ ಹಿಂದಿನ ಕಾಲದಲ್ಲಿ ಸರಿ ಎನಿಸುತ್ತಿತ್ತು. ಬೇರೆಯವರು ಇದೇ ಸಂದರ್ಭದಲ್ಲಿ ಲಾಠಿ ಹಿಡಿದು ಓಡಾಡುವುದಕ್ಕೆ ಅವಕಾಶ ನೀಡುತ್ತೀರಾ ಎನ್ನುವುದು ಇಲ್ಲಿನ ಪ್ರಶ್ನೆ" ಎಂದರು.

ಇವರು ದೊಣ್ಣೆ ಹಿಡಿದು ಓಡಾಡುತ್ತಾರೆ. ಬೇರೆ ಸಮುದಾಯ, ಸಂಘಟನೆಗಳು ಇದೇ ಕೆಲಸ ಮಾಡಿದರೆ ಆಗ ಏನಾಗುತ್ತದೆ ಎನ್ನುವುದನ್ನು ಚಿಂತನೆ ಮಾಡಬೇಕಾದ ಕಾಲವಿದು. ಅದರ ಬಗ್ಗೆ ಸ್ಪಷ್ಟನೆ ನೀಡಬೇಕಿದೆ. ಈ ಮೊದಲು ಆರ್ ಎಸ್ ಎಸ್ ನವರು ಚಡ್ಡಿ ಹಾಕುತ್ತಿದ್ದರು. ಈಗ ಪ್ಯಾಂಟ್ ಧರಿಸುತ್ತಿದ್ದಾರೆ. ಅಂದರೆ ಬದಲಾವಣೆಗಳನ್ನು ಅವರೂ ಸಹ ಮಾಡಿಕೊಳ್ಳಬೇಕು. ನಾನು ಅವರಿಗೆ ಹೇಳುವಷ್ಟು ದೊಡ್ಡವನಲ್ಲ. ಅವರೇ ಇದರ ಬಗ್ಗೆ ಅರಿತುಕೊಂಡರೆ ಒಳ್ಳೆಯದು ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+