Siddaramaiah: ನಾನು 2ನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಿಜೆಪಿಯ ಎಲ್ಲರಿಗೂ ಹೊಟ್ಟೆಯುರಿ: ಸಿದ್ದರಾಮಯ್ಯ ಬಿಚ್ಚಿಟ್ಟ ಕಾರಣವೇನು?

ಮೈಸೂರು, ಜುಲೈ 11: ಸುಮ್ಮಸುಮ್ಮನೆ ರಾಜಕೀಯ ಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದು ಬಿಜೆಪಿಯ ಎಲ್ಲರಿಗೂ ಹೊಟ್ಟೆಯುರಿ. ಅದಕ್ಕಾಗಿ ಕುತಂತ್ರ ಮಾಡುತ್ತಿದ್ದಾರೆ. ಇಂಥ ಷಡ್ಯಂತ್ರಕ್ಕೆಲ್ಲ ನಾನು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೂಡಾ ಮೊದಲಿನಿಂದಲೂ ಗಬ್ಬೆದ್ದು ಹೋಗಿದ್ದು, ಅದನ್ನು ಸ್ವಚ್ಛ ಮಾಡಬೇಕಿದೆ. ನಮ್ಮ ಪ್ರಕರಣ ಹಗರಣವಲ್ಲ. ನಮ್ಮ ಜಮೀನು ಬಳಕೆ ಮಾಡಿದ್ದಾರೆ. ಅವರ ಪ್ರಕರಣದಲ್ಲಿ ಭೂಮಿ ಕಳೆದುಕೊಂಡವರು ಅಥವಾ 50: 50 ಅನುಪಾನದಲ್ಲಿ ಜಮೀನು ಕೊಟ್ಟಿದ್ದಾರೆ. ನಾವು ಹಾಗೇ ಕೊಟ್ಟಿದ್ದೇವೆಯೇ? ಈ ವತ್ಯಾಸವನ್ನು ಅರ್ಥಮಾಡಿಕೊಳ್ಳಬೇಕು. ನಿವೇಶನ ಮಾಡಿದರೆ ಮೊದಲು 60:40 ಅನುಪಾತವಿತ್ತು. ಈಗ 50: 50 ಮಾಡಿದ್ದಾರೆ ಇದನ್ನು ಯಾರು ಮಾಡಿದ್ದು ಎಂದರು.

I am the Chief Minister for the 2nd time and everyone is upset with BJP Siddaramaiah Sait

2020 ನೇ ಇಸವಿಯಲ್ಲಿ ಮೂಡಾ ಅಲ್ಲದೇ ಬೇರೆ ಅಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ 50:50 ಅನುಪಾತ ಜಾರಿಗೆ ಬಂದಿದೆ. ಇದರಿಂದ ಅಭಿವೃದ್ಧಿ ಪ್ರಾಧಿಕಾರಗಳಿಗೆ ಲಾಭವಾಗುತ್ತದೆಯೇ ಹೊರತು ನಷ್ಟವಾಗುವುದಿಲ್ಲ. ಭೂಮಾಲೀಕರಿಗೆ ನಷ್ಟವುಂಟಾಗಬಾರದು ಎಂದು ತನಿಖೆ ನಡೆಸಲಾಗುತ್ತಿದೆ. ಮೂಡಾ ಆಯುಕ್ತರು ಮತ್ತಿತರರು ಇದನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ. ಈ ದುರುಪಯೋಗ ತಡೆಯಲು ತನಿಖೆ ನಡೆಸಿ ಸರಿಮಾಡುತ್ತೇವೆ ಎಂದರು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ. ಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ ಎಂದರು. ಸಿಬಿಐ, ಎಸ್.ಐ ಟಿ ಮತ್ತು ಇ. ಡಿ. ವತಿಯಿಂದ ಮೂರು ತನಿಖೆಗಳಾಗುತ್ತಿವೆ. ತನಿಖೆ ವರದಿ ಇನ್ನೂ ಬಂದಿಲ್ಲ ಎಂದರು.

ಆರ್ಥಿಕ ಇಲಾಖೆ ಸಚಿವರಾಗಿರುವ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಜಿ. ಟಿ .ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜಿನಾಮೆ ನೀಡಬೇಕಲ್ಲ ಎಂದರು. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ ಅಂತಿಮ ವರದಿಯಾಗಲಿ ಬಂದಿಲ್ಲ. ಆರೋಪಪಟ್ಟಿ ಹಾಕಿದ ಮೇಲೆ ವರದಿ ಬರುತ್ತದೆ ಎಂದರು.

ಖಜಾನೆಯಿಂದ ಹಣ ವರ್ಗಾವಣೆಯಾಗಿರುವುದು ಇಲಾಖೆಯ ಗಮನಕ್ಕೆ ಬರಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ. ಪ್ರಕರಣದ ತನಿಖೆ ಇನ್ನೂ ಮುಗಿದೇ ಇಲ್ಲ. ತನಿಖೆ ಮಾಡಿ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಮೂಡಾ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ಅವರು ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವ ಬಗ್ಗೆ ಮಾತನಾಡಿ, ಅವರು ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿಯೇ ಪ್ರತಿಭಟನೆ ಮಾಡಲಿ. ಮೂಡಾ ಬಗ್ಗೆ ತನಿಖೆ ಈಗಾಗಲೇ ನಡೆಯುತ್ತಿದೆ. ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

ಬದಲಿ ನಿವೇಶನ ನೀಡಿರುವುದು ಕಾನೂನುಬದ್ಧವಾಗಿದೆ ಎನ್ನುವುದು ನಮ್ಮ ವಾದ. ಅವರು ಕಾನೂನುಬಾಹಿರವಾಗಿದೆ ಎಂದು ಹೇಳುತ್ತಾರೆ. ಹಾಗಿದ್ದರೆ ತೋರಿಸಲಿ ಎಂದು ಹೇಳಿದರು. ಜಿಲ್ಲಾಧಿಕಾರಿಗಳು 2005 ರಲ್ಲಿ ಭೂ ಪರಿವರ್ತನೆ ಮಾಡಿದ್ದು ನಿವೇಶನ ಮಾಡುವ ಮುನ್ನ ಜಮೀನು ಕೃಷಿ ಭೂಮಿಯೇ. ಮಲ್ಲಿಕಾರ್ಜುನ ಸ್ವಾಮಿ ನನ್ನ ಭಾವಮೈದುನ. 2010 ರಲ್ಲಿ ದಾನಪತ್ರ ಕೊಟ್ಟಿದ್ದಾರೆ. ಇದರಲ್ಲಿ ಅಕ್ರಮವೇನಾಗಿದೆ ಎಂದರು.

ಕೃಷಿ ಭೂಮಿ ಎಂದು ಕೊಟ್ಟಿದ್ದರೂ ಕೂಡ ತಪ್ಪೇನು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, 2014 ರಲ್ಲಿ ಮೂಡಾ ಜಮೀನು ಅಲ್ಲದೆ ಹೋದರೂ ಕೂಡ ನಿವೇಶನ ಮಾಡಿ ಹಂಚಿದ್ದಾರೆ. ಅದಕ್ಕೆ ನಾವು ಸುಮ್ಮನೆ ಬಿಡಬೇಕಾ. ಬದಲಿ ನಿವೇಶನ ಕೇಳಿದ್ದು ಇಂಥ ಜಾಗದಲ್ಲಿಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ. ಆಗ ಮೂಡಾ ಸದಸ್ಯರೆಲ್ಲಾ ಏನು ಮಾಡುತ್ತಿದ್ದರು. ಬಿಜೆಪಿ ಸರ್ಕಾರವೇ ಇತ್ತು ಆಗ. ಕಾನೂನು ಪ್ರಕಾರ ನಮಗೆ ಬೇರೆ ಜಮೀನು ಕೊಡಬೇಕು.

ಇದೇ ರೀತಿಯಲ್ಲಿ ಸುಂದರಮ್ಮ ಪ್ರಕರಣದಲ್ಲಿ ಅವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಉಚ್ಚ ನ್ಯಾಯಾಲಯ ಅಷ್ಟು ಜಾಗವನ್ನೂ ಕೊಡಲು ಆದೇಶಿಸಿ ಒಂದು ಲಕ್ಷ ರೂಪಾಯಿ ದಂಡವನ್ನೂ ಮೂಡಾಗೆ ಹಾಕಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೂಡಾ ತಪ್ಪು ಮಾಡಿದ್ದರೆ ಯಾರು ಜವಾಬ್ದಾರರು. ಸಿದ್ದರಾಮಯ್ಯ ಜವಾಬ್ದಾರರೇ? ಒಂದು ವೇಳೆ ಇದನ್ನು ರದ್ದು ಮಾಡಿದರೆ. ಭೂಸ್ವಾಧೀನ ಕಾಯ್ದೆ ಪ್ರಕಾರ ಪರಿಹಾರ ನೀಡಬೇಕಲ್ಲವೇ. ಅದರ ಪ್ರಕಾರ 57 ಕೋಟಿಯಾದರೆ ಬಡ್ಡಿ ಸೇರಿಸಿ 62 ಕೋಟಿಯಾಗುತ್ತದೆ. ಮೂಡಾದವರು 62 ಕೋಟಿ ಕೊಡಬೇಕಾಗುತ್ತದೆ ಎಂದರು. 2021ರಲ್ಲಿ ನಾನು ವಿರೋಧ ಪಕ್ಷದ ನಾಯಕ ಇದ್ದೆ. ಆಗ ನಾನು ಹೇಳಿದ್ದನ್ನು ಕೇಳಿ ಮಾಡುತ್ತಿದ್ದರೆ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+