Siddaramaiah: ಮುಡಾ ವಿಚಾರದಲ್ಲಿ ನನಗೆ ಬೇಜಾರಿಲ್ಲ, ಯಾಕೆಂದರೆ ನಾನು ತಪ್ಪು ಮಾಡಿಲ್ಲ : ಸಿದ್ದರಾಮಯ್ಯ

ಮೈಸೂರು, ಜುಲೈ 29: ಬಿಜೆಪಿಯವರು ಸಾಕಷ್ಟು ಹಗರಣ ಮಾಡಿದ್ದಾರೆ. ಬಿಜೆಪಿಯವರು ಒಂದೇ ಒಂದು ತನಿಖೆಯನ್ನು ನ್ಯಾಯಾಂಗಕ್ಕೆ ಕೊಟ್ಟಿಲ್ಲ.ಮುಡಾ ವಿಚಾರದಲ್ಲಿ ನನಗೆ ಬೇಜಾರಿಲ್ಲ, ಯಾಕೆಂದರೆ ನಾನು ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,40 ವರ್ಷದ ರಾಜಕಾರಣದಲ್ಲಿ ನಾನು ಯಾವುದೇ ಹಗರಣ ಮಾಡಿಲ್ಲ. ನನ್ನ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ. ಮೂಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು.

I Have Not Done Anything Wrong With Muda Says Siddaramaiah

ಕೋವಿಡ್ 19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐ ಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು, ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ? ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಲ್ಲದ ಆರೋಪ ಈಗ ಬಂದಿರುವುದಕ್ಕೆ ಬೇಸರವಾಗಿದೆಯೇ ಎಂಬಾ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾನು ತಪ್ಪು ಮಾಡಿದ್ದರೆ ನನಗೆ ಬೇಸರವಾಗುತ್ತದೆ. ನಾನು ತಪ್ಪು ಮಾಡಿಲ್ಲ ಎಂದರು. ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ, ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಯಾವ ಸಿದ್ದಾಂತವಿದೆ. ಸಾಮಾಜಿಕ ನ್ಯಾಯ, ಜಾತ್ಯಾತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ವಿರುದ್ದವಾಗಿದ್ದಾರೆ ಎಂದರು.

ಮುದಾದಿಂದ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? ಬಹಳ ಮಾತನಾಡುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಯವರು 1984 ರಲ್ಲಿ ಕೈಗಾರಿಕಾ ನಿವೇಶನವನ್ನು ಪಡೆದರು. ಸ್ವಾದೀನಕ್ಕೆ ಕೂಡ ಪಡೆದಿದ್ದಾರೆ. ನಂತರ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಕೈಗಾರಿಕೆ ಮಾಡಿದ್ದಾರೆಯೇ? ಎಂಡಿ ಕೇಳಿದರು. ಸಿ ಐ ಡಿಬಿ ಇರುವಾಗ ಪುಟ್ಟಯ್ಯ ಇರುವಾಗ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಬಿಜೆಪಿ ಅಯೋಗ್ಯ ಅಧಿಕಾರಿಗಳನ್ನು ಸರ್ಕಾರ ಏಕೆ ಇಟ್ಟುಕೊಂಡಿದೆ ಎಂದು ಹೇಳಿರುವ ಬಗ್ಗೆ ಮಾತನಾಡಿ ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ.

ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ.ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐ ಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಯ ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+