DK Shivakumar: ನಾಯಕತ್ವ ಬದಲಾವಣೆ; ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡಿದ್ರಾ ಡಿ ಕೆ ಶಿವಕುಮಾರ್?
ಬೆಂಗಳೂರು, ನವೆಂಬರ್ 16: ನಾಯಕತ್ವದ ಬದಲಾವಣೆ ಬಗ್ಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆಯಾಗುತ್ತಿದ್ದು, ಈ ನಡುವೆ ಡಿ ಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿದ್ದಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ಸುದ್ದಿ ಹರಿದಾಡುತ್ತಿರುವ ಕುರಿತು ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗುತ್ತಿದೆ, ಖರ್ಗೆ ಅವರ ಭೇಟಿ ವೇಳೆ ಈ ಬಗ್ಗೆ ಚರ್ಚೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ,ಅದೆಲ್ಲಾ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಹೈಕಮಾಂಡ್ ಬಳಿ ಚರ್ಚೆ ಮಾಡುತ್ತಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಲು ಹೋಗುತ್ತಿರುವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಶಂಕುಸ್ಥಾಪನೆ ಮಾಡಬೇಕು ಎಂಬುದು ನನ್ನ ಆಸೆ. ಡಿ. 1 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ, ಯಾವುದಾದರೂ ವಾರಾಂತ್ಯದಲ್ಲಿ ಬಂದು ಹೋಗಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಕಚೇರಿ ನಿರ್ಮಾಣದ ಕಟ್ಟಡ ನಕ್ಷೆ ಅನುಮೋದನೆಗೆ ನಾನು ₹2.30 ಕೋಟಿ ಹಣವನ್ನು ಪಾವತಿಸುತ್ತಿದ್ದೇನೆ. ರಾಮಲಿಂಗಾರೆಡ್ಡಿ ಅವರ ಮುಂದಾಳತ್ವದಲ್ಲಿ ಒಂದು ಕಚೇರಿ ನಿರ್ಮಿಸಲಾಗುತ್ತಿದೆ. 75-80 ಕಡೆ ಕಚೇರಿ ನಿರ್ಮಾಣಕ್ಕೆ ಜಾಗ ಕೂಡ ಸಿದ್ಧವಾಗಿವೆ. ನೂರು ಕಚೇರಿ ನಿರ್ಮಾಣ ಕಾರ್ಯ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
-
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ











Click it and Unblock the Notifications