Get Updates
Get notified of breaking news, exclusive insights, and must-see stories!

'ಸವದಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ನನಗೆ ಸಂತೋಷವಾಗಿದೆ' - ಬಸವರಾಜ ರಾಯರೆಡ್ಡಿ

'ಲಕ್ಷ್ಮಣ ಸವದಿ ನನಗೆ ಸುಮಾರು ವರ್ಷಗಳಿಂದ ಸ್ನೇಹಿತರು. ಜೊತೆಗೆ ಸವದಿ ನನ್ನ ಸಂಬಂಧಿಕರು ಆಗಿದ್ದಾರೆ. ಸವದಿ ಅವರು ರಾಜೀನಾಮೆ ನೀಡುತ್ತೇನೆ ಎಂದಾಗ ನಾನು ಕಾಂಗ್ರೆಸ್ ಪಕ್ಷ ಸೇರಲು ಸಲಹೆಯನ್ನು ನೀಡಿದೆ. ಇದರಿಂದ ಸವದಿ ಅವರೂ ಸಂತೋಷದಿಂದ ಒಪ್ಪಿಕೊಂಡರು. ಇದರಿಂದ ನನಗೆ ಸಂತೋಷವಾಗಿದೆ' ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಂಡಾಯದ ಪರ್ವ ಹೆಚ್ಚಾಗುತ್ತಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಈ ಪಟ್ಟಿಗೆ ಇದೀಗ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಲಕ್ಷ್ಮಣ ಸವದಿ ಕೂಡ ಸೇರ್ಪಡೆಗೊಂಡಿದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಇಂದೇ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

I am happy that Lakshmana Savadi has joined the Congress party - Basavaraj Rayareddy

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ರಾಯರೆಡ್ಡಿ, 'ಲಕ್ಷ್ಮಣ ಸವದಿಯವರು ಅಥಣಿಯಲ್ಲಿ ಸ್ಪರ್ಧೆ ಮಾಡುತ್ತಾರೆ. ಅವರು ಕಾಂಗ್ರೆಸ್ ಪಕ್ಷ ಸೇರಿದ್ದರಿಂದ ಬೆಳಗಾವಿಯಲ್ಲಿ ಮತ್ತಷ್ಟು ಕ್ಷೇತ್ರಗಳು ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ. ಬೆಳಗಾವಿಯಲ್ಲಿ 13-14 ಸೀಟ್ ಗೆಲ್ಲಿತ್ತೇವೆ' ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು ಬೆಂಗಳೂರಿನಲ್ಲಿ ಇಂದು ಸಮಾಲೋಚನೆ ನಡೆಸಿದರು. ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, 'ಲಕ್ಷ್ಮಣ್ ಸವದಿ ಅವರನ್ನು ಭೇಟಿ ಮಾಡಿದ್ದೇವೆ. ಸೌಹಾರ್ದಯುತವಾಗಿ ನಮ್ಮ ಮಾತುಕತೆ ನಡೆದಿದೆ. ಅವರು ಮಾಡಿದ ಹೋರಾಟ ನಾವೆಲ್ಲಾ ಗಮನದಲ್ಲಿ ಇಟ್ಟುಕೊಂಡಿದ್ದೇವೆ. ಲಕ್ಷ್ಮಣ ಸವದಿ ನಮ್ಮ ಕುಟುಂಬದ ಸದಸ್ಯರಾಗಲು ಒಪ್ಪಿದ್ದಾರೆ' ಎಂದು ಹೇಳಿದರು. ಇಂದು ಸಂಜೆ ನಾಲ್ಕು ಗಂಟೆಯ ಬಳಿಕ ಲಕ್ಷ್ಮಣ ಸವದಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.

ಇದರಿಂದಾಗಿ ಚುನಾವಣೆ ಹೊತ್ತಲ್ಲೇ ಕೇಸರಿ ಪಾಳಯಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ತೊರೆಯುತ್ತಿರುವವರ ಪಟ್ಟಿ ಬೆಳೆಯುತ್ತಾ ಸಾಗಿದೆ. ಇದರಿಂದ ಬಿಜೆಪಿಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ.

I am happy that Lakshmana Savadi has joined the Congress party - Basavaraj Rayareddy

ಲಕ್ಷ್ಮಣ ಸವದಿ ಪ್ರತಿಕ್ರಿಯೆ

''ನನ್ನ ಕನಸು ನನಸಿಗೆ ಸಾಥ್‌ ಕೊಡುವ, ನನಗೆ ಗೌರವ ಸಿಗುವ ಪಕ್ಷದಿಂದ ಅಥವಾ ಪಕ್ಷೇತರನಾಗಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದು ಶತಸ್ಸಿದ್ಧ,'' ಎಂದು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಹೇಳಿದ್ದಾರೆ. ಪಟ್ಟಣದಲ್ಲಿ ಗುರುವಾರ ಸಂಜೆ ನಡೆದ ಸ್ವಾಭಿಮಾನಿ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿ, ''ಈ ಬಾರಿ ಗೆದ್ದರೆ ಮಾತ್ರ ಸನ್ಮಾನ, ಹಾರಗಳನ್ನು ಸ್ವೀಕರಿಸುತ್ತೇನೆ. ಸೋತರೆ ಜೀವಮಾನವಿಡೀ ಹಾರ, ಸನ್ಮಾನ, ಶಾಲು ಸ್ವೀಕರಿಸುವುದಿಲ್ಲ. ನನ್ನ ಜೀವ ಹೋದ ಮೇಲೆ ಹಾರ ಹಾಕಿ,'' ಎಂದು ಶಪಥಗೈದರು.

'ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ, ಆದರೆ ಪಕ್ಷದ ಕೆಲ ಮುಖಂಡರು ದ್ರೋಹವೆಸಗಿದ್ದಾರೆ. ಹಲವು ರಾಷ್ಟ್ರೀಯ ನಾಯಕರು ಬಂದಾಗ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿಕ್ಕೂ ಅವಕಾಶ ನೀಡದೆ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ,'' ಎಂದು ನೋವು ತೋಡಿಕೊಂಡರು.

ರಾಜ್ಯ ಚುನಾವಣೆ ದಿನಾಂಕ

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+