ಭವಾನಿ ರೇವಣ್ಣ ವರ್ತನೆಗೆ ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದೇನು?

ಬೆಳಗಾವಿ,ಡಿಸೆಂಬರ್‌ 04: ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿಯಾಗಿದ್ದು, ಈ ವೇಳೆ ಭವಾನಿ ರೇವಣ್ಣ ಬೈಕ್ ಸವಾರನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಕ್ಷಮೆ ಕೇಳಿದ್ದಾರೆ.

ಈ ಕುರಿತು ಸೋಮವಾರ ಸುವರ್ಣಸೌಧದಲ್ಲಿ ಮಾತನಾಡಿದ ಹೆಚ್‌ ಡಿ ರೇವಣ್ಣ, ಪತ್ನಿ ವರ್ತನೆಯ ಬಗ್ಗೆ ಯಾರಿಗಾದರೂ ನೋವಾದರೆ ಕ್ಷಮೆ ಕೋರುತ್ತೇನೆ. ಬೈಕ್ ಸವಾರ ಕುಡಿದು ಬೈಕ್ ಓಡಿಸಿದ್ದ. ನಾವೇನು ಅವರ ಬಳಿ ಡ್ಯಾಮೇಜ್ ಹಣ ಕೊಡಿ ಎಂದು ಕೇಳಲಿಲ್ಲ. ಏನಾದರೂ ಹೆಚ್ಚು ಕಮ್ಮಿ ಆಗಿದ್ರೆ ಯಾರು ಹೊಣೆ? ಬೇಕಾದರೆ ಭವಾನಿ ರೇವಣ್ಣ ಅವರಿಂದಲೂ ಕ್ಷಮೆ ಕೇಳಿಸುತ್ತೇನೆ. ಸಿಟ್ಟಾಗಿ ಭವಾನಿ ಮಾತನಾಡಿದ್ದಾರೆ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.

I Apologize If Anyone Was Hurt By My Wifes Behavior Says HD Revanna

ಬೈಕ್ ಅವನೇ ಬಂದು ಸೈಡ್‌ನಿಂದ ಕಾರಿಗೆ ಗುದ್ದಿದ್ದಾನೆ. ಹೆಚ್ಚು ಕಡಿಮೆ ಆಗಿದ್ದರೆ ಏನಾಗಾಗುತ್ತಿತ್ತು?, ಅವರು ಏನೂ ಅಹಂಕಾರ ಮಾಡಿಲ್ಲ. ಭವಾನಿ ಅವರು ಯಾರದ್ದೋ ಸ್ನೇಹಿತನ ಕಾರಿನಲ್ಲಿ ಹೋಗಿದ್ದರು.‌ ಅವರು ಸಿಟ್ಟಿನಲ್ಲಿ ಮಾತನಾಡಿದ್ದಾರೆ. ನಮ್ಮ‌ಕುಟುಂಬ ಯಾರಿಗೂ ನೋವು ಆಗುವ ಕೆಲಸ ಮಾಡಲ್ಲ.‌ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಏನಾಗುವುದು? ಅದನ್ನು ಬೇಕಂತಲೇ ಯಾರೋ ವೈರಲ್ ಮಾಡಿದ್ದಾರೆ.

ಅವರು ಬೈಕ್ ನವನ ಪ್ರಾಣದ ಬಗ್ಗೆ ಮಾತನಾಡಿಲ್ಲ. ಇವರದ್ದೇ ಪ್ರಾಣ ಹೋಗಿದ್ದರೆ ಏನು ಮಾಡುವುದು? ಎಂದು ಪ್ರಶ್ನಿಸಿದರು. ಈ ಘಟನೆಯಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ‌‌, ಭವಾನಿ ಯಾವತ್ತೂ ಯಾರಿಗೂ ನೋವು ಮಾಡಿಲ್ಲ. ಸ್ನೇಹಿತರ ಕಾರು ಅಂತ ಹಾಗೇ ಮಾಡಿದ್ದಾರೆ. ನಮ್ಮ‌ ಕುಟುಂಬ ಆ ತರ ಇಲ್ಲ.‌ ಗಾಡಿ ಅವಘಡ ಆದ ಮೇಲೆ ದೂರು ಕೊಡದಿದ್ದರೆ ತಪ್ಪಾಗಲ್ಲವಾ? ಎಂದು ಪ್ರಶ್ನಿಸಿದರು.

ಘಟನೆ ನಡೆದ ಬಳಿಕ ಠಾಣೆಗೆ ತಿಳಿಸಬೇಕಲ್ಲವಾ? ಯಾರಿಗಾದರೂ ನೋವಾಗಿದ್ದರು ವಿಷಾದ ವ್ಯಕ್ತಪಡಿಸುತ್ತೇನೆ. ಅವರು ಕುಡಿದು ಬಂದು ಮುಂದೆನೇ ಗುದ್ದಿದ್ದಾರೆ. ಕಾರಿನಲ್ಲಿದ್ದವರ ಪ್ರಾಣಕ್ಕೆ ತೊಂದರೆ ಆಗಿದ್ದರೆ? ಎಷ್ಟೇ ನಿಧಾನವಾಗಿ ಹೋಗಿದ್ದರು ಬಂದು ಮಧ್ಯದಲ್ಲಿ ಗುದ್ದಿದ್ದಾನೆ. ಅದನ್ನು ದೊಡ್ಡ ವಿಚಾರ ಮಾಡಬೇಡಿ ಎಂದು ಮನವಿ ಮಾಡಿದರು. ಅವರ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+