ಡಿಸಿಎಂ ಹುದ್ದೆಗೆ ನಾನು ಆಕಾಂಕ್ಷಿ ಅಂದ್ರು ರೋಷನ್ ಬೇಗ್

ಬೆಂಗಳೂರು, ಮಾ.4 : ಕರ್ನಾಟಕದಲ್ಲಿ ದಲಿತ ಮುಖ್ಯಮಂತ್ರಿ ಚರ್ಚೆ ತಣ್ಣಗಾಗುತ್ತಿದ್ದಂತೆ ಉಪ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಆರಂಭವಾಗಿದೆ. 'ನಾನ ಸಹ ಡಿಸಿಎಂ ಸ್ಥಾನದ ಆಕಾಂಕ್ಷಿ' ಎಂದು ವಾರ್ತಾ ಸಚಿವ ರೋಷನ್ ಬೇಗ್ ಹೇಳಿದ್ದಾರೆ.

ಬುಧವಾರ ವಾರ್ತಾ ಮತ್ತು ಮೂಲ ಸೌಕರ್ಯ ಸಚಿವ ರೋಷನ್ ಬೇಗ್ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದರು. ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಹೈಕಮಾಂಡ್ ಉಪಮುಖ್ಯಮಂತ್ರಿ ಹುದ್ದೆ ನೀಡುವುದಾದದರೆ ನನ್ನ ಹೆಸರನ್ನು ಪರಿಗಣಿಸಲಿ' ಎಂದು ಹೇಳಿದರು. [ಸಂಚಲನ ಮೂಡಿಸಿದ ಸಚಿವ ರೋಷನ್ ಬೇಗ್ ಹೇಳಿಕೆ]

Roshan Baig

'ದಲಿತರಿಗೆ ಸಿಎಂ ಪಟ್ಟ ನೀಡುವ ಕುರಿತು ಹೈಕಮಾಂಡ್ ನಾಯಕರು ತೀರ್ಮಾನ ಕೈಗೊಳ್ಳಲಿ. ಡಿಸಿಎಂ ಹುದ್ದೆಯನ್ನು ನೀಡುವುದಾದರೆ ತಾವು ನಿಭಾಯಿಸಲು ಸಿದ್ಧ ಎಂದು ಹೇಳಿದ ಸಚಿವರು, ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ, ಎಲ್ಲರಿಗೂ ಅಧಿಕಾರದ ಆಸೆ ಇರುತ್ತದೆ' ಎಂದು ತಿಳಿಸಿದರು.

ಇದೇ ಮೊದಲಲ್ಲ : ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವ ರೋಷನ್ ಬೇಗ್, ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಹಿಂದೆಯೂ ಅವರು ಈ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದರು. [ಡಿಸಿಎಂ ಹುದ್ದೆ ಬಗ್ಗೆ ಸಿಎಂ ನಿರ್ಧಾರವೇ ಅಂತಿಮ]

'ನಾನು ಹಲವಾರು ಖಾತೆಗಳನ್ನು ನಿಭಾಯಿಸಿದ್ದೇನೆ. ಉಪಮುಖ್ಯಮಂತ್ರಿ ಯಾಕಾಗಬಾರದು?' ಎಂದು ರೋಷನ್ ಬೇಗ್ ಅವರು ಡಿಸೆಂಬರ್‌ ತಿಂಗಳಿನಲ್ಲಿ ಪ್ರಶ್ನಿಸಿ ರಾಜಕೀಯವಲಯದಲ್ಲಿ ಸಂಚಲನ ಮೂಡಿಸಿದ್ದರು.

ಡಿಸಿಎಂ ಹುದ್ದೆ ಇಲ್ಲ : ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಬೇಕು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಡಿಸಿಎಂ ಮಾಡಬೇಕು ಎಂಬ ಒತ್ತಾಯ ಕೇಳಿಬಂದಾಲೆಲ್ಲಾ, ಸಿಎಂ ಸಿದ್ದರಾಮಯ್ಯ ಡಿಸಿಎಂ ಸ್ಥಾನದ ಸೃಷ್ಟಿಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಏನು ಪ್ರತಿಕ್ರಿಯೆ ನೀಡುವರೋ ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+