ನಾನು ಕೃಷ್ಣತತ್ತ್ವ ನಂಬಿದವ - ಕಂಸ ಹಿಂಸೆಯನ್ನಲ್ಲ: ಸಿ.ಎಂ ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ: ಎಚ್‌ಡಿಕೆ ಪ್ರಶ್ನೆ!

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ; ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಿಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು ಎಂದು ಅವರು ಹೇಳಿದ್ದಾರೆ.

I believe in Krishna principle - not Kamsa violence no limit to CM foolishness HDK s question

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ 'ಮಾರ್ಗ' ಯಾವುದು? ಕಂಸ ಮಾರ್ಗವೇ. ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ.

ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದೂ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+