ಕೈ ಪಾಳಯದಲ್ಲಿ ಅಸಮಾಧಾನ ಸ್ಟೋಟ; ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ: ಬಸವರಾಜ ರಾಯರೆಡ್ಡಿ
ಧಾರವಾಡ ಸೆಪ್ಟೆಂಬರ್ 04: ರಾಜ್ಯ ಕಾಂಗ್ರೆಸ್ 135 ಸ್ಥಾನಗಳನ್ನ ಪಡೆಯುವ ಮೂಲಕ ಸರ್ಕಾರ ರಚಿಸಿದ್ದು, ಇದೀಗ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆಯುತ್ತಿದ್ದಂತೆ ಕೈ ಪಾಳಯದಲ್ಲಿ ಅಸಮಾಧಾನ ಸ್ಟೋಟಗೊಂಡಿದ್ದು, ಸಿಎಂ ಗೆ ಪತ್ರ ಬರೆಯುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಯಾಗಿತ್ತು. ಸರ್ಕಾರದ ಆಡಳಿತದ ಬಗ್ಗೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೌದು, ಬಸವರಾಜ ರಾಯರೆಡ್ಡಿ ಅಸಮಾಧಾನವನ್ನು ಶಮನಗೊಳಿಸಲು ಸಚಿವರಾದ ಶರಣ ಪ್ರಕಾಶ್ ಪಾಟೀಲ್ ಡಾ.ಎಂ.ಸಿ.ಸುಧಾಕರ್ ಸೋಮವಾರ ಧಾರವಾಡದ ಗೋವಾ ರಸ್ತೆಯಲ್ಲಿರುವ ರಾಯರೆಡ್ಡಿ ಫಾರ್ಮ್ಹೌಸ್ನಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಇನ್ನೂ ಸಚಿವ ಜೊತೆಗಿನ ಸಭೆಯ ಬಳಿಕ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಮಾಧ್ಯಮಗಳ ಜೊತೆಗೆ ಮಾತನಾಡಿ, ನನಗೆ ಕಾಂಗ್ರೆಸ್ ಬಗ್ಗೆ ಕೋಪವಿಲ್ಲ, ಸಿಟ್ಟಾಗುವಂತಹದ್ದು ಏನೂ ಆಗಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ. ಆದರೆ ಬಿಜೆಪಿಯ ಸಿದ್ಧಾಂತಗಳು ನನಗೆ ಸರಿ ಹೊಂದುವುದಿಲ್ಲ. ಬಿಜೆಪಿಯವರು ನನ್ನನ್ನು ಕರೆದಿದ್ದಾರೆ ಅಂತಲ್ಲ. ಅವರು ಎಲ್ಲರನ್ನೂ ಕರೆಯುತ್ತಲೇ ಇರುತ್ತಾರೆ. ಆದರೆ ನಾನು ಸಿದ್ಧಾಂತ ಇಟ್ಟುಕೊಂಡು ರಾಜಕೀಯ ಮಾಡುವವನು. ಇನ್ನೂ ವೈಯಕ್ತಿಕವಾಗಿ ಸಿಎಂ ನನಗೆ ಬೇಕಾದವರು. ಸಿದ್ದರಾಮಯ್ಯ ಒಳ್ಳೆಯ ಮುಖ್ಯಮಂತ್ರಿ. ಒಳ್ಳೆಯ ಜನನಾಯಕ. ಸಿದ್ದರಾಮಯ್ಯರಂಥ ರಾಜಕಾರಣಿಗಳು ಸಿಗುವುದಿಲ್ಲ. ನಾವೆಲ್ಲ ಒಟ್ಟಿಗೆ ರಾಜಕೀಯಕ್ಕೆ ಬಂದವರು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಟಾರ್ನ್ಫಾರ್ಮರ್ಗಳು ಸುಟ್ಟುಹೋಗಿ ವಿದ್ಯುತ್ ಸಮಸ್ಯೆ ಆಗಿದೆ. ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕಲಬುರಗಿ ಜೆಸ್ಕಾಂ ವ್ಯಾಪ್ತಿಯಲ್ಲೇ ನಮ್ಮ ಜಿಲ್ಲೆ ಕೂಡ ಬರುತ್ತೆ. ಆದರೆ ಯಾವುದೇ ಅಧಿಕಾರಿಗಳು ನಮ್ಮ ಜಿಲ್ಲೆಯ ಸಮಸ್ಯೆಗೆ ಸ್ಪಂದಿಸಲಿಲ್ಲ. ಹೀಗಾಗಿ ಸಿಎಂಗೆ ಸಭೆ ಕರೆಯುವಂತೆ ಪತ್ರ ಬರೆದಿದ್ದೇನೆ. ಜನರಿಗೆ ಗೊತ್ತಾಗಲಿ ಅಂತ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ. ಸೆ.5ರಂದು ಇಂಧನ ಸಚಿವರು ಸಭೆ ಕರೆದಿದ್ದಾರೆ. ನನ್ನ ಪತ್ರದಿಂದ ಈಗ ಇಡೀ ಜೆಸ್ಕಾಂ ಸಮಸ್ಯೆ ಪರಿಹಾರ ಆಗುತ್ತದೆ. ಆದರೆ ಇದನ್ನು ನಕರಾತ್ಮಕವಾಗಿ ತೆಗೆದುಕೊಂಡರೆ ಹೇಗೆ ? ಎಂದು ಪ್ರಶ್ನಿಸಿದ್ದಾರೆ.
ಇಬ್ಬರೂ ಸಚಿವರನ್ನೂ ನಾನೇ ಕರೆದಿದ್ದೆ. ಕೊಪ್ಪಳದ ಕೆಲ ವಿಷಯವಾಗಿ ಬಗ್ಗೆ ಚರ್ಚೆ ಮಾಡಲು ಕರೆದಿದ್ದೆ. ನನ್ನ ಕ್ಷೇತ್ರಕ್ಕೆ ಇವತ್ತು ಅವರನ್ನು ಕರೆದುಕೊಂಡು ಹೋಗುತ್ತಿದ್ದೇನೆ. ಹೀಗಾಗಿ ಇಲ್ಲಿಗೆ ಬಂದಿದ್ದಾರೆ. ಇಲ್ಲಿಂದ ಮೂವರೂ ಕೊಪ್ಪಳಕ್ಕೆ ಹೋಗುತ್ತೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ರಾಜಕೀಯ ಮಾಡುವಾಗ ನಾವು ರಾಜಕೀಯ ಮಾಡುತ್ತೇವೆ. ಅಭಿವೃದ್ಧಿ ದೃಷ್ಟಿಕೋನದಿಂದ ಕೆಲಸ ಮಾಡುವ ವಿಚಾರವಾಗಿ ಸೇರಿದ್ದೇವೆ. ಕಾಂಗ್ರೆಸ್‌ನಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ಅಸಮಾಧಾನ ಇಲ್ಲ. ಆದರೆ, ನಮ್ಮನ್ನು ಉಪಯೋಗಿಸಿಕೊಳ್ಳುತ್ತಿಲ್ಲ ಅನ್ನುವ ಬೇಸರ ಇದೆ ಅಷ್ಟೆ. ನಾನು ಸದಾ ಕಾಲ ಕೆಲಸ ಮಾಡುವವನು. ಸುಮ್ಮನೆ ಕುಳಿತುಕೊಳ್ಳುವವನಲ್ಲ ಎಂದು ಹೇಳಿದ್ದಾರೆ.
ಇನ್ನೂ ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ಜನರ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಸರಿಯಾದ ಪ್ರತಿಕ್ರಿಯೆ ಬರುತ್ತಿಲ್ಲ. ಇವೆಲ್ಲ ವಿಚಾರ ಇಟ್ಟುಕೊಂಡು ಸಿಎಂಗೆ ಶಾಸಕರಾದ ಬಸವರಾಜ ರಾಯರೆಡ್ಡಿ ಪತ್ರ ಬರೆದಿದ್ದಾರೆ. ಹೀಗಾಗಿ ಇದಕ್ಕೆ ಅನಾವಶ್ಯಕವಾಗಿ ಬೇರೆ ಅರ್ಥವನ್ನು ಕಲ್ಪಿಸುತ್ತಿದ್ದಾರೆ. ಯಲಬುರ್ಗಾ ಕ್ಷೇತ್ರದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮ್ಗಳ ಸಮಸ್ಯೆ ಇದೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಅಂತ ಅವರೇ ಹೇಳಿದ್ದಾರೆ ಎಂದರು.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications