ಪಂಚರಾಜ್ಯ ಚುನಾವಣೆ ಬಳಿಕ ಹೈಕಮಾಂಡ್ ಶಾಸಕರ ರಕ್ಷಣೆ ಜವಾಬ್ದಾರಿ ನೀಡಿದೆಯೇ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ಡಿಸೆಂಬರ್‌ 02: ಪಂಚರಾಜ್ಯ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಶಾಸಕರ ರಕ್ಷಣೆ ಜವಾಬ್ದಾರಿ ನೀಡಿದೆಯೇ ಎಂದು ಪ್ರಶ್ನೆ ಹುಟ್ಟಿಕೊಂಡಿದ್ದು, ಇದುವರೆಗೂ ನನಗೆ ಶಾಸಕರ ರಕ್ಷಣೆ ಜವಾಬ್ದಾರಿ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ ಎಂದು ಹೇಳಿದರು.

I Have Not Been Given The Responsibility Of Protecting MLAs Says Dk Shivakumar‌

ರಾಜಸ್ಥಾನದಲ್ಲಿ ತೀವ್ರ ಸ್ಪರ್ಧೆ ಇರುವ ಮುನ್ಸೂಚನೆ ಸಿಕ್ಕಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ನನ್ನದೇ ಆದ ಅಭಿಪ್ರಾಯವಿದೆ. ಮತಯಂತ್ರದಲ್ಲಿರುವ ಮತದ ಮಾಹಿತಿ ನಿಮಗೂ ಗೊತ್ತಿಲ್ಲ, ನಮಗೂ ಗೊತ್ತಿಲ್ಲ. 48 ತಾಸುಗಳ ನಂತರ ಎಲ್ಲವೂ ಹೊರಬೀಳಲಿದೆ. ಈ ಸಮೀಕ್ಷೆಗಳು ಸುಮಾರು 10 ಸಾವಿರ ಮತದಾರರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಲಾಗಿದೆ. ನಾವು ನಮ್ಮ ರಾಜ್ಯದಲ್ಲಿ ಪ್ರತಿ ಕ್ಷೇತ್ರದಲ್ಲಿ ಟಿಕೆಟ್ ನೀಡುವಾಗ 1 ಲಕ್ಷದಷ್ಟು ಜನರನ್ನು ಸಮೀಕ್ಷೆ ಮಾಡಿದ್ದೆವು. ತೆಲಂಗಾಣದಲ್ಲಿ ನಾನು 20 ಕ್ಷೇತ್ರ ಓಡಾಡಿದ್ದೇನೆ. ಬೇರೆ ಕ್ಷೇತ್ರಗಳಲ್ಲೂ ವರದಿ ಬಹಳ ಉತ್ತಮವಾಗಿದೆ ಎಂದು ತಿಳಿಸಿದರು.

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆ ಕುರಿತು ಮಾತನಾಡಿ, ಪಕ್ಷದ ಅಧ್ಯಕ್ಷ ಹೊರತಾಗಿ ವೈಯಕ್ತಿಕವಾಗಿ ನನಗೆ ಎಕ್ಸಿಟ್ ಪೋಲ್ ಗಳ ಮೇಲೆ ನಂಬಿಕೆ ಇಲ್ಲ. ನಮ್ಮ ರಾಜ್ಯದಲ್ಲಿ ನಾನು ಏನು ಮಾಡಿದ್ದೆ, ಯಾವ ರೀತಿ ಎಕ್ಸಿಟ್ ಪೋಲ್ ಗಳು ಬಂದವು ಎಂಬುದು ನನಗೆ ಗೊತ್ತಿದೆ. ಯಾರು ಕ್ಷೇತ್ರಗಳಲ್ಲಿ ಸುತ್ತಾಡಿರುತ್ತಾರೋ ಅವರಿಗೆ ಮಾತ್ರ ವಾಸ್ತವಾಂಶ ತಿಳಿದಿರುತ್ತದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಗೆದುಕೊಳ್ಳುವ ಮಾದರಿಗಳು ಅಲ್ಪಪ್ರಮಾಣದ್ದಾಗಿರುತ್ತದೆ. ಅದು ಇಡೀ ರಾಜ್ಯದ ಚಿತ್ರಣವನ್ನು ನಿರ್ಧರಿಸುವುದಿಲ್ಲ ಎಂದು ತಿಳಿಸಿದರು.

ಕೆಲ ರಾಜ್ಯಗಳಲ್ಲಿ ನೇರಹಣಾಹಣಿ ಇದ್ದು, ಆ ರಾಜ್ಯಗಳ ಶಾಸಕರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ಈ ಬಗ್ಗೆ ಗೊತ್ತಿಲ್ಲ. ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ. ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ ಎಂದು ತಿಳಿಸಿದರು.

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಉಚಿತ ಕೊಡುಗೆಗಳನ್ನು ಟೀಕೆ ಮಾಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾರಾಯಣ ಮೂರ್ತಿ ಅವರ ಸಲಹೆ ಜನರ ಅಭಿವೃದ್ಧಿಯ ಭಾಗವಾಗಿದೆ. ಅಂತಿಮವಾಗಿ ಸರ್ಕಾರದ ನಿರ್ಧಾರ ಅಂತಿಮ. ಸರ್ಕಾರ ರೈತರು, ಬಡವರಿಗೆ ನೆರವಾಗಬೇಕು. ಬೆಲೆ ಏರಿಕೆ ಸಮಸ್ಯೆಯನ್ನು ಜನಸಾಮಾನ್ಯರು ಹೇಗೆ ಎದುರಿಸಬೇಕು. 70 ರೂ. ಇದ್ದ ಪೆಟ್ರೋಲ್ ಬೆಲೆ 110 ರೂ. ಆಗಿದೆ ಇಂತಹ ಸಮಸ್ಯೆಗಳನ್ನು ಹೇಗೆ ನಿವಾರಣೆ ಮಾಡಬೇಕು? ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+