ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ: ಉದ್ಧವ್ ಠಾಕ್ರೆಗೆ ಲಕ್ಷ್ಮಣ ಸವದಿ ತಿರುಗೇಟು

|
Google Oneindia Kannada News

ಬೆಂಗಳೂರು, ಜನವರಿ 28: ಕರ್ನಾಕಕದಲ್ಲಿನ ಮರಾಠಿ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು. ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

ಮುಂಬೈ ಅನ್ನು ಅಧಿಕೃತವಾಗಿ ಕರ್ನಾಟಕಕ್ಕೆ ಸೇರಿಸುವವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಗಡಿ ವಿವಾದ; ಮತ್ತೊಂದು ಆಗ್ರಹ ಮುಂದಿಟ್ಟ ಮಹಾರಾಷ್ಟ್ರ ಸಿಎಂಗಡಿ ವಿವಾದ; ಮತ್ತೊಂದು ಆಗ್ರಹ ಮುಂದಿಟ್ಟ ಮಹಾರಾಷ್ಟ್ರ ಸಿಎಂ

ಈ ಭಾಗವನ್ನು ಮುಂಬೈ-ಕರ್ನಾಟಕ ಎಂದು ಕರೆಯಲಾಗುತ್ತದೆ. ಅಂದರೆ ಮಹಾರಾಷ್ಟ್ರ ರಾಜಧಾನಿ ಮುಂಬೈ ಮೇಲೆ ನಮಗೆ ಕೂಡ ಹಕ್ಕು ಇದೆ ಎಂದಾಯ್ತು. ನಾವು ಮುಂಬೈ ಕರ್ನಾಟಕ ಭಾಗದವರು. ಮುಂಬೈ ನಮ್ಮದು. ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸುವ ಕುರಿತು ಮಹಾಜನ್ ಆಯೋಗದ ತೀರ್ಪು ಬಂದಿದೆ. ಇನ್ನು ಮುಂಬೈ ಕೂಡ ನಮ್ಮದು ಎಂಬ ಬೇಡಿಕೆ ಇಡಲು ಶುರುಮಾಡುತ್ತೇವೆ. ನಮ್ಮ ಬೇಡಿಕೆ ಈಡೇರುವವರೆಗೂ ಮುಂಬೈ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಕರೆಯುವಂತೆ ಆಗ್ರಹಿಸುತ್ತೇವೆ ಎಂದು ತಿಳಿಸಿದ್ದಾರೆ. ಮುಂದೆ ಓದಿ.

ಮಹಾಜನ್ ವರದಿ ಅಂತಿಮ

ಮಹಾಜನ್ ವರದಿ ಅಂತಿಮ

ಗಡಿ ವಿಷಯದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂದು ಕರ್ನಾಟಕ ಸಾವಿರ ಸಲ ಹೇಳಿದೆ. ಆದರೆ ಗಡಿ ಸಮಸ್ಯೆಯನ್ನು ಜೀವಂತವಾಗಿ ಇರಿಸಲು ಬಯಸುವ ಮಹಾರಾಷ್ಟ್ರ ಮಾತ್ರ ಆಗಾಗ ತಕರಾರು ತೆಗೆಯುತ್ತಲೇ ಇದೆ ಎಂದು ಲಕ್ಷ್ಮಣ ಸವದಿ ಕಿಡಿಕಾರಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಘೋಷಿಸಿ

ಕೇಂದ್ರಾಡಳಿತ ಪ್ರದೇಶ ಘೋಷಿಸಿ

'ಮಹಾರಾಷ್ಟ್ರ-ಕರ್ನಾಟಕ ಗಡಿ ತಗಾದೆ-ಹೋರಾಟ ಮತ್ತು ನಿಶ್ಚಯ' ಎಂಬ ಪುಸ್ತಕ ಬಿಡುಗಡೆ ಮಾಡಿ ಬುಧವಾರ ಮಾತನಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಸುಪ್ರೀಂಕೋರ್ಟ್‌ನಲ್ಲಿ ಬಗೆಹರಿಯುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಆಗ್ರಹಿಸಿದ್ದರು.

ಮತ್ತೆ ಗಡಿ ಕಿಡಿ ಹೊತ್ತಿಸಲು ಮುಂದಾದ ಮತ್ತೆ ಗಡಿ ಕಿಡಿ ಹೊತ್ತಿಸಲು ಮುಂದಾದ "ಮಹಾ' ಸರ್ಕಾರ: ವಿವಾದಿತ ಪುಸ್ತಕ ಬಿಡುಗಡೆ

ಕರ್ನಾಟಕದಿಂದ ದೌರ್ಜನ್ಯ

ಕರ್ನಾಟಕದಿಂದ ದೌರ್ಜನ್ಯ

'ಗಡಿಭಾಗದಲ್ಲಿನ ಮರಾಠಿ ಭಾಷಿಕರ ಮೇಲೆ ಕರ್ನಾಟಕ ದೌರ್ಜನ್ಯ ನಡೆಸುತ್ತಿದೆ. ಇದನ್ನು ತಡೆಯಬೇಕೆಂದರೆ ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು. ಪ್ರಕರಣ ನ್ಯಾಯಾಲಯದಲ್ಲಿ ಇದ್ದರೂ ಕರ್ನಾಟಕ ಸರ್ಕಾರ ಉದ್ದೇಶಪೂರ್ವಕವಾಗಿ ಬೆಳಗಾವಿಯ ಹೆಸರನ್ನು ಬದಲಿಸಿತ್ತು. ಬೆಳಗಾವಿಯನ್ನು ಎರಡನೆಯ ರಾಜಧಾನಿಯನ್ನಾಗಿ ಮಾಡಿ ವಿಧಾನಸಭೆ ಅಧಿವೇಶನ ಕೂಡ ನಡೆಸಿದೆ. ನಾವು ಕಾನೂನು ಬಗ್ಗೆ ಯೋಚಿಸುತ್ತೇವೆ, ಆದರೆ ಕರ್ನಾಟಕ ಅದಕ್ಕೆ ಬೆಲೆ ನೀಡುತ್ತಿಲ್ಲ. ನಾವೆಲ್ಲರೂ ಜತೆಗೂಡಿದರೆ ಅದನ್ನು ಮಹಾರಾಷ್ಟ್ರದ ಭಾಗವನ್ನಾಗಿ ಮಾಡುತ್ತೇವೆ' ಎಂದು ಉದ್ಧವ್ ಠಾಕ್ರೆ ಹೇಳಿದ್ದರು.

ಠಾಕ್ರೆ ವಿರುದ್ಧ ಸಿದ್ದರಾಮಯ್ಯ ಕಿಡಿ

ಠಾಕ್ರೆ ವಿರುದ್ಧ ಸಿದ್ದರಾಮಯ್ಯ ಕಿಡಿ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿ ಗಡಿ ವಿವಾದದ ಬಗೆಗಿನ ಪುಸ್ತಕ ಬಿಡುಗಡೆ ಮಾಡಿ ಅನಗತ್ಯವಾಗಿ‌ ಕರ್ನಾಟಕವನ್ನು ಕೆಣಕುವ ಉದ್ದಟತನ ತೋರಿಸಿದ್ದಾರೆ. ಒಬ್ಬ ಮುಖ್ಯಮಂತ್ರಿ ಮತ್ತೆ ಮತ್ತೆ ಈ ರೀತಿ ಪುಂಡು-ಪೋಕರಿ ರೀತಿ‌ ವರ್ತಿಸುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

English summary
I request Central govt to declare Mumbai as a Union Territory, DCM Laxman Savadi hits back at Uddhav Thackeray for demanding to declare Belagavi as UT.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X