ಜಾತಿ ಗಣತಿ ಆರಂಭಿಸಿದ್ದೇ ನಾನು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 30: ಪ್ರತಿಯೊಂದು ಜಾತಿ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿ ಗತಿ ತಿಳಿಯುವುದಕ್ಕೆ ಮತ್ತು ಸಂವಿಧಾನದ ಆಶಯಗಳನ್ನು ಕಾರ್ಯಕ್ರಮಗಳ ಮೂಲಕ ಎಲ್ಲಾ ಸಮುದಾಯಗಳಿಗೂ ತಲುಪಿಸುವುದಕ್ಕಾಗಿ ನಾನೇ ಜಾತಿಗಣತಿ ಆರಂಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಹೇಳಿದ್ದ ಎಚ್ಚರಿಕೆ ಮಾತುಗಳನ್ನು ನಾವು ಮರೆಯಬಾರದು. ಜಾತಿ ಗಣತಿಗೆ ಕಾಂಗ್ರೆಸ್ ಬದ್ದವಾಗಿದೆ. ಇಡೀ ದೇಶದಲ್ಲಿ ಜಾರಿ ಮಾಡಲು ಕಾಂಗ್ರೆಸ್ ಬದ್ದವಾಗಿದೆ ಎಂದರು.

ಸಮಾಜ ಸೇವಕ ದಿವಂಗತ ಲಿಂಗಪ್ಪಗೆ ಮರಣೋತ್ತರ ಕನಕಶ್ರೀ ಪ್ರಶಸ್ತಿ ಲಭಿಸಿದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಕನಕದಾಸರ ಕುರಿತ ಸಾಹಿತ್ಯ ಕೃಷಿ ಮಾಡದಿದ್ದರೂ ಕನಕದಾಸರ ತತ್ವಾದರ್ಶಗಳನ್ನು ಪಾಲಿಸುತ್ತಾ, ಜನ ಸೇವಕರಾಗಿದ್ದ ಲಿಂಗಪ್ಪ ಅವರನ್ನು ಕನಕಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಅತ್ಯಂತ ಸೂಕ್ತ ಎಂದು ಮೆಚ್ಚುಗೆ ಸೂಚಿಸಿದರು.
ಕುರುಬರಾಗಿ ನಾವು ಜನಿಸಿರಬಹುದು, ವಿಶ್ವ ಮಾನವರಾಗಿ ಬಾಳೋಣ-ಸಿದ್ದರಾಮಯ್ಯ
ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯರಾಗಿದ್ದರು. ದಾಸಪಂಥಕ್ಕೆ ಪ್ರವೇಶಿಸುವ ಮೊದಲು ಕನಕರು ಪಾಳೇಗಾರರಾಗಿದ್ದರು. ಆದಿಕೇಶವನ ಭಕ್ತರಾಗಿ ದಾಸರಾಗಿ, ದಾಸಶ್ರೇಷ್ಠರೂ ಆದರು. ಆದರೆ ಕನಕದಾಸರ ಕೀರ್ತನೆಗಳಲ್ಲಿ ಅತ್ಯುನ್ನತ ಮಾನವೀಯ ಮೌಲ್ಯಗಳಿವೆ ಎಂದು ವಿವರಿಸಿದರು.
ನಾನು ಕುರುಬನಾಗಿ ಜನಿಸಿದ್ದೇನೆ. ನೀವುಗಳೂ ಕುರುಬ ಸಮುದಾಯದಲ್ಲಿ ಜನಿಸಿರಬಹುದು. ಹಾಗಂದ ಮಾತ್ರಕ್ಕೆ ಕುರುಬರಾಗೇ ಸಾಯಬೇಕಾ? ಅಪ್ಪಟ ಮನುಷ್ಯರಾಗಿ ಸಾಯಬೇಕು ಅಲ್ವಾ ಎಂದರು.
ಕನಕದಾಸರನ್ನು ಶೂದ್ರ ಜಾತಿಯವ ಎನ್ನುವ ಕಾರಣಕ್ಕೆ ಕೃಷ್ಣನ ದರ್ಶನಕ್ಕೆ ಬಿಡಲಿಲ್ಲ. ಕುವೆಂಪು ಅವರು ಹೇಳಿದಂತೆ ನಾವೆಲ್ಲಾ ವಿಶ್ವ ಮಾನವರಾಗಲು ಸಾಧ್ಯವಾಗದಿದ್ದರೂ ವಿಶ್ವ ಮಾನವರಾಗುವ ಮಾರ್ಗದಲ್ಲಿ ಸಾಗಬೇಕು. ಆ ಮೂಲಕ ನಾವೆಲ್ಲಾ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಕನಕದಾಸರ 500 ನೇ ಜಯಂತಿಯನ್ನು ಮಾಡಿದ್ದು ನಾನೇ. ಅಲ್ಲಿಯವರೆಗೂ 400 ನೇ ಜಯಂತಿಯನ್ನು ಯಾರೂ ಆಚರಿಸಿರಲಿಲ್ಲ. ಸುಖಾ ಸುಮ್ಮನೆ ಎಲ್ಲರಿಗೂ ಚಪ್ಪಾಳೆ ತಟ್ಟಬೇಡಿ. ನಿಮ್ಮಲ್ಲೊಂದು ತತ್ವ ಇರಲಿ. ಮೂರು ವರ್ಷಗಳಿಂದ ಕನಕಶ್ರೀ ಪ್ರಶಸ್ತಿಯನ್ನೇ ಕೊಟ್ಟಿಲ್ಲ. ಆದರೂ ಅವರಿಗೂ ಚಪ್ಪಾಳೆ ತಟ್ಟೋದು, ಇಲ್ಲಿ ಬಂದು ನನಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ನಿಮಗೆ ಸ್ಪಷ್ಟತೆ ಇರಲಿ. ಕನಕದಾಸರು ಒಂದು ಜಾತಿಗೆ ಸೇರಿದವರಲ್ಲ. ಕುರುಬ ಜಾತಿಯವರನ್ನು ಮೆಚ್ಚಿಸಲು ಕನಕ ಜಯಂತಿ ಮಾಡುತ್ತಿಲ್ಲ. ಕನಕದಾಸರು ವಿಶ್ವ ಮಾನವರಾಗಿದ್ದರು. ಅವರ ತತ್ವಾದರ್ಶಗಳನ್ನು ಪಾಲಿಸಿ ವಿಶ್ವ ಮಾನವರಾಗೋಣ ಎಂದು ಸಭಿಕರಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ತಿಂಥಣಿಯ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮೀಜಿ, ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಮಾಜಿ ಸಚಿವ ಎಚ್. ಎಂ. ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್












Click it and Unblock the Notifications