ನಾನು ಕೃಷ್ಣತತ್ತ್ವ ನಂಬಿದವ - ಕಂಸ ಹಿಂಸೆಯನ್ನಲ್ಲ: ಸಿ.ಎಂ ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ: ಎಚ್‌ಡಿಕೆ ಪ್ರಶ್ನೆ!
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ; ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಿಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು ಎಂದು ಅವರು ಹೇಳಿದ್ದಾರೆ.

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ 'ಮಾರ್ಗ' ಯಾವುದು? ಕಂಸ ಮಾರ್ಗವೇ. ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ.
ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications