ಮೈಸೂರಿನಿಂದ ಯದುವೀರ್‌ ಸ್ಪರ್ಧೆ- ರಾಜಕೀಯ ಎದುರಾಳಿ ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್:‌ ಸಿದ್ದರಾಮಯ್ಯ ಏನಂದ್ರು?

ಉಡುಪಿ, ಮಾರ್ಚ್‌ 13: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದರಾದ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಕೈ ತಪ್ಪಿಲಿದೆ ಎನ್ನುವ ಚರ್ಚೆ ಶುರುವಾಗಿದೆ. ಮೈಸೂರು ಟಿಕೆಟ್‌ ಈ ಬಾರಿ ಯದುವೀರ್ ಟಿಕೆಟ್‌ ಸಿಗಲಿದೆ ಎನ್ನುವ ಚರ್ಚೆ ಹೆಚ್ಚಾಗಿದ್ದು, ಮೈಸೂರು ಕ್ಷೇತ್ರದಿಂದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ನೀಡುವಂತೆ ಕಾರ್ಯಕರ್ತರು ಸಾಲು ಸಾಲು ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ಇತ್ತ ರಾಜಕೀಯ ಎದುರಾಳಿಯಾಗಿರುವ ಸಿದ್ದರಾಮಯ್ಯ ಸಹ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ , ಪ್ರತಾಪ್‌ ಸಿಂಹ ನನ್ನ ವಿರುದ್ಧ ಯಾವಾಗ ನಿಂತಿದ್ರು? ಬಿಜೆಪಿಯವರು ಈ ನಿರ್ಧಾರಕ್ಕೆ ಬಂದಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

I Have No Information About Pratap Singh Missing The Ticket Says Siddaramaiah

ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು. ಇನ್ನೂ ಮಂಗಳವಾರ ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಜಯಪ್ರಕಾಶ್ ಹೆಗ್ಡೆ, ಸುಕುಮಾರ ಶೆಟ್ಟಿ, ಎಂ.ಪಿ ಕುಮಾರಸ್ವಾಮಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.

ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ

ಸಂಸದ ಅನಂತಕುಮಾರ್ ಹೆಗಡೆಯವರು ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವುದಾಗಿ ತಿಳಿಸಿದ್ದರು. ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ. ಇದಕ್ಕೆ ಜನರು ಬಲಿಯಾಗಬಾರದು.ಆದ್ದರಿಂದ ಸಂವಿಧಾನದ ಉಳಿವಿಗಾಗಿ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದರು.

ಕರಾವಳಿ ಪ್ರದೇಶದ ಅಭಿವೃದ್ಧಿಗೆ ಬದ್ಧ

ಬಸವಣ್ಣನವರ ತತ್ವಗಳನ್ನಾಧರಿಸಿ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಾವು ಘೋಷಿಸಿದ್ದೇವೆ. ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್ ನಲ್ಲಿ ಇಡಲಾಗಿದೆ. ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೊಳಿಸಲಾಗುವುದು. ಜನರ ಕಷ್ಟಸುಖಗಳಲ್ಲಿ ಭಾಗಿಯಾಗುವ ಕಾಂಗ್ರೆಸ್ ಪಕ್ಷಕ್ಕೆ ಜನರು ಆಶೀರ್ವಾದ ಮಾಡಬೇಕೆಂದು ಕೋರಿದರು.

ಕರ್ನಾಟಕದಲ್ಲಿ ಗೋ ಬ್ಯಾಕ್ ಬಿಜೆಪಿ ಆಗಬೇಕೆಂದು ಜನರಿಗೆ ಸಿಎಂ ಕರೆ

ನರೇಂದ್ರ ಮೋದಿಯವರು ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ. ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ, ಅಂದು ರಾಜ್ಯದಲ್ಲಿ ನಾನು ಆಂಜನೇಯ ದೇಗುಲವನ್ನು ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ ಅನುದಾನವನ್ನು ಮೀಸಲಿಟ್ಟಿದ್ದೇನೆ. ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ. ಈ ರೀತಿ ಜನರ ದಾರಿ ತಪ್ಪಿಸಿ ಮೋದಿಯವರು ಅಧಿಕಾರಕ್ಕೆ ಬರುತ್ತಿದ್ದು, ಈ ಬಾರಿ ಜನರು ರಾಜ್ಯದಲ್ಲಿ ಬಿಜೆಪಿ ಗೋಬ್ಯಾಕ್ ಎನ್ನಬೇಕು ಎಂದು ನೆರೆದಿದ್ದ ಜನರನ್ನು ಕೋರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+