ಬೆಂಗಳೂರು ಉತ್ತರದಿಂದ ಸ್ಪರ್ಧೆ : ಎಚ್.ಎಂ.ರೇವಣ್ಣ ಹೇಳುವುದೇನು?
Recommended Video

ಬೆಂಗಳೂರು, ಜನವರಿ 03 : '2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ' ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಹೇಳಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ ಬಹಳ ಗಮನ ಸೆಳೆದಿದೆ. ಮೂರು ಪಕ್ಷಗಳು ಕ್ಷೇತ್ರದ ಮೇಲೆ ಕಣ್ಣಿಟ್ಟಿವೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕ್ಷೇತ್ರದ ಹಾಲಿ ಸಂಸದರು. ಈ ಬಾರಿಯ ಚುನಾವಣೆಯಲ್ಲಿಯೂ ಅವರು ಪಕ್ಷದ ಅಭ್ಯರ್ಥಿ. ಆದರೆ, ಕ್ಷೇತ್ರವನ್ನು ವಶಕ್ಕೆ ಪಡೆದುಕೊಳ್ಳಬೇಕು ಎಂದು ಕಾಂಗ್ರೆಸ್, ಜೆಡಿಎಸ್ ತಂತ್ರ ರೂಪಿಸುತ್ತಿವೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ. ಎರಡೂ ಪಕ್ಷಗಳ ಮೈತ್ರಿಯಾದ ಬಳಿಕ ಕ್ಷೇತ್ರದಿಂದ ಯಾರು ಕಣಕ್ಕಿಳಿಯಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಎಚ್.ಡಿ.ದೇವೇಗೌಡರು ಕಣಕ್ಕಿಳಿದರೆ ಕ್ಷೇತ್ರ ದೇಶದ ಗಮನ ಸೆಳೆಯಲಿದೆ.....

ಎಚ್.ಎಂ.ರೇವಣ್ಣ ಹೇಳುವುದೇನು?
'ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ವಿಧಾನ ಪರಿಷತ್ ಅವಧಿಯೂ ಮುಗಿಯುತ್ತಾ ಬಂದಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಟಿಕೆಟ್ ನೀಡುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದೇನೆ. ಸಂಬಂಧಪಟ್ಟ ನಾಯಕರ ಜೊತೆ ಸಮಾಲೋಚನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ' ಎಂದು ಎಚ್.ಎಂ.ರೇವಣ್ಣ ಹೇಳಿದ್ದಾರೆ.

ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ
'ಮಾಗಡಿ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳನ್ನು ಪಕ್ಷದ ವರಿಷ್ಠರ ಸೂಚನೆಯಂತೆ ಬೇರೆಯವರಿಗೆ ಬಿಟ್ಟುಕೊಟ್ಟು ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಿಂದ ಕಣಕ್ಕಿಳಿದಿದ್ದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ಕ್ಷೇತ್ರಗಳ ಪೈಕಿ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಾಗಿದ್ದು, ಆದ್ದರಿಂದ, ಟಿಕೆಟ್ ನೀಡುವಂತೆ ಮನವಿ ಮಾಡಲಾಗಿದೆ' ಎಂದು ಎಚ್.ಎಂ.ರೇವಣ್ಣ ಹೇಳಿದರು.

ಎಚ್.ಡಿ.ದೇವೇಗೌಡರ ಕಣ್ಣು
ಮತ್ತೊಂದು ಕಡೆ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಜೆಡಿಎಸ್ ಪಕ್ಷವೂ ಕಣ್ಣಿಟ್ಟಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟು, ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ಆದರೆ, ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ.

ಸದಾನಂದ ಗೌಡರಿಗೆ ಸವಾಲು
2014ರ ಚುನಾವಣೆಯಲ್ಲಿ ಬಿಜೆಪಿಯ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ 718326 ಮತಗಳನ್ನು ಪಡೆದು ಜಯಗಳಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರು ಸಹ ಆದರು. ಈ ಬಾರಿ ಅವರಿಗೆ ಪ್ರಬಲ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications