Siddaramaiah: ನಾನು ಈಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ: ಸಿದ್ದರಾಮಯ್ಯ

ಚಾಮರಾಜನಗರ, ಡಿಸೆಂಬರ್‌ 07: ಅಧಿಕಾರ ಹಂಚಿಕೆ ಕುರಿತು ಚರ್ಚೆಯಾಗಿದೆ ಎಂದು ಕೆಲ ದಿನಗಳ ಹಿಂದೆ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಟೋಟಕ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಯಕೊಳ್ಳೇಗಾಲ ತಾಲೂಕಿನಸತ್ತೇಗಾಲದಲ್ಲಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನಾನು ಈಗ ರಾಜಕೀಯದ ಕೊನೆಗಾಲದಲ್ಲಿ ಇದ್ದೇನೆ ಎಂದು ಅಚ್ಚರಿ ಹೇಳಿಕೆಯನ್ನ ನೀಡಿದ್ದಾರೆ.

I Am Now In The End Of Politics Said Siddaramaiah

ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತೀರಾ ಎಂದಿದ್ದರು. ಜೆ.ಎಚ್ ಪಟೇಲರಿಗೆ ಆಗಿನ ಕೆಲ ಶಾಸಕರು ಹೇಳಿದರು. ಪಾಪ ಆಗಿನಿಂದ ಆ ಕಳಂಕ ಚಾಮರಾಜನಗರ ಮೇಲಿದೆ. ಈ ಮೂಢನಂಬಿಕೆಯನ್ನು ರಾಚಯ್ಯ ನಂಬಲಿಲ್ಲ. ನಾನು ಸಹ ನಂಬಲಿಲ್ಲ ಎಂದು ತನ್ನ ಹಳೆಯ ಗುರುಗಳಾದ ಬಿ ರಾಚಯ್ಯರನ್ನ ವೇದಿಕೆ ಮೇಲೆ ಸಿಎಂ ಸಿದ್ಧರಾಮಯ್ಯ ಅವರನ್ನ ನೆನಪಿಸಿಕೊಂಡರು. . ಚಾಮರಾಜನಗರ ಹೊಸ ಜಿಲ್ಲೆ ಎಂದು ಘೋಷಿಸಿದಾಗ ನಾನು ಡಿಸಿಎಂ ಆಗಿದ್ದೆ. ನಾವು ಚಾಮರಾಜನಗರಕ್ಕೆ ಬಂದು ಜಿಲ್ಲೆಯನ್ನು ಘೋಷಣೆ ಮಾಡಿದ್ದೆವು ಎಂದು ಹೇಳಿದರು.

ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು. ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆ ನಡೆದಿದೆ. ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅಲ್ಲದೇ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದೆ. ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರದ ತೋರಗಲ್ಲು ರೈಲ್ವೇ ಸ್ಟೇಷನ್ ಗೆ ಸೇರಿದ ಸರ್ವೆ ನಂಬರ್ 321(ಎ2) (ಎ3) ನ ಎಂಟು ಎಕರೆ ಜಾಗದ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಚಿವ ಸಂತೋಷ್ ಲಾಡ್, ಸಂಸದ ಈ.ತುಕಾರಾಮ್, ಸಚಿವರಾದ ಜಮೀರ್ ಅಹಮದ್ ನೇತೃತ್ವದ ನಿಯೋಗದ ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿ ಪ್ರಕರಣದ ವಿವರಗಳನ್ನು ದಾಖಲೆ ಸಮೇತ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಲ್ಲಿ ನೆಲೆಸಿರುವ 800 ಕುಟುಂಬಗಳು, 2000 ಮಂದಿಗೆ ಯಾವುದೇ ತೊಂದರೆ ಆಗಬಾರದು. ನ್ಯಾಯಬದ್ದವಾದ ಕಾನೂನು ಹೋರಾಟ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+