ಸನ್ನಿವೇಶದ ಲಾಭ ಪಡೆದು ಸಿಎಂ ಆಗಲು ಬಯಸುವುದಿಲ್ಲ: ಸಿದ್ದರಾಮಯ್ಯ
Recommended Video
ಬೆಂಗಳೂರು, ಜುಲೈ 12: ಅತೃಪ್ತ ಶಾಸಕರ ರಾಜೀನಾಮೆ ಪರ್ವ ಶುರುವಾದಾಗಿನಿಂದಲೂ ಈ ರಾಜಕೀಯ ನಾಟಕಕ್ಕೆ ಸಿದ್ದರಾಮಯ್ಯ ಅವರದ್ದೇ ನಿರ್ದೇಶಕ ಎಂಬ ದಟ್ಟ ಊಹಾಪೋಹಗಳು ಹರಿದಾಡಿದ್ದವು, ಆ ನಂತರ ಅವರು ಅದನ್ನು ಸ್ಪಷ್ಟವಾಗಿ ನಿರಾಕರಿಸಿದ್ದರು.
ಇಂದು ಮತ್ತೊಮ್ಮೆ ಈ ಬಗ್ಗೆ ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ಇಂತಹಾ ಕೆಟ್ಟ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸಿಎಂ ಸ್ಥಾನವನ್ನು ನಾನು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಬಹುಮತವಿಲ್ಲ, ಹಾಗಿದ್ದಾಗ ನಾನು ಸಿಎಂ ಆಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರೇ ಹೆಚ್ಚು ಮಂದಿ ರಾಜೀನಾಮೆ ನೀಡಿರುವ ಕಾರಣ ಸಿದ್ದರಾಮಯ್ಯ ಅವರೇ ಈ ರಾಜೀನಾಮೆಗಳನ್ನು ಕೊಡಿಸಿದ್ದಾರೆ ಎಂಬ ಅನುಮಾನ ದಟ್ಟವಾಗಿ ಹರಿದಾಡಿತ್ತು, ಅದಕ್ಕೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಬರೆದಿರುವ ಸಿದ್ದರಾಮಯ್ಯ, ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಕಾಣ್ತಾರೆ ಅಂತ ಎಂಟಿಬಿ ನಾಗರಾಜ್ ಹೇಳ್ತಿದ್ರು. ಅವ್ರೇ ರಾಜೀನಾಮೆ ಕೊಟ್ಟಿದ್ದಾರೆ, ಈಗ ನಾನು ಅವರ ಎದೆ ಬಗೆದು ನೋಡೋಕೆ ಆಗುತ್ತದೆಯೇ? ಎಂದು ಹತಾಶೆಯಿಂದ ನುಡಿದಿದ್ದಾರೆ.












Click it and Unblock the Notifications