ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೂತಹಲ ಮೂಡಿಸಿದೆ ಈಶ್ವರಪ್ಪ ಸಿಎಂ ಭೇಟಿ; ನನಗೆ ಸಚಿವ ಸ್ಥಾನ ಬೇಡ- ಈಶ್ವರಪ್ಪ ಅಸಮಾಧಾನಕ್ಕೆ ಕಾರಣವೇನು?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ಭೇಟಿ ಮಾಡಿ ಅಸಹನೆಗೊಂಡ ಈಶ್ವರಪ್ಪ ಇನ್ನುಂದೆ ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದೇನೆ ಎಂದು ತಿಳಿಸಿದ್ದೇನೆ ಎಂದರು.

|
Google Oneindia Kannada News

ಬೆಂಗಳೂರು,ಫೆಬ್ರವರಿ3: ಗುತ್ತಿಗೆದಾರ ಸಂತೋಷ್ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದರೂ ಮಂತ್ರಿ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನನಗೆ ಸಚಿವ ಸ್ಥಾನ ಬೇಡ ಎಂದು ಮುಖ್ಯಮಂತ್ರಿಗಳಿಗೆ ಹೇಳಿ ಬಂದಿ೦ದ್ದೇನೆ ಎಂದು ಅಸಮಾಧಾನ ವ್ಯಕ್ತಡಿಸಿದ್ದಾರೆ.

ಶುಕ್ರವಾರ ಆರ್ ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಖಾಸಗಿ ನಿವಾಸದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ಪದೇ ಪದೇ ಸಂಪುಟ ಸೇರ್ಪಡೆಗೆ ಭರವಸೆ ಕೊಟ್ಟು ಕಳುಹಿಸುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನ ಭೇಟಿ ಮಾಡಿ ಅಸಹನೆಗೊಂಡ ಈಶ್ವರಪ್ಪ ಇನ್ನುಂದೆ ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದೇನೆ ಎಂದು ತಿಳಿಸಿದ್ದೇನೆ ಎಂದರು.

ಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಹೋಗಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿಮುಖ್ಯಮಂತ್ರಿ ಆಗೋಕೆ ಮಾತ್ರ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಹೋಗಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ಇನ್ನೂ ಹಿಂದೆ ನನ್ನ ವಿಚಾರದಲ್ಲಿ ಕ್ಲಿನ್ ಚೀಟ್ ನೀಡಿದರು. ಸಚಿವ ಸಂಪುಟಕ್ಕೆ ತಮ್ಮನ್ನು ಸೇರ್ಪಡೆ ಮಾಡಿಕೊಳ್ಳದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು. ನನ್ನ ವಿಚಾರದಲ್ಲಿ ತೀರ್ಪು ಬಂದಾಗಿದೆ. ಕ್ಲಿನ್ ಚಿಟ್ ನೀಡಲಾಗಿದೆ. ನಿಮ್ಮನ್ನ ಮಂತ್ರಿ ಮಾಡುತ್ತೇವೆ ಎಂದು ಸಿಎಂ ಹೇಳ್ತಾನೆ ಬಂದಿದ್ದಾರೆ. ನಿಮ್ಮಂತವರು ಸಂಪುಟಕ್ಕೆ ಬೇಕು ಅಂತಾರೆ.ಆದರೆ ನನ್ನನ್ನ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳುತ್ತಿಲ್ಲ ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನೂ ಈಶ್ವರಪ್ಪ ಈ ಅಸಮಾಧಾನವನ್ನ ಶಮನಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಳಗಾವಿ ಅಧಿವೇಶನದ ನಡುವೆ ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ನವರ ಜೊತೆಗೆ ಚರ್ಚ ನಡೆಸುವ ಮೂಲಕ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳಕ್ಳುವ ಭರವಸೆ ನೀಡಿದರು.

I Dont Want A Ministerial Post Said Former Minister KS Eshwarappa

ಸಿಎಂ ಕೊಟ್ಟ ಭರವಸೆಯಂತೆ ಎರಡು ತಿಂಗಳು ಕಳೆದರು ಸಂಪುಟ ವಿಸ್ತರಣೆ ವಿಚಾರವೇ ಚರ್ಚೆಯಾಗದ ಹಿನ್ನೆಲೆ ಇಂದು (ಶುಕ್ರವಾರ) ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗೆ ಏನೇನು ಸಮಸ್ಯೆಗಳಿದೆಯೋ ಗೊತ್ತಿಲ್ಲ ಪಕ್ಷ ಮತ್ತು ಸರ್ಕಾರಕ್ಕೆ ಸಮಸ್ಯೆ ಮಾಡಲು ನಾನು ತಯಾರಿಲ್ಲ. ಹೀಗಾಗಿ ಮಂತ್ರಿ ಮಾಡುವ ಅವಶ್ಯಕತೆ ಇಲ್ಲ ಎಂದು ಸಿಎಂಗೆ ಹೇಳಿದ್ದೇನೆ. ಸಿಎಂ ಬಳಿ ಮಂತ್ರಿ ಸ್ಥಾನ ಬೇಡ ಎಂದು ಹೇಳಿದ್ದೇನೆ ಎಂದರು.

ಸಂತೋಷ್ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಎಂದು ಕನಸು ಬಿದ್ದಿರಲಿಲ್ಲ. ಸಂತೋಷ್ ಮಲಗಿದ್ದು ಒಂದು ಕಡೆ ಆದರೆ ಪತ್ರ ಸಿಕ್ಕಿದ್ದು ಮತ್ತೊಂದು ಕಡೆ. ಈ ಕೇಸ್ ನಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕಿದೆ . ಸಿಎಂ ಸಂಪುಟ ವಿಸ್ತರಣೆ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ಸಿಎಂ ಏನು ಸಮಸ್ಯೆ ಇದೆಯೋ ಗೊತ್ತಿಲ್ಲ ಸಚಿವ ಸ್ಥಾನ ನನಗೆ ಬೇಡ ಎಂದು ಹೇಳಿದ್ದೇನೆ ಎಂದರು.

I Dont Want A Ministerial Post Said Former Minister KS Eshwarappa

ಇನ್ನೂ ಈ ಬಾರಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಚುನಾವಣಾ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹೆಚ್ಚಾಗಿದ್ದು, ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಯ ಮತ್ತೊಬ್ಬ ನಾಯಕ ಕ್ಷೇತ್ರದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದು, ಎಲ್ಲಿ ಕ್ಷೇತ್ರ ಕೈತಪ್ಪಿ ಹೋಗುತ್ತೋ ಎನ್ನುವ ಆತಂಕ ಎದುರಾಗಿದೆ ಎನ್ನಲಾಗಿದೆ. ಹೀಗಾಗಿ ಕ್ಷೇತ್ರವನ್ನ ಕಳೆದುಕೊಳ್ಳುವ ಭೀತಿಯಲ್ಲಿರುವ ಈಶ್ವರಪ್ಪ ನನಗೆ ಟಿಕೆಟ್ ಕೊಡದಿದ್ರು, ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

English summary
karnataka assembly elections 2023; KS Eshwarappa said that i dont want a ministerial post,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X