50-60 ಶಾಸಕರ ಸಮೇತ ಬಿಜೆಪಿ ಸೇರುವ ಪ್ರಭಾವಿ ಸಚಿವ ಯಾರು? : ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಳಗಾವಿ, ಡಿಸೆಂಬರ್‌ 12: ಲೋಕಸಭೆ ಚುನಾವಣೆ ನಂತರ ಪ್ರಭಾವಿ ಸಚಿವರು 50-60 ಶಾಸಕರ ಸಮೇತ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ನಿಮ್ಮನ್ನೇ ಗುರಿ ಮಾಡಿರುವಂತಿದೆ ಎಂಬ ಪ್ರಶ್ನೆಗೆ ಡಿ ಕೆ ಶಿವಕುಮಾರ್‌ ಗರಂ ಆಗಿದ್ದು, ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಬೆಳಗಾವಿಯ ಸುವರ್ಣಸೌಧದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ. ನನಗೆ ನನ್ನದೇ ಆದ ಮೂಲ ಆದರ್ಶಗಳಿವೆ. ನನಗೆ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಅಪಾರವಾದ ನಂಬಿಕೆ ಇದೆ. ಅವರು ಮಾತನಾಡಿದ್ದಕ್ಕೆಲ್ಲ ನಾನು ಬಾಧ್ಯಸ್ಥನಲ್ಲ. ಅವರು ಏನಾದರೂ ಹೇಳಿಕೊಂಡು ತಿರುಗಲಿ, ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

I Am Not Crazy To Go To Another Party Said Deputy Chief Minister Dk Shivakumar‌

ನಿನ್ನೆ ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ವಿಚಾರವಾಗಿ ಮಾತನಾಡಿ, ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಗಣತಿಯ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು.

ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು. ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ.

I Am Not Crazy To Go To Another Party Said Deputy Chief Minister Dk Shivakumar‌

ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು ಎಂದು ತಿಳಿಸಿದರು.

ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ಬಗ್ಗೆ ವರದಿಗಳಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ಈ ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ. ಕಾರ್ಯದರ್ಶಿಗಳ ಸಹಿ ಇಲ್ಲದೇ ಅದು ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+