Janardhana Reddy : ಬಳ್ಳಾರಿ ಪ್ರವೇಶಿಸಲು ಕೊನೆಗೂ ಸುಪ್ರೀಂ ಕೋರ್ಟ್ ಅನುಮತಿ: ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್
ಬೆಂಗಳೂರು, ಸೆಪ್ಟೆಂಬರ್ 30: ನವರಾತ್ರಿ ಅಕ್ಟೋಬರ್ 3ರಂದು ಆರಂಭವಾಗಲಿದೆ. ಇದೇ ಗುರುವಾರ ಬೆಳಿಗ್ಗೆ ಬಳ್ಳಾರಿಗೆ ಭೇಟಿ ಕೊಡಲಿದ್ದೇನೆ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 14 ವರ್ಷಗಳ ನಂತರ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಬಂದಿದೆ. ಕೊನೆಯ ಉಸಿರು ಇರುವವರೆಗೂ ಬಳ್ಳಾರಿಯಲ್ಲಿ ಇರುತ್ತೇನೆ ಎಂದು ಭಾವುಕರಾಗಿ ನುಡಿದರು. ಬಳ್ಳಾರಿಯಲ್ಲಿ ವಿವಿಧ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವುದಾಗಿ ತಿಳಿಸಿದರು.

ಜನ್ಮ ಸ್ಥಳ ಪ್ರತಿಯೊಬ್ಬನಿಗೂ ಮುಖ್ಯವಾಗುತ್ತದೆ. ಯಾವುದೇ ಊರಿಗಿಂತ ನಮ್ಮ ಹುಟ್ಟೂರು ನಮಗೆ ಮೇಲು ಎಂಬುದು ಹಿರಿಯರ ಮಾತು. ಮೊದಲು ಗಂಗಾವತಿಗೆ ತೆರಳಿ, ಹನುಮಂತನ ದರ್ಶನ ಪಡೆದು ರಾಜಕೀಯ ಪುನರ್ ಜನ್ಮ ನೀಡಿದ ಜನರ ಜೊತೆ ಮಾತನಾಡುವೆ ಎಂದು ತಿಳಿಸಿದರು.
ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಮುಂದೆ ನಾನು ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸಲಿದೆ. ಅದರಂತೆ ನಡೆದುಕೊಳ್ಳುವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಕಷ್ಟಗಳು ಬಂದಾಗ, ಶ್ರೀಮನ್ನಾರಾಯಣ, ಶ್ರೀ ರಾಮಚಂದ್ರನನ್ನು ನಾವು ನೆನೆಸಿಕೊಳ್ಳುತ್ತೇವೆ. ಅವರಿಗೇ ಸಂಕಷ್ಟಗಳು ತಪ್ಪಿಲ್ಲ ಎಂದ ಮೇಲೆ ನಾವು ಯಾವ ಲೆಕ್ಕಕ್ಕೆ ಅಂದುಕೊಳ್ಳುತ್ತೇವೆ ಎಂದು ವಿಶ್ಲೇಷಿಸಿದರು.
ಬಳ್ಳಾರಿಗೆ ಅನೇಕ ಒಳ್ಳೆಯ ಕೆಲಸ ಮಾಡಿದ್ದು, ಅದು ಜನರಿಗೂ ಗೊತ್ತಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ದೊಡ್ಡ ಪ್ರಮಾಣದ ಅಭಿವೃದ್ಧಿ ಕೆಲಸಗಳು ಆಗಿದ್ದವು. ಬಳ್ಳಾರಿಯ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಕನಸುಗಳಿವೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ಮುಂದಿನ ದಿನಗಳಲ್ಲಿ ಬಳ್ಳಾರಿ ಜನರ ಕನಸುಗಳನ್ನು ಈಡೇರಿಸಲು ಶ್ರಮಿಸುವೆ ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗಮಿಸಿದ್ದರು. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.
ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ. ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ ಮಾಡಲಾಗಿತ್ತು. ಅದರಲ್ಲಿ 2500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು. ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು. ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು. ಬನ್ನಿ ಎಂದು ಕರೆದಿದ್ದೆ ಎಂದು ತಿಳಿಸಿದರು.












Click it and Unblock the Notifications