SM Krishna Death: ನಾನು ವಿದ್ಯಾರ್ಥಿಯಾಗಿದ್ದಾಗ ಕೃಷ್ಣ ಅವರ ಅಭಿಮಾನಿಯಾಗಿದ್ದೆ: ಸದನದಲ್ಲಿ ಸಿದ್ದರಾಮಯ್ಯ ಸಂತಾಪ

ಬೆಳಗಾವಿ, ಡಿಸೆಂಬರ್‌ 10: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಲಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅಗಲಿದ ನಾಯಕ ಎಸ್.ಎಂ.ಕೃಷ್ಣ ಅವರಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೂಡ ವಿಧಾನಸಭೆ ಕಲಾಪದಲ್ಲಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಸುಧೀರ್ಘ ರಾಜಕಾರಣ ಮಾಡಿದ್ದಾರೆ. ನಾನು ವಿದ್ಯಾರ್ಥಿಯಾಗಿದ್ದ ವೇಳೆ ಅವರ ಅಭಿಮಾನಿಯಾಗಿದ್ದೆ. ಅವರು ಮುತ್ಸದ್ಧಿ ರಾಜಕಾರಣಿಯಾಗಿದ್ದರು ಎಂದು ತಿಳಿಸಿದ್ದಾರೆ.

ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.‌ ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ. ಎಸ್.ಎಂ.ಕೃಷ್ಣ ಅವರು, 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು. ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ. ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.

ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಪರಮೇಶ್ವರ ಸಂತಾಪ

ಮಾಜಿ‌ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ಕರ್ನಾಟಕ ಕಂಡಂತ ಮೇರು ವ್ಯಕ್ತಿತ್ವದ ಅಪ್ರತಿಮಾ ರಾಜಕಾರಣಿ, ದೂರದೃಷ್ಟಿಯುಳ್ಳ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿರುವುದು ಅತೀವ ನೋವನ್ನುಂಟು ಮಾಡಿದೆ. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾಗದ ನಷ್ಟ.

ರಾಜ್ಯದ‌ ಉಪಮುಖ್ಯಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ಅವರು ಕೈಗೊಂಡ ಜನಪರ ಕಾರ್ಯಗಳು ಅನನ್ಯ. ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕವನ್ನು, ಪ್ರಮುಖವಾಗಿ ಬೆಂಗಳೂರು ನಗರವನ್ನು ವಿಶ್ವಕ್ಕೆ ಪರಿಚಯಿಸಿದರು. ಈ ಮೂಲಕ ರಾಜ್ಯದ ಲಕ್ಷಾಂತರ ಯುವಕರಿಗೆ ಉದ್ಯೋಗ ಕಲ್ಪಿಸಿದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಅವರ ರಾಜಕೀಯ ಜೀವನ ನನಗೆ ಅನುಕರಣೀಯ.

ಮೃತರ ಆತ್ಮಕ್ಕೆ ಚಿರ ಶಾಂತಿ ಕೊರುತ್ತೇನೆ. ಅವರ ಕುಟುಂಬ ವರ್ಗ, ಅಭಿಮಾನಿಗಳು, ಆಪ್ತರಿಗೆ ದುಃಖ ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಸಚಿವರು ಸಂತಾಪದಲ್ಲಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+