ವಿಪಕ್ಷ ನಾಯಕ ಆಗಲು ನಾನು ರೆಡಿ; ಬಹಿರಂಗವಾಗಿ ಬೇಡಿಕೆ ಇಟ್ಟ ನಾಯಕ

ಬೆಂಗಳೂರು, ನವೆಂಬರ್‌ 16: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಆರು ತಿಂಗಳ ನಂತರ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ನಾಯಕ ಬಿ ವೈ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿದ್ದು, ಇದೀಗ ವಿಪಕ್ಷ ನಾಯಕನ ಆಯ್ಕೆಗೆ ಹಲವು ನಾಯಕರು ಬೇಡಿಕೆ ಇಟ್ಟಿದ್ದಾರೆ.

ಹೌದು, ವಿಧಾನಸಭೆಯ ವಿಪಕ್ಷ ಸ್ಥಾನಕ್ಕಾಗಿ ಹಲವು ನಾಯಕರಾದ ಬಸವನಗೌಡ ಪಾಟೀಲ್‌ ಯತ್ನಾಳ್‌, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರ್‌ ಅಶೋಕ್‌, ಅಶ್ವಥ್‌ ನಾರಾಯಣ್‌, ಹಾಗೂ ಸುನೀಲ್‌ ಕುಮಾರ್‌ ರೇಸ್‌ ನಲ್ಲಿದ್ದು, ಹೈಕಮಾಂಡ್‌ಗೆ ಯಾರಿಗೆ ವಿಪಕ್ಷ ಸ್ಥಾನವನ್ನ ನೀಡಬೇಕೋ ಎಂಬುದು ದೊಡ್ಡ ತಲೆನೋವಾಗಿದೆ.

I Am Ready To Become The Leader Of The Opposition In The Upper House Says Kota Srinivas Poojary

ಇತ್ತ ಮೇಲ್ಮನೆ ವಿಪಕ್ಷ ನಾಯಕ ಸ್ಥಾನದ ಕುರಿತು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬೇಡಿಕೆ ಇಟ್ಟಿದ್ದಾರೆ. ಪಕ್ಷ ಕಳೆದ ಬಾರಿ ನನಗೆ ವಿಪಕ್ಷ ನಾಯಕ ಸ್ಥಾನದ ಅವಕಾಶ ಕೊಟ್ಟಿತ್ತು. ಈ ಬಾರಿಯೂ ಅವಕಾಶ ಕೊಟ್ಟರೆ ನಿಭಾಯಿಸುತ್ತೇನೆ ಎಂದು ಹೇಳಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬಿಜೆಪಿಯಲ್ಲಿ 34 ಜನ ಮೇಲ್ಮನೆ ಸದಸ್ಯರಿದ್ದಾರೆ. ಇಂಥ ಹುದ್ದೆಗಳಿಗೆ ನಿರಾಸಕ್ತಿ ತೋರುವವರು ಇರಲಾರರು. ಹಾಗಾಗಿ ಎಲ್ಲರಿಗೂ ಆಸಕ್ತಿ ಇರುತ್ತದೆ. ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಬಹಿರಂಗವಾಗಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ಕೋಟಾ ಶ್ರೀನಿವಾಸ್‌ ಪೂಜಾರಿ ಬೇಡಿಕೆ ಇಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+