ನೆರೆ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ: ರಾಜ್ಯದಲ್ಲಿ ಮತ್ತೆ ಜಾರಿಯಾಗಲಿವೆಯಾ ಕಟ್ಟುನಿಟ್ಟಿನ ನಿಯಮಗಳು- ಸಿಎಂ ಹೇಳಿದ್ದೇನು?

ಬೆಂಗಳೂರು,ಡಿಸೆಂಬರ್‌ 18: ನೆರೆ ರಾಜ್ಯಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ..

ಈ ಕುರಿತು ಮಾಧ್ಯಮಗಳ ಜೊತೆಗೆ ಸಿದ್ದರಾಮಯ್ಯ ಅವರು ಮಾತನಾಡಿ, ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಹೆಚ್ಚಳವಾದ ಹಿನ್ನಲೆ ಆರೋಗ್ಯ ಸಚಿವರಿಗೆ ಸಭೆ ಮಾಡಲು ಹೇಳಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನ ತಗೆದುಕೊಳ್ಳಲು ಹೇಳಿದ್ದೇನೆ ಎಂದು ಹೇಳಿದರು. ಇನ್ನೂ ಹೊರ ರಾಜ್ಯದಲ್ಲಿ ಕೊರೋನಾ ಹೆಚ್ಚಳವಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು, ಪಾಸಿಟಿವ್‌ ಪ್ರಕರಣಗಳು ಹೆಚ್ಚಾದರೇ ರಾಜ್ಯದಲ್ಲಿ ಮತ್ತೆ ಜಾರಿಯಾಗಲಿವೆಯಾ ಎಂಬ ಪ್ರಶ್ನೆ ಉದ್ಭವಿಸಿದೆ.

I Have Asked Tthe Health Minister To Take Precautionary Measures Against Corona Says Siddaramaiah

ಮಂಗಳವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ಬರಗಾಲದ ಬಗ್ಗೆ ಪ್ರದಾನಿಗಳ ಜೊತೆ ಚರ್ಚೆ ಮಾಡುತ್ತೇನೆ. ಬರಗಾಲದ ವಿಚಾರವಾಗಿ ಚರ್ಚೆ ನಡೆಸಲೆದ್ದೇ ಪ್ರಧಾನಿಗಳ ಸಮಯ ಕೇಳಿದ್ದೇ. ಜೊತಗೆ ಕಾಂಗ್ರೆಸ್ ವರ್ಕಿಂಗ್ ಕಿಮಿಟಿ ಮೀಟಿಂಗ್ ಇದೆ ಅದಕ್ಕೂ ಅಟೆಂಡ್ ಮಾಡುತ್ತೇನೆ. ಇನ್ನೂ ಲೋಕಸಭಾ ಚುನಾವಣೆ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಹೈಕಮಾಂಡ್ ಜೊತೆ ನಿಗಮ ಮಂಡಳಿದು ಚರ್ಚೆ ಮಾಡುತ್ತೇವೆ. ಈಗಾಗಲೇ ಲಿಸ್ಟ್ ಕಳಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ. ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ. ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದರು.

ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸುವ ಆಧುನಿಕ ಚಿಕಿತ್ಸಾ ವಿಧಾನವಾದ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಇಂದು ಉದ್ಘಾಟಿಸಲಾಗಿದೆ. ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿದರೆ, ರೋಗವನ್ನು ಗುಣಪಡಿಸಬಹುದು. ಕಡೆಯ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದಾಗ, ಕಾಯಿಲೆ ಉಲ್ಬಣಗೊಳ್ಳದಿರಲು ಈ ಅತ್ಯಾಧುನಿಕ ಚಿಕಿತ್ಸೆ ಸಹಕಾರಿಯಾಗಿದೆ. ಈ ಆಸ್ಪತ್ರೆಗೆ ಹಳ್ಳಿಗಾಡಿನ ಜನರು ಹೆಚ್ಚು ಬರುವುದರಿಂದ ಇಲ್ಲಿನ ವೈದ್ಯರು ಕನ್ನಡದಲ್ಲಿ ಮಾತನಾಡುವುದರಿಂದ ರೋಗಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದರು.

ಶ್ರೀಮಂತರು ಉತ್ತಮ ಹಾಗೂ ದುಬಾರಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ದಿನನಿತ್ಯಜೀವನದಕ್ಕಾಗಿ ಹೋರಾಡುವ ಬಡಜನರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆ ನೀಡುವ ಬ್ಯಾಪ್ಟಿಸ್ಟ್ ಆಸ್ಪತ್ರೆ ಜನಸೇವೆಯಲ್ಲಿ ನಂಬಿಕೆ ಇರಿಸಿದೆ.ಬ್ಯಾಪ್ಟಿಸ್ಟ್ ಆಸ್ಪತ್ರೆಯು ಬಡವರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿದೆ. ಸರ್ಕಾರಿ ಆಸ್ಪತ್ರೆಯಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಡರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು, ಸರ್ಕಾರ ಈ ಆಸ್ಪತ್ರೆಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+