Naxalites Surrender: ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಲ್ಲಿ ಎಲ್ಲಿ ಎಸೆದಿದ್ದಾರೆಂದು ಗೊತ್ತಿಲ್ಲ: ಪರಮೇಶ್ವರ್ ಅಚ್ಚರಿ ಹೇಳಿಕ
ಬೆಂಗಳೂರು, ಜನವರಿ 10: ಶರಣಾಗತರಾದ ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಎಸೆದಿದ್ದಾರೆ ಎಂಬುವುದು ತಿಳಿದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದರೆ ಎಂದು ತಿಳಿಸಿದರು.
ನಕ್ಸಲರಿಗೆ ಪರಿಹಾರ ಮತ್ತು ಪುನರ್ ವಸತಿ ಕಲ್ಪಿಸುವ ವಿಚಾರದಲ್ಲಿ ತೋರಿದ ಮುತುವರ್ಜಿಯನ್ನು ಶಸ್ತ್ರಾಸ್ತ್ರಗಳನ್ನು ಹುಡುಕುವುದರಲ್ಲಿ ಸರ್ಕಾರ ತೋರುತ್ತಿಲ್ಲ ಎಂಬ ಬಿಜೆಪಿ ಆರೋಪದ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ, ನಾವು ಮಾಡುವ ಕೆಲಸ ಮಾಡುತ್ತೇವೆ. ಕಾಡಲ್ಲಿ ಎಲ್ಲಿ ಇಟ್ಟಿದ್ದಾರೆ ಎಂಬುದನ್ನು ನೆರವು ಪಡೆದು ಹುಡುಕುತ್ತಾರೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರ ಪೊಲೀಸರು ಕೆಲಸ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ? ಅವರು ಕೂಡ ಸರ್ಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ? ಎಂದು ತಿರುಗೇಟು ನೀಡಿದರು.

ನಕ್ಸಲ್ ರವೀಂದ್ರ ಎಂಬಾತ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿ, ಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರಹಾಕಿದ್ದರು ಎಂಬುದು ಗೊತ್ತಿಲ್ಲ. ತನಿಖೆ ನಡೆದಿದೆ. ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಬಂದರೆ ನಿಗಾವಹಿಸಲಿದ್ದರೆ ಎಂದು ಹೇಳಿದರು.
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಿದ್ದಾರೆ. ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಎಂದರು. ಶಾಸಕಾಂಗ ಪಕ್ಷದ ಕಾರ್ಯಸೂಚಿ ಏನೆಂಬುದು ಗೊತ್ತಿಲ್ಲ. ಶಾಸಕಾಂಗ ಪಕ್ಷದಿಂದ ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಬಜೆಟ್ ಅಧಿವೇಶನ ಸಮೀಪಿಸುತ್ತಿದೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕೆಲಸಗಳ ಬಗ್ಗೆ ಹಾಗೂ ಜಾತಿಗಣತಿ ವರದಿ ಜಾರಿಗೆ ತರುವ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications