ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಮುಗಿಸಲು ಕಾಂಗ್ರೆಸ್‌ ಸಂಚು ಎಂದ ಹೆಚ್ಡಿಕೆ: ಸಿದ್ದರಾಮಯ್ಯ ಏನಂದ್ರು?

ಮೈಸೂರು, ಜೂನ್ 15: ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

I Have Never Done Hate Politics On Anyone Till Date Says Siddaramaiah

ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದು ತಿಳಿಸಿದರು.

ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎನ್ . ಟಿ .ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ ಎಂದರು.

ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.

ರಾಯ್ ಎಂಬುವರಿಗೆ 2010 ರ್ಯಾಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಂಧಿಸಲು ಆದೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು.

ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು. ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ಗೊತ್ತಿಲ್ಲ ವಿಚಾರ ಮಾಡುವುದಾಗಿ ತಿಳಿಸಿದರು. ಇನ್ನೂ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣೆಯನ್ನು ಆದಷ್ಟೂ ಶೀಘ್ರದಲ್ಲಿ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ಸಿಗರ ಷಡ್ಯಂತ್ರಕ್ಕೆ ಫುಲ್ ಸ್ಟಾಪ್: ಎ.ಎಸ್.ಪಾಟೀಲ ನಡಹಳ್ಳಿ

ರಾಜ್ಯದ ಜನರು ಯಡಿಯೂರಪ್ಪನವರ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಕ್ಕೆ ಪೂರಕವಾಗಿ ಹೈಕೋರ್ಟ್ ತೀರ್ಪು ಬಂದಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ತಿಳಿಸಿದರು. ತಮ್ಮ ವಿರುದ್ಧ ಕೇಸು ದಾಖಲಿಸಿದ ಬಳಿಕ ಯಡಿಯೂರಪ್ಪನವರು ವಿಚಾರಣೆ ಎದುರಿಸಿದ್ದರು. ಹೇಳಿಕೆ, ಧ್ವನಿ ಸ್ಯಾಂಪಲ್ ಕೊಟ್ಟಿದ್ದರು. ದೆಹಲಿಗೆ ಹೋಗಿರುವ ಕಾರಣ 17ರಂದು ವಿಚಾರಣೆ ಹಾಜರಾಗುವುದಾಗಿ ಪತ್ರದ ಮೂಲಕ ಸಿಐಡಿಗೆ ತಿಳಿಸಿದ್ದರೂ ಕೂಡ ಅವರನ್ನು ಬಂಧಿಸಬೇಕೆಂಬ ದುರುದ್ದೇಶ ಸರಕಾರಕ್ಕೆ ಇತ್ತು. ಆ ದುರುದ್ದೇಶ ವಿಫಲವಾಗಿದೆ. ಕಾಂಗ್ರೆಸ್ ನಾಯಕರ ಷಡ್ಯಂತ್ರಕ್ಕೆ ಹೈಕೋರ್ಟ್ ಪೂರ್ಣವಿರಾಮ (ಫುಲ್ ಸ್ಟಾಪ್) ಹಾಕಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕೊಲೆ, ದರೋಡೆ, ದ್ವೇಷದ ರಾಜಕಾರಣ ನಡೆದಿದೆ. ಸರಕಾರದ ಬಗ್ಗೆ ಜನರು ಬೇಸತ್ತು ಹೋಗಿದ್ದಾರೆ ಎಂದು ತಿಳಿಸಿದರು. ಆ ಮುಜುಗರದಿಂದ ತಪ್ಪಿಸಲು ಯಡಿಯೂರಪ್ಪ ಅವರನ್ನು ಬಂಧಿಸಲು, ಕಾಂಗ್ರೆಸ್ ನಾಯಕರ ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಸಿಐಡಿ ಅಧಿಕಾರಿಗಳು ನಿನ್ನೆ ಬಂಧನ ವಾರಂಟ್ ಪಡೆದಿದ್ದರು. ಇವತ್ತು ಆ ವಾರಂಟ್‍ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹಿರಿಯ ನಾಯಕರು, ಜನಪ್ರಿಯ ಜನನಾಯಕರು, ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ದುರುದ್ದೇಶದಿಂದ ಹಾಕಿದ ಪ್ರಕರಣದಲ್ಲಿ ಪೋಕ್ಸೊ ಸೆಕ್ಷನ್‍ಗಳನ್ನು ಸೇರಿಸಿ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಕೆಲಸವನ್ನು ರಾಜಕೀಯ ವಿರೋಧಿಗಳು ಮಾಡಿ, ಷಡ್ಯಂತ್ರದ ಕೇಸು ದಾಖಲಿಸಿದ್ದರು. ಈ ಕೇಸಿಗೆ ಸಂಬಂಧಿಸಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ. ಇದನ್ನು ಬಿಜೆಪಿ ಸ್ವಾಗತ ಮಾಡುತ್ತದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+