ಸಾವಿನ ಭಯ ನನಗಿಲ್ಲ: ಗಾಂಧಿ, ಕಲಬುರ್ಗಿ, ಗೌರಿಯನ್ನು ಕೊಂದವರ ಸಂತಾನವದು- ಸಿದ್ದರಾಮಯ್ಯ ಹೇಳಿದ್ದೇನು? ಟ್ವೀಟ್‌ನಲ್ಲಿ ಆಕ್ರೋಶ,ಬೇಸರ

ಸಾವಿನ ಭಯ ನನಗಿಲ್ಲ. ಗಾಂಧಿ, ಕಲಬುರ್ಗಿ, ಗೌರಿಯನ್ನು ಕೊಂದವರ ಸಂತಾನವದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಆಕ್ರೋಶ, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಅವರ ಪೋಸ್ಟ್‌ನಲ್ಲಿ ಏನಿದೆ? ಓದಿ

ಬೆಂಗಳೂರು, ಫೆಬ್ರವರಿ 16: ಕೊಲೆಗಡುಕ ಮನಸ್ಥಿತಿಯ ಡಾ.ಅಶ್ವಥ್ ನಾರಾಯಣ್ ಅಂತಹವರು ಸಾರ್ವಜನಿಕ ಜೀವನದಲ್ಲಿ ಇರಲಿಕ್ಕೆ ನಾಲಾಯಕ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಗುರುವಾರ ಅವರ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

'ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸುತ್ತೇನೆ' ಎಂದು ಮಾಜಿ ಸಿಎಂ ಹೇಳಿದ್ದಾರೆ.

'ಜನತೆಯ ಮಾನ-ಪ್ರಾಣ ರಕ್ಷಣೆಯ ಹೊಣೆ ಸರ್ಕಾರದ್ದಾಗಿದೆ. ಇಂತಹ ಸಚಿವರು ತಾವೇ ಖುದ್ದಾಗಿ ಹತ್ಯೆಗೆ ಪ್ರಚೋದಿಸಿದರೆ? ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಇರುತ್ತದೆ? ಇದು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ಬಂದಿಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

I am not afraid of death: What did Siddaramaiah say about Ashwath Narayan Statement

'ಕೊಲೆಗಡುಕ ಮನಸ್ಥಿತಿಯ ಡಾ.ಅಶ್ವಥ್ ನಾರಾಯಣ್ ಅಂತಹವರು ಸಾರ್ವಜನಿಕ ಜೀವನದಲ್ಲಿ ಇರಲಿಕ್ಕೆ ನಾಲಾಯಕ್. ಇಂತಹವರು ಉನ್ನತ ಶಿಕ್ಷಣ ಸಚಿವರಾದರೇ? ಬಿಜೆಪಿ ಸಮಾಜಕ್ಕೆ ಯಾವ ಸಂದೇಶ ಕೊಡಲಿಕ್ಕೆ ಹೊರಟಿದೆ?' ಎಂದು ಕೇಳಿದ್ದಾರೆ.

'ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿಯೇ ಅವರ ಬೌದ್ಧಿಕ ದಿವಾಳಿತನದ ಪ್ರತೀಕ. ಸೈದ್ಧಾಂತಿಕವಾಗಿ ನನ್ನನ್ನು ಎದುರಿಸುವ ಇಲ್ಲವೇ ಸಾಧನೆಯ ಆಧಾರದಲ್ಲಿ ಮತ ಕೇಳುವ ಧಮ್-ತಾಕತ್ ಅವರಿಗೆ ಇಲ್ಲ. ಅವರದು ಶೂನ್ಯ ಸಾಧನೆ ಮತ್ತು ಪೊಳ್ಳು ಸಿದ್ದಾಂತ' ಎಂದು ಟ್ವೀಟ್‌ ಮಾಡಿದ್ದಾರೆ.

I am not afraid of death: What did Siddaramaiah say about Ashwath Narayan Statement

'ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು' ಎಂದು ಹೇಳಿದ್ದಾರೆ.

'ಸಾವಿನ ಭಯ ನನಗಿಲ್ಲ. ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು. ಈ ಬಗ್ಗೆ ಜನ ಎಚ್ಚರಗೊಳ್ಳಬೇಕು' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಮಂಡ್ಯದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಡಾ ಸಿಎನ್‌ ಅಶ್ವತ್ಥ್‌ ನಾರಾಯಣ ಅವರು, 'ಟಿಪ್ಪುವನ್ನು ಮುಗಿಸಿದಂತೆಯೇ, ಸಿದ್ದರಾಮಯ್ಯನವರನ್ನು ಮುಗಿಸಬೇಕು' ಎಂದು ಹೇಳಿದ್ದರು.

I am not afraid of death: What did Siddaramaiah say about Ashwath Narayan Statement

ಡಾ ಸಿಎನ್‌ ಅಶ್ವತ್ಥ್‌ ನಾರಾಯಣ ಅವರ ಹೇಳಿಕೆಯು ವಿವಾದ ಕಿಡಿಯನ್ನೇ ಹೊತ್ತಿಸಿದೆ. ಈ ವಿಚಾರದ ಕುರಿತು ಕಾಂಗ್ರೆಸ್‌ ನಾಯಕರು ಕೆಂಡಾಮಂಡಲರಾಗಿದ್ದಾರೆ. ಶಾಸಕರಾದ ದಿನೇಶ್‌ ಗುಂಡೂರಾವ್‌, ಎಂಬಿ ಪಾಟೀಲ್‌ ಹಾಗೂ ಜಮೀರ್‌ ಅಹ್ಮದ್‌ ಖಾನ್‌ ಕಿಡಿಕಾರಿದ್ದಾರೆ. ಡಾ ಸಿಎನ್‌ ಅಶ್ವತ್ಥ್‌ ನಾರಾಯಣ ಅವರು ಕೂಡಲೇ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಅಶ್ವತ್ಥ್‌ ನಾರಾಯಣ ಅವರು, 'ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸಿದ್ದರಾಮಯ್ಯ ಅವರು, ಪೆದ್ದ, ನರಹಂತಹ ಎಂಬ ಪದಗಳನ್ನು ಬಳಸಿದ್ದಾರೆ. ನಾನು ಗ್ರಾಮೀಣ ಭಾಷೆಯಲ್ಲಿ ಇದೇ ರೀತಿಯಾಗಿ ಮಾತನಾಡಿದ್ದೇನೆ' ಎಂದು ಸಮಜಾಯಿಸಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+