ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ: ಮತ್ತೆ ಚಿತ್ರರಂಗವನ್ನ ಕುಟುಕಿದ ಡಿ ಕೆ ಶಿವಕುಮಾರ್‌

ಬೆಂಗಳೂರು, ಮಾರ್ಚ್‌ 04: ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಹೇಳಿಕೆ ನೀಡಿದ ಬಳಿಕ ನಟ್ಟು- ಬೋಲ್ಟ್ ವಿಚಾರವಾಗಿ ವಿಪಕ್ಷಗಳು ಟೀಕೆ ಮಾಡುತ್ತಿದ್ದು, ಮತ್ತೆ ಚಿತ್ರರಂಗದ ಕುರಿತು ಡಿ ಕೆ ಶಿವಕುಮಾರ್‌ ಕುಟುಕಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಟೀಕೆ ಮಾಡಲಿ ಎಂದು ನಾನು ಹೇಳಿಕೆ ನೀಡಿದ್ದು. ನಾನು ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎನ್ನುವುದು ನನಗೆ ಗೊತ್ತಿದೆ. ಸಹಾಯ ತೆಗೆದುಕೊಂಡವರಿಗೆ ಗೊತ್ತಿದೆ. ನಾನು ಅವರಿಗೆ ರಾಜ್ಯದ ಹಿತಕ್ಕಾಗಿ ಹೇಳಿದ್ದೇನೆ. ನೆಲ, ಜಲ, ಭಾಷೆ ಉಳಿಯಬೇಕು. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವ ಯಾರಿಗಾಗಿ ಮಾಡಿರುವುದು. ಚಿತ್ರರಂಗ ಬೆಳೆಯಲಿ ಎಂದು. ಅವರ ಕ್ಷೇತ್ರದ ಬಗ್ಗೆ ಅವರೇ ಪ್ರಚಾರ ಮಾಡಿಕೊಳ್ಳದೇ ಇದ್ದರೆ ನಾವು ಬೆಳಗ್ಗೆ ಸಂಜೆ ಪ್ರಚಾರ ಮಾಡಿಕೊಳ್ಳಲು ಆಗುತ್ತದೆಯೇ? ಎಂದು ತಿರುಗೇಟು ನೀಡಿದರು.

I Have The Strength To Live Without Cinema Says DCM DK Shivakumar

ಚಿತ್ರರಂಗದವರಿಗೆ ಆಹ್ವಾನವನ್ನೇ ಮಾಡಿಲ್ಲ ಎನ್ನುವ ನಾಗಭರಣ ಅವರ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಆಹ್ವಾನ ಮಾಡದೇ ಇರಬಹುದು. ಈ ಬಗ್ಗೆ ನಮ್ಮ ಇಲಾಖೆಯ ತಪ್ಪಿದೆಯೋ ಯಾರ ತಪ್ಪಿದೆ ಗೊತ್ತಿಲ್ಲ. ಆದರೆ ಈ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಟೀಕೆ ಮಾಡುತ್ತಾರೆ ಎಂದು. ಆದರೆ ಎಚ್ಚರಿಕೆ ಕೊಡಬೇಕಲ್ಲವೇ? ಟೀಕೆ ಮಾಡುವುದರಿಂದ ನನಗೆ ಬೇಸರವಿಲ್ಲ. ನಾವು ತಪ್ಪು ಮಾಡಿದ್ದರೇ ಸರಿ ಮಾಡಿಕೊಳ್ಳೋಣ, ಅವರು ತಪ್ಪು ಮಾಡಿದ್ದರೆ ಅವರು ಸರಿ ಮಾಡಿಕೊಳ್ಳಲಿ. ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು ಎಂದರೆ ಸರ್ಕಾರ ಹಾಗೂ ಜನ ಬೇಕು ಎಂದು ಖಡಕ್ ಉತ್ತರ ನೀಡಿದರು.

ಬಿಬಿಎಂಪಿ ಸರ್ಕಾರಿ ಕಚೇರಿಗಳಿಗೆ ತೆರಿಗೆ ಬಾಕಿ ಬಗ್ಗೆ ನೋಟಿಸ್ ನೀಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು ಹಣ ಸಂಗ್ರಹ ಮಾಡಬೇಕಲ್ಲವೇ. ಬಿಬಿಎಂಪಿ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಸರ್ಕಾರಿ ಕಚೇರಿಯಾದರೂ ಒಂದಷ್ಟು ಬಿಲ್ ಗಳನ್ನು ಕಟ್ಟಲೇ ಬೇಕು. ವಿದ್ಯುತ್ ಬಿಲ್ ಸೇರಿದಂತೆ ಇತರೇ ಬಿಲ್ ಗಳನ್ನು ಕಟ್ಟಲೇಬೇಕು. ಈ ವಿಚಾರ ಕಳೆದ 20- 30 ವರ್ಷಗಳಿಂದ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ರಾಜಭವನ, ವಿಧಾನಸೌಧಗಳು ಈ ವ್ಯಾಪ್ತಿಗೆ ಬರುತ್ತವೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಹೌದು ಎಲ್ಲರೂ ತೆರಿಗೆ ಪಾವತಿ ಮಾಡಲೇಬೇಕು. ಸರ್ಕಾರಿ ಕಟ್ಟಡಗಳ ಆಸ್ತಿ ತೆರಿಗೆ ಬಾಕಿ ರೂ.150 ಕೋಟಿಗೂ ಹೆಚ್ಚು ಬಾಕಿ ಇದೆ ಎಂದು ಮರು ಪ್ರಶ್ನಿಸಿದಾಗ, ಎಲ್ಲವನ್ನು ಸಂಗ್ರಹ ಮಾಡಲಾಗುವುದು. ಯಾವುದಕ್ಕೂ ನಾವು ವಿನಾಯಿತಿ ನೀಡಬಾರದು. ಎಲ್ಲರೂ ತೆರಿಗೆ ಕಟ್ಟಲೇಬೇಕು. ವಿದ್ಯುತ್ ಪೂರೈಕೆದಾರರಿಗೆ ನಾವು ಬಿಲ್ ನೀಡದೇ ಇದ್ದರೇ ಶೇ 18 ರಷ್ಟು ಬಡ್ಡಿ ತೆರಬೇಕಾಗುತ್ತದೆ. ಇನ್ನೂ ಶಾಸಕರ ಸಂಬಳ ಹೆಚ್ಚಳದ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.

ವಿಧಾನಸೌಧ ನಡೆದು ಬಂದ ದಾರಿ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟನೆ ಮಾಡಿದ ಕುರಿತು ಮಾತನಾಡಿ. ಇತಿಹಾಸ ಮರೆತವನು ಇತಿಹಾಸ ಸೃಷ್ಟಿ ಮಾಡಲಾರ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದಾರೆ. ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ವಿಧಾನಸೌಧ ಮತ್ತು ಸುವರ್ಣಸೌಧಕ್ಕೆ ವಿಶೇಷ ಮೆರುಗು ನೀಡುತ್ತಿದ್ದಾರೆ. ಸುವರ್ಣ ಸೌಧದಲ್ಲಿ ಬಸವಣ್ಣನವರ ಕಾಲದ ಪ್ರಪಂಚದ ಮೊದಲ ಸಂಸತ್ತು ಅನುಭವ ಮಂಟಪದ ಚಿತ್ರವನ್ನು ಅನಾವರಣಗೊಳಿಸಿದರು.

ಮೈಸೂರು 150 ವರ್ಷಗಳ ಕಾಲದ ಹಿಂದೆ ನಡೆಯುತ್ತಿದ್ದ ವಿಧಾನಸಭೆ ಕಲಾಪದ ಚಿತ್ರದಿಂದ ಹಿಡಿದು, ನೆಹರು ಅವರು ವಿಧಾನಸೌಧಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಚಿತ್ರವನ್ನು ಕೂಡ ಪ್ರದರ್ಶಿಸಲಾಗಿದೆ. ಮುಂದಿನ ದಿನಗಳಲ್ಲಿ ಇದು ಸಾರ್ವಜನಿಕರಿಗೂ ಉಪಯೋಗವಾಗಬೇಕು, ಅವರಿಗೂ ಜ್ಞಾನೋದಯವಾಗಬೇಕು, ಇತಿಹಾಸದ ಪರಿಚಯವಾಗಬೇಕು. ಖಾದರ್ ಅವರು ಇತಿಹಾಸ ಸೃಷ್ಟಿ ಮಾಡುತ್ತಿದ್ದಾರೆ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+