• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ. ಅದರ ಅವಶ್ಯಕತೆಯೂ ನನಗಿಲ್ಲ: ವಿ. ಸೋಮಣ್ಣ

|
Google Oneindia Kannada News

ಬೆಂಗಳೂರು,ಡಿಸೆಂಬರ್ 1: ರೌಡಿಶೀಟರ್ ನಾಗನಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರೌಡಿಶೀಟರ್ ಕಚೇರಿಗೆ ಭೇಟಿ ನೀಡಿದ್ದಾರೆಂದು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವಿಚಾರದ ನನಗೆ ತೀವ್ರ ಬೇಸರವನ್ನ ಉಂಟು ಮಾಡಿದೆ. 50 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಸಾವಿರಾರು ಜನ ನನ್ನ ಮನೆಯ ಹತ್ತಿರ ಬಂದು ಹೋಗಿದ್ದಾರೆ. ಅದರಲ್ಲಿ ನಾಗ ಯಾರು, ತಿಮ್ಮ ಯಾರು ಅನ್ನೋದು ನನಗೆ ಗೊತ್ತಿಲ್ಲ. ನಾಗ ಎಂಬುವವರನ್ನು ನಾನೂ ನೋಡಿಲ್ಲ. ಒಂದು ಗಂಟೆಯಲ್ಲ, ಒಂದು ನಿಮಿಷವೂ ನಾನು ಮಾತನಾಡಿಲ್ಲ.

ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಆ ತರಹದ ಜೀವನ ಮಾಡಿಲ್ಲ. ಸಾರ್ವಜನಿಕ ರಸ್ತೆ ಎಂದ ಮೇಲೆ ಯಾರ್ಯಾರೋ ಓಡಾಡುತ್ತಾರೆ. ಅದಕ್ಕೆ ನಾನು ಹೇಗೆ ಹೊಣೆಯಾಗಲು ಸಾಧ್ಯ. ಒಳ್ಳೆಯವರನ್ನೂ ರಸ್ತೆಗೆ ಕರೆ ತಂದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಹೇಳಿದರು.

ರಾಜಕಾರಣದಲ್ಲಿ 11 ಚುನಾವಣೆ ಎದುರಿಸಿದ್ದೇನೆ. ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ನಮ್ಮ ವಯಸ್ಸು, ನಮ್ಮ ಸೇವೆಯನ್ನು ಮಾಧ್ಯಮ ಸ್ನೇಹಿತರೂ ಒಮ್ಮೆ ಅವಲೋಕಿಸಿಕೊಳ್ಳಬೇಕು. ಆರೋಪ ಮಾಡುವ ಮೊದಲು ನಮ್ಮ ರಾಜಕೀಯ ಇತಿಹಾಸವನ್ನು ನೋಡಬೇಕು. ಸುಮ್ಮನೆ ಸುಳ್ಳು ಆರೋಪ ಮಾಡಿ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಬೇಡಿ ಎಂದರು.

ಸಚಿವ ವಿ. ಸೋಮಣ್ಣ ಮನೆಗೆ ರೌಡಿ ಶೀಟರ್ ನಾಗ ಎಂಟ್ರಿ ಏನಿದು ವಿವಾದ.?

ಚಾಮರಾಜಪೇಟೆಯ ಬಿ.ಎಸ್‌. ವೆಂಕಟರಾಮ್‌ ಕಲಾಭವನದಲ್ಲಿಸೈಲೆಂಟ್‌ ಸುನೀಲ್‌ ಭಾನುವಾರ ಬೃಹತ್‌ ರಕ್ತದಾನ ಶಿಬಿರ ಈ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್‌, ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್‌.ಆರ್‌. ರಮೇಶ್‌ ಹಾಗೂ ಇತರರು ಸೈಲೆಂಟ್‌ ಸುನೀಲ್‌ ಜತೆಗೆ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ವ್ಯಾಪಕ ಆಕ್ಷೇಪ ಕೇಳಿಬಂದಿತ್ತು. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ವಸತಿ ಸಚಿವ ವಿ ಸೋಮಣ್ಣ ಮನೆಗೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ನೀಡಿದ್ದು ಭಾರೀ ಕುತೂಹಲ ಮೂಡಿಸಿದೆ.

ವಿಜಯನಗರದಲ್ಲಿರುವ ಸಚಿವ ವಿ.ಸೋಮಣ್ಣ ನಿವಾಸಕ್ಕೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ತನ್ನ ಗ್ಯಾಂಗ್​ನ 40 ರಿಂದ 50 ಜನ ಹುಡುಗರ ಜೊತೆಗೆ ಭೇಟಿ ನೀಡಿದ್ದಾನೆ. ಇನ್ನೂ ವಿಲ್ಸನ್​ಗಾರ್ಡನ್ ನಾಗ, ಶ್ರೀಕಾಂತ್​ ಅಲಿಯಾಸ್​ ಆ್ಯಪಲ್ ಸಂತು ನವೆಂಬರ್​ 23 ರಂದು ಸಿಸಿಬಿ ದಾಳಿ ವೇಳೆ ತಲೆಮರೆಸಿಕೊಂಡಿದ್ದರು. ಎಚ್ಚೆತ್ತ ಸಿಸಿಬಿ ಆರೋಪಿ ನಾಗನನ್ನು ಕರೆತಂದು ವಿಚಾರಣೆ ನಡೆಸಿದರು. ಬಳಿಕ ಆರೋಪಿ ನಾಗ ತನ್ನ ಗ್ಯಾಂಗ್ ಜೊತೆ ಸಚಿವ ವಿ ಸೋಮಣ್ಣ ಮನೆಗೆ ಭೇಟಿ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.

English summary
Minister V Somanna clarify no relation between me and rowdy sheeter Naga, even I don't know who is he.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X