Second Airport: 'ಈ ಜಿಲ್ಲೆಯಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ'
ತುಮಕೂರು, ಜನವರಿ 26: ತುಮಕೂರು ಜಿಲ್ಲೆಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಅಲ್ಲದೇ
ಈ ಕುರಿತು ಭಾನುವಾರ ತುಮಕೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ತುಮಕೂರಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ವಸಂತನರಸಾಪುರದಲ್ಲಿ ಮೂರು ಸಾವಿರ ಎಕರೆ ಭೂಮಿ ನೋಡಿದ್ದೇವೆ ಎಂದು ಗೃಹ ಸಚಿವರು ತಿಳಿಸಿದರು.

ಸೀಬಿ ದೇವಸ್ಥಾನದ ಬಳಿ 4-5 ಸಾವಿರ ಎಕರೆ ಭೂಮಿ ಗುರುತಿಸಿದ ಪ್ರಸ್ತಾವನೆ ಸರ್ಕಾರಕ್ಕೆ ಹೋಗಿದೆ. ತುಮಕೂರು ನಗರದ 2 ಕಡೆ ವಧಾಗಾರ ಮಾರುಕಟ್ಟೆ ನಿರ್ಮಾಣ ಆಗಲಿದೆ. ಅಮಾನಿಕೆರೆಗೆ ಗ್ಲಾಸ್ ಬ್ರಿಡ್ಜ್ ಮಾಡಲು ಉದ್ದೇಶಿಸಲಾಗಿದೆ. ಅಲ್ಲದೆ ಅಂಬೇಡ್ಕರ್ ಪುತ್ಥಳಿ ಟೌನ್ ಹಾಲ್‌ನಲ್ಲಿ ಸರ್ಕಲ್ ಮಾಡಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ಹೇಳಿದರು.
ಇದೇ ವೇಳೆ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಮೈಕ್ರೋ ಫೈನಾನ್ಸ್ ಬಗ್ಗೆ ನಿನ್ನೆ ಸರ್ಕಾರ ಸಭೆ ನಡೆಸಿದೆ. ಇರೋ ಕಾನೂನು ಭದ್ರ ಮಾಡುವುದು ಹಾಗೂ ಹೊಸ ಕಾನೂನು ಸೇರಿಸುವ ಬಗ್ಗೆ ಚಿಂತನೆ ನಡೆದಿದೆ. ಕಿರುಕುಳ ಕೊಡದಂತೆ ನಿರ್ದೇಶನ ನೀಡಲಾಗಿದೆ. ಒಂದು ವಾರದಲ್ಲಿ ಹೊಸ ಕಾನೂನು ವರದಿಯನ್ನು ರಾಜ್ಯಪಾಲರಿಗೆ ನೀಡಲಾಗುವುದು. ಪೊಲೀಸರಿಗೆ ಸುಮೋಟೋ ಕೇಸ್ ಹಾಕುವ ಅಧಿಕಾರ ಕೊಡುವ ಬಗ್ಗೆ ಚಿಂತನೆ ನಡೆದಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರಧಾನಿ ಅವರಿಗೆ ಪತ್ರ ಬರೆಯಲಿದ್ದಾರೆ. ಅನಧಿಕೃತ ಮೈಕ್ರೋ ಫೈನಾನ್ಸ್ ಕಂಪನಿಗಳ ಪತ್ತೆ ಹಚ್ಚಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.
ಇನ್ನೂ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದೆ. ಹಂತಹಂತವಾಗಿ ಅದನ್ನು ಭರ್ತಿ ಮಾಡುತ್ತೇವೆ ಎಂದು ಹೇಳಿದರು. ಇನ್ನೂ ತುಮುಲ್ ಅಧ್ಯಕ್ಷ ಚುನಾವಣೆ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು, ಅದರ ಬಗ್ಗೆ ನಾನು ಮಾತಡಲ್ಲ. ನಾಮಿನೇಷನ್ ಮಾಡಿ ಕಾನೂನಿನಲ್ಲಿ ಅವಕಾಶ ಇದೆ ಹಾಗಾಗಿ ಮಾಡಿದ್ದೇವೆ. ತುಘಲಕ್ ದರ್ಬಾರ್ ಅನ್ನೋದು ನನಗೆ ಗೊತ್ತಿಲ್ಲ. ಅವರು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಮಾಧುಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿ, ಹೇಗೆ ಅಂತ ಹೇಳಿ ಅವರೇ ಎಕ್ಸಪ್ಲೆನ್ ಮಾಡಲಿ. ನಾಮಿನೇಷನ್ ಮಾಡಲು ಅವಕಾಶ ಇದೆಯಲ್ವಾ ಅದಕ್ಕೆ ಮಾಡಲಾಗಿದೆ. ಅವರ ಪ್ರಕಾರ ಅವರಿಗೆ ತಿಳಿದ್ದಿದ್ದು ಹೇಳಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದರು. ಇನ್ನೂ ಫೆಬ್ರವರಿ 02 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರವು ಮಂಡಿಸಲು ಹೊರಟಿರುವ ಬಜೆಟ್‌ನಲ್ಲಿ ಬೆಂಗಳೂರಿಗೆ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಘೋಷಣೆಯಾಗಬಹುದು ಎಂಬ ಭರವಸೆ ಇದೆ.












Click it and Unblock the Notifications