ಮೈತ್ರಿ ಸರ್ಕಾರ ತೆಗೆಯಲು ಸಿದ್ದವನದಲ್ಲಿ ಅದಕ್ಕೆ ಔಷಧಿ ಅರೆದ್ರಲ್ವಾ?: ಕೈ ನಾಯಕರನ್ನ ತರಾಟೆಗೆ ತೆಗೆದುಕೊಂಡ ಹೆಚ್ಡಿಕೆ

ಬೆಂಗಳೂರು, ಏಪ್ರಿಲ್‌ 11: ನನ್ನ ನೇತೃತ್ವದ ಮೈತ್ರಿ ಸರಕಾರ ಹೋಗಲಿಕ್ಕೆ ಕಾಂಗ್ರೆಸ್ ನಾಯಕರು ಏನೆಲ್ಲಾ ಮಾಡಿದರು ಎನ್ನುವುದು ನನಗೆ ಗೊತ್ತಿದೆ. ಆಗ ಕಾಂಗ್ರೆಸ್ ನಾಯಕರಲ್ಲಿಯೇ ಯಾಕೆ ಸಂಘರ್ಷ ನಡೆಯಿತು ಎನ್ನುವುದೂ ತಿಳಿದಿದೆ. ಧರ್ಮಸ್ಥಳದ ಸಿದ್ದವನದಲ್ಲಿ ಏನೇನ್ ನಡೆಯಿತು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ನಾಯಕರನ್ನ ತರಾಟೆಗೆ ತೆಗೆದುಕೊಂಡರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಕುಮಾರಸ್ವಾಮಿ, ಸರಕಾರ ರಚನೆಯಾದ ಮೂರೇ ತಿಂಗಳಿಗೆ ಲೋಕಸಭೆ ಚುನಾವಣೆ ಹೊತ್ತಿಗೆ ಸರಕಾರ ಹೋಗುತ್ತದೆ ಎಂದು ಹೇಳಿದವರು ಯಾರು? ಐದು ವರ್ಷ ಬೇಷರತ್ ಬೆಂಬಲ ಕೊಡುತ್ತೇವೆ ಎಂದಿದ್ದರು. ಆಮೇಲೆ ಏನಾಯಿತು? ಸಿದ್ದವನದಲ್ಲಿ ಅದಕ್ಕೆ ಔಷಧಿ ಅರೆದ್ರಲ್ವಾ? ಎಂದು ವಾಗ್ದಾಳಿ ನಡೆಸಿದರು.

I Know What Congress Leaders Did To Make Coalition Government Go HD Kumaraswamy Said

ನಾನು ಎಂದೂ ಸಹ ಅಧಿಕಾರದಲ್ಲಿದ್ದಾಗ ನಮ್ಮ ಸಮುದಾಯದ ಸ್ವಾಮೀಜಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಕೆಲಸ ಮಾಡಿಲ್ಲ. ನಾನು ಎಂದೂ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜಾತ್ಯತೀತ ಅಂತ ಹೇಳೋರು, ಪ್ರತೀ ದಿನ ಜಾತಿ ಬಗ್ಗೆಯೇ ಮಾತಾಡ್ತಾರೆ. ನಮ್ಮ ಸಮಾಜದ ಜನ ದಡ್ಡರಲ್ಲ. ಇವರು ನಡೆಸುತ್ತಿರುವ ರಾಜಕೀಯ ಎಲ್ಲರಿಗೂ ಅರ್ಥ ಆಗುತ್ತಿದೆ ಎಂದು ಕಿಡಿಕಾರಿದರು.

ಪ್ರತಿ ಯುಗಾದಿ ಹಬ್ಬದ ಮೇಲೆ ನಮ್ಮ ಗುರುಗಳ ಆಶೀರ್ವಾದ ಪಡೆಯುವುದು ನಾವು ಪಾಲಿಸಿಕೊಂಡು ಬಂದಿರುವ ಸಂಪ್ರದಾಯ. ನಮ್ಮ ಪಕ್ಷದವರು, ಬಿಜೆಪಿ ನಾಯಕರು ಒಟ್ಟಾಗಿ ಬಂದು ಆಶೀರ್ವಾದ ಪಡೆದಿದ್ದೇವೆ. ಇದರಲ್ಲಿ ತಪ್ಪೇನು? ಎಂದು ಪ್ರಶ್ನಿಸಿದರು. ಪರಮಪೂಜ್ಯ ಶ್ರೀಗಳನ್ನು ಭೇಟಿ ಮಾಡಿ ಅವರನ್ನು ಬಳಸಿಕೊಳ್ಳುವ ಪ್ರಯತ್ನ ಮೊನ್ನೆ ಕಾಂಗ್ರೆಸ್ ಮಾಡಿದೆ. ರಾಜಕೀಯಕ್ಕೂ ಧರ್ಮಕ್ಕೂ ಏನ್ ಸಂಬಂಧ? ಧಾರ್ಮಿಕವಾಗಿ ನಾಡಿಗೆ ಮಾರ್ಗದರ್ಶನ ಮಾಡುತ್ತಿರುವ ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ನಾನು ಕಾಂಗ್ರೆಸ್ ಕಚೇರಿಯನ್ನು ಹೆಡ್ಡಾಫೀಸ್ ಮಾಡಿಕೊಳ್ಳಲು ಸಾಧ್ಯವೇ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

I Know What Congress Leaders Did To Make Coalition Government Go HD Kumaraswamy Said

ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್. ಅದರಲ್ಲಿ ತಪ್ಪೇನಿದೆ? ನಾನು ಪಕ್ಷದ ಅಧ್ಯಕ್ಷನಿದ್ದೇನೆ. ಅಲ್ಲಿ ನಾನು ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ. ಅಲ್ಲದೆ, ನನ್ನ ತೋಟದಲ್ಲಿ 120 ಜನ ಈಗಲೂ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಮಾಡಬಾರದು ಅನ್ನೋಕೆ ಅದೇನು ಕಾಂಗ್ರೆಸ್ ಹೆಡ್ಡಾಫೀಸಾ? ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು.

ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಮೊದಲು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಪಾದಯಾತ್ರೆಯಲ್ಲಿ ತೂರಾಡಿದ್ದು ಯಾರು? ನಾನು ತೂರಾಡಿದ್ನಾ? ನನಗೂ ಏನು ಮಾಡಬೇಕು, ಮಾಡಬಾರದು ಎಂದು ಗೊತ್ತಿದೆ. ಅಲ್ಲಿನ ತಹಶಿಲ್ದಾರ್ ಅವರಿಗೆ ಪದೇಪದೆ ಫೋನ್ ಕರೆ ಮಾಡಿ ಒತ್ತಡ ಹೇರಿದ್ದಾರೆ. ಏನು ಸಿಕ್ಕಿಲ್ಲ ಅಲ್ಲಿ. ಇಷ್ಟು ಚುನಾವಣೆ ಮಾಡಿದವನಿಗೆ ಏನು ಮಾಡಬೇಕು ಅನ್ನೋದು ಗೊತ್ತಿಲ್ಲವಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ನಾವು ಬಿಡದಿ ತೋಟದಲ್ಲಿ ಗ್ಲಾಸ್ ಇಟ್ಟು ಪಾರ್ಟಿ ಮಾಡ್ತಿಲ್ಲ, ಹಾಗೆ ಮಾಡೋದು ಕಾಂಗ್ರೆಸ್ ಸಂಸ್ಕೃತಿ. ಅಂತಹ ಕೆಲಸವನ್ನು ಕಾಂಗ್ರೆಸ್ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+