'ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ' : ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಎಚ್ಡಿಕೆ

Recommended Video

      ನಾನು ಕಾಂಗ್ರೆಸ್ ಮುಲಾಜಿನಲ್ಲಿದೀನಿ ಎಂಬ ಎಚ್ ಡಿ ಕೆ ಹೇಳಿಕೆಗೆ ಅವರು ಕೊಟ್ಟ ಸ್ಪಷ್ಟನೆ ಹೀಗಿದೆ

      ಬೆಂಗಳೂರು, ಮೇ 28 : 'ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ನನಗೆ ಬೆಂಬಲ ನೀಡಿದ್ದಾರೆ, ಬೆಂಬಲದ ಮುಲಾಜಿನಲ್ಲಿದ್ದೇನೆ' ಎಂದು ಹೇಳಿದ್ದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

      ಸೋಮವಾರ ದೆಹಲಿಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನಗಳಿಲ್ಲ. ಎರಡೂ ಪಕ್ಷದವರು ಖಾತೆಗಳನ್ನು ಹಂಚಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ' ಎಂದರು.

      'ರಾಜ್ಯವನ್ನು ಅಭಿವೃದ್ಧಿ ಮಾಡುವ ಜವಾಬ್ದಾರಿ ನನ್ನ ಮೇಲಿದೆ. ನಾನು ಕಾಂಗ್ರೆಸ್ ನಾಯಕರ ಅನುಮತಿ ಪಡೆದು ಕೆಲಸ ಮಾಡಬೇಕು. ಅವರ ಅನುಮತಿ ಇಲ್ಲದೇ ನಾನು ಏನೂ ಮಾಡುವಂತಿಲ್ಲ. ಅವರು ನಮಗೆ ಬೆಂಬಲ ನೀಡಿದ್ದಾರೆ' ಎಂದು ಕುಮಾರಸ್ವಾಮಿ ಹೇಳಿದರು.

      I am at mercy of Congress they given me support says HD Kumaraswamy

      'ನಾನು ರಾಜ್ಯದ 6 ಕೋಟಿ ಜನರ ಮುಲಾಜಿನಲ್ಲಿಲ್ಲ. ಕಾಂಗ್ರೆಸ್ ಮುಲಾಜಿನಲ್ಲಿದ್ದೇನೆ' ಎಂದು ಭಾನುವಾರ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಈ ಹೇಳಿಕೆ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆದಿತ್ತು. ಇಂದು ಈ ಹೇಳಿಕೆಗೆ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

      'ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ನನಗೆ ಬೆಂಬಲ ನೀಡಿದ್ದಾರೆ, ಬೆಂಬಲದ ಮುಲಾಜಿನಲ್ಲಿದ್ದೇನೆ' ಎಂದು ಹೇಳಿದ್ದೆ ಎಂದು ಕುಮಾರಸ್ವಾಮಿ ದೆಹಲಿಯಲ್ಲಿ ಸ್ಪಷ್ಟಪಡಿಸಿದರು.

      'ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿದೆ, ಮೈತ್ರಿಗೆ ಧಕ್ಕೆ ಬಾರದಂತೆ ಖಾತೆಗಳನ್ನು ಹಂಚಿಕೆ ಮಾಡಲಾಗುತ್ತದೆ. ಎಐಸಿಸಿ ಅಧ್ಯಕ್ಷರು ಬಂದ ಬಳಿಕ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+