karnataka assembly elections 2023:ನಾನೇ ತುಮಕೂರು ನಗರದಿಂದ ಬಿಜೆಪಿ ಅಭ್ಯರ್ಥಿ: ಜ್ಯೋತಿ ಗಣೇಶ್
ಬಿಜೆಪಿ ಟಿಕೆಟ್ ಘೋಷಣೆಗೂ ಮೊದಲೇ ನಾನೇ ಅಭ್ಯರ್ಥಿ ಎಂದು ಜ್ಯೋತಿ ಗಣೇಶ್ ಹೇಳಿದ್ದಾರೆ.
ತುಮಕೂರು,ಫೆಬ್ರವರಿ22: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕು ಎಂದು ರಾಜ್ಯ ಬಿಜೆಪಿ ತಯಾರಿಯನ್ನ ನಡೆಸಿದ್ದು, ಬಿಜೆಪಿ ಟಿಕೆಟ್ ಘೋಷಣೆಗೂ ಮೊದಲೇ ನಾನೇ ತುಮಕೂರು ನಗರದಿಂದ ಬಿಜೆಪಿ ಅಭ್ಯರ್ಥಿ ಎಂದು ಶಾಸಕ ಜ್ಯೋತಿ ಗಣೇಶ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನು ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂಬ ವದಂತಿಗಳು ಹರಡಿದ್ದು, ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ನಗರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿಯಾಗಿರುತ್ತೇನೆ. ಏಪ್ರಿಲ್ ತಿಂಗಳ ವರೆಗೆ ಕಾದು ನೋಡಿ. ನನ್ನ ಅಭಿವೃದ್ಧಿ ಪರಿಗಣಿಸಿ ಪಕ್ಷ ಮುಖಂಡರು ನನಗೆ ಟಿಕೆಚ್ ನೀಡಲಿದ್ದಾರೆ. ಟಿಕೆಚ್ ನೀಡುವಾಗ ಯಾರು ಗೆಲ್ಲುತ್ತಾರೆ ಎಂಬುದನ್ನು ಸಹ ಪಕ್ಷ ಪರಿಗಣನೆಗೆ ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಇನ್ನೂ 2018ರಲ್ಲಿ ನನಗೆ ಟಿಕೆಚ್ ನೀಡುವಾಗ ಪ್ರತಿರೋಧ ಇದ್ದರೂ ಗೆದ್ದು ಬಂದಿದ್ದೇನೆ. 2018 ರಲ್ಲಿ ಯಡಿಯೂರಪ್ಪನವರು ಟಿಕೆಟ್ ಕೊಟ್ಟು ಆಶೀರ್ವಾದ ಮಾಡಿದರು. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದದಿಂದ ಗೆದ್ದಿದ್ದೇನೆ. ಹಾಗೆಯೇ ಚುನಾವಣಾ ಸಂದರ್ಭದಲ್ಲಿ ಕೇಂದ್ರ ನಾಯಕರಾದ ಅಮಿತ್ ಷಾ, ಮೋದಿ, ಹಾಗೂ ಜೆ ಪಿ ನಡ್ಡಾ ಅವರು ಬಂದು ನಮ್ಮನ್ನು ಟೇಕಾಫ್ ಮಾಡಿದ್ದರು.
ರಾಷ್ಟ್ರ ರಾಜಕೀಯದತ್ತ ಒಲವು ತೋರಿದಿರಾ ಎಂಬ ವಿಚಾರವಾಗಿ ಮಾತನಾಡಿ, ಲೋಕಸಭೆಗೆ ಹೋಗುವಂತಹ ಯಾವುದೇ ಸನ್ನಿವೇಶವಿಲ್ಲ. ನನ್ನ ಇದುವರೆಗೆ ಯಾರೂ ಕೇಳಿಲ್ಲ. ಅಂತಹ ಯಾವುದೇ ಚರ್ಚೆ ಕೂಡ ಆಗಿಲ್ಲ. ಆ ರೀತಿಯಾಗಿದ್ದರೆ ನಾನೇ ಹೇಳುತ್ತಿದ್ದೆ. ನಾನು ಇಲ್ಲೇ ಇದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಕೆಲಸ ಮಾಡುವುದಾಗಿ ತಿಳಿಸಿದರು.

ಮಾರ್ಚ್ 5 ರಂದು ಜಿಲ್ಲೆಗೆ ಸಿಎಂ ಭೇಟಿ: ಅಭಿವೃದ್ದಿ ಕಾರ್ಯಕ್ರಗಳಿಗೆ ಚಾಲನೆ
ತುಮಕೂರು ನಗರದಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 5 ರಂದು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಜ್ಯೋತಿ ಗಣೇಶ್ ಹೇಳಿದ್ದಾರೆ.
ಮಹಾತ್ಮಗಾಂಧಿ ಕ್ರೀಡಾಂಗಣ, ಡಿಜಿಟಲ್ ಲೈಬ್ರರಿ, ಅಮಾನಿಕೆರೆ ಅಭಿವೃದ್ಧಿ, ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚು ಒತ್ತು ನೀಡಿ ಅಭಿವೃದ್ಧಿ ಮಾಡಲಾಗಿದೆ. ಇನ್ನೂ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಸರ್ಕಾರಿ ಪ್ರೌಢಶಾಲೆ, ಹಾಗೂ ಸಿದ್ಧಗಂಗಾ ಮಠದ ವಸ್ತುಪ್ರದರ್ಶನ ಆವರಣದಲ್ಲಿ ಶಾಲಾ ಕಟ್ಟಡ ನಿರ್ಮಾಣ, ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾ ಸಂಕೀರ್ಣ, ತುಮಕೂರು ನಗರದಲ್ಲಿ ಜಿಮ್ನಾಸ್ಟಿಕ್ ಸೆಂಟರ್, ನಗರದ ಸರ್ಕಾರಿ ಪಿ.ಯು ಕಾಲೇಜಿನ ಆವರಣದಲ್ಲಿ ಹಿರಿಯ ನಾಗರೀಕರಿಗೆ ಮತ್ತು ಮಕ್ಕಳಿಗೆ ಜಿಮ್ ಹಾಗೂ ಮತ್ತು ಆಟೋಪಕರಣ ಅಳವಡಿಕೆ, ಕೋರ್ಚ್ ಸೇರಿದಂತೆ 14 ಸ್ಥಳಗಳನ್ನು ಅಭಿವೃದ್ಧಿಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.












Click it and Unblock the Notifications