ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸುವ ಅಧಿಕಾರ ನನಗಿಲ್ಲ: ಯೂಟರ್ನ್ ತೆಗೆದುಕೊಂಡ ಈಶ್ವರಪ್ಪ
ಬೆಂಗಳೂರು, ಏಪ್ರಿಲ್. 26: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಮಾಜಿ ಸಚಿವ ಈಶ್ವರಪ್ಪ ಬಿಂಬಿಸಿದ್ದಾರೆ ಎಂಬ ವರದಿಗಳು ಬಂದಿದ್ದವು. ಇದರ ಬೆನ್ನಲ್ಲೇ ಮಾಜಿ ರಾಜ್ಯ ಸಚಿವ ಮತ್ತು ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಮಂಗಳವಾರ ತಮ್ಮ ಹೇಳಿಕೆಯನ್ನು ನಿರಾಕರಿಸಿದ್ದಾರೆ.
ಈಶ್ವರಪ್ಪ ಅವರ ಹೇಳಿಕೆ ಬಿಜೆಪಿಯಲ್ಲಿ ಹೊಸ ಊಹಾಪೋಹಗಳಿಗೆ ಕಾರಣವಾಗಿತ್ತು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ಮೊದಲೇ ಘೋಷಿಸಿರುವ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ, ಸಿ.ಟಿ.ರವಿ ಅವರು "ಒಳ್ಳೆಯ ನಾಯಕ". ಆದರೆ ಸಿಎಂ ಅಭ್ಯರ್ಥಿ ಯಾರು ಎಂದು ಹೇಳುವುದು ನಮ್ಮ ಅಧಿಕಾರ ವ್ಯಾಪ್ತಿಯಿಂದ ಹೊರಗಿದೆ ಎಂದಿದ್ದಾರೆ.

" ಸಿ.ಟಿ.ರವಿ ಒಬ್ಬ ಒಳ್ಳೆಯ ನಾಯಕ. ಚಿಕ್ಕಮಗಳೂರಿನಲ್ಲಿ ಅವರು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂದಿನ ಮುಖ್ಯಮಂತ್ರಿ ಅವರ ಬಗ್ಗೆ ನಾನೇನೂ ಹೇಳಿಲ್ಲ. ಅಂತಹ ಹೇಳಿಕೆ ನೀಡುವ ಅಧಿಕಾರ ನನಗಿಲ್ಲ. ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸುವ ಅಧಿಕಾರ ತನಗಿಲ್ಲ" ಎಂದು ಈಶ್ವರಪ್ಪ ಮಂಗಳವಾರ ಎಎನ್‌ಐಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.
ಆದರೆ, ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿರುವ ಸಿ.ಟಿ.ರವಿ ಅವರು ರಾಜ್ಯದ ಭಾವಿ ಮುಖ್ಯಮಂತ್ರಿಯಾಗುವ ಎಲ್ಲ ಗುಣಗಳನ್ನು ಹೊಂದಿದ್ದಾರೆ ಎಂದಿ ಮತ್ತೊಮ್ಮೆ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಚಿಕ್ಕಮಗಳೂರು ಸಮೀಪದ ನಿಡಘಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ, ಸಿ.ಟಿ.ರವಿ ಅವರು ಭಾರಿ ಅಂತರದಿಂದ ಶಾಸಕರಾಗಿ ಆಯ್ಕೆಯಾಗಿ ಮುಖ್ಯಮಂತ್ರಿಯಾಗುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದರು.

ಸಿ.ಟಿ.ರವಿ ಅವರೇ ಮುಖ್ಯಮಂತ್ರಿಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ ಒಂದು ದಿನದ ನಂತರ ಅವರ ಹೇಳಿಕೆ ಹೊರಬಿದ್ದಿದೆ. ಇದಕ್ಕೂ ಮುನ್ನ ಸೋಮವಾರ ಮಾತನಾಡಿದ ಕೆ ಎಸ್ ಈಶ್ವರಪ್ಪ ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದ ಒಂದೇ ಒಂದು ಮತವೂ ಬಿಜೆಪಿಗೆ ಬೇಕಾಗಿಲ್ಲ ಎಂದು ಹೇಳಿಕೆ ನೀಡಿದ್ದರು.
ಶಿವಮೊಗ್ಗದಲ್ಲಿ ವೀರಶೈವ-ಲಿಂಗಾಯತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ, ನಮಗೆ ಇಲ್ಲಿ ಒಂದೇ ಒಂದು ಮುಸ್ಲಿಂ ಮತವೂ ಬೇಡ, ರಾಷ್ಟ್ರೀಯವಾದಿ ಮುಸ್ಲಿಮರು ಬಿಜೆಪಿಗೆ ಮತ ಹಾಕುತ್ತಾರೆ. ಮೇ 10 ರಂದು ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications