MLA Munirathna: ಆರ್‌ ಅಶೋಕ್‌ಗೆ ಏಡ್ಸ್‌ ರೋಗಿಯ ರಕ್ತ ಇಂಜೆಕ್ಟ್‌ ಗೆ ಮುನಿರತ್ನ ಪ್ಲಾನ್: ದಿಗ್ಬ್ರಮೆಗೊಂಡ ಡಿ ಕೆ ಶಿವಕುಮಾರ್

ಬೆಂಗಳೂರು, ಸೆಪ್ಟೆಂಬರ್‌ 21: ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಅವರಿಗೆ ಹೂ ಗುಚ್ಛ ನೀಡುವ ನೆಪದಲ್ಲಿ ಕೈಗೆ ಗ್ಲೌಸ್‌ ಹಾಕಿಕೊಂಡು HIV ಸೋಂಕಿತೆಯ ರಕ್ತದ ಟ್ಯೂಬ್‌ ಅಂಟಿಸಿದ್ದರು ಎಂಬ ಸ್ಟೋಕಟ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬೆಚ್ಚಿ ಬಿದಿದ್ದಾರೆ.

‌ಶಾಸಕ ಮುನಿರತ್ನ ಪ್ರಕರಣಗಳ ವಿಚಾರವಾಗಿ ಎಸ್ ಐಟಿ ರಚನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಅನೇಕರು ಒತ್ತಡ ಹಾಕುತಿರುವ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ, ನನಗೆ ಸಿಎಂ ಭೇಟಿ ಸಾಧ್ಯವಾಗಿಲ್ಲ. ಆದರೆ ಆರ್. ಅಶೋಕ್ ಮೇಲೆ ಮಾಡಿದ್ದ ಸಂಚು ಕೇಳಿ ದಿಗ್ಬ್ರಮೆಯಾಗಿದ್ದೇನೆ. ಈ ರೀತಿಯ ಸಂಚನ್ನು ನಾನು ಇಡೀ ಪ್ರಪಂಚದಲ್ಲಿಯೇ ಕೇಳಿಲ್ಲ ಎಂದರು.

I Was Shocked To Hear The Plot That Munirathna Had Made On R Ashok DK Shivakumar

ಮುನಿರತ್ನ ವಿಚಾರವಾಗಿ ಅಶೋಕ್ ಅವರು ಮೊದಲು ಮಾತನಾಡಿದ್ದನ್ನು ಕೇಳಿದ್ದೆ. ಈಗ ಮಾತನಾಡಿದ್ದನ್ನು ನಾನು ನೋಡಿಲ್ಲ. ಅಶೋಕಣ್ಣ, ಸಿ.ಟಿ. ರವಿಯಣ್ಣ, ವಿಜಯೇಂದ್ರಣ್ಣ ಅವರುಗಳು ಮಾತನಾಡಬೇಕು. ಈ ವಿಚಾರದಲ್ಲಿ ಸತ್ಯ ಏನಿದೆ ಎಂದು ತಮ್ಮ ಅಭಿಪ್ರಾಯಗಳನ್ನು ಹೇಳಬೇಕು. ಮುಖ್ಯವಾಗಿ ಕುಮಾರಣ್ಣ, ಡಾ. ಮಂಜುನಾಥ್ ಅವರು ಮಾತನಾಡಬೇಕು. ಯಾರು, ಯಾರಿಗೆ ಏನಾಗಿದೆ ಎಂದು ನಾನು ತಿಳಿದುಕೊಳ್ಳಲು ಆಗಿಲ್ಲ. ಜೆಟ್ ಲ್ಯಾಗ್ ಇರುವ ಕಾರಣಕ್ಕೆ ಮಾಧ್ಯಮಗಳನ್ನು ಸರಿಯಾಗಿ ಗಮನಿಸಲು ಆಗಿಲ್ಲ ಎಂದರು.

ಡಿ.ಕೆ.ಸಹೋದರರ ನೇರ ಷಡ್ಯಂತ್ರ ಎಂದು ವಿಜಯೇಂದ್ರ, ಅಶ್ವಥ್ ನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ, ಅವರುಗಳು ನನ್ನ ನೆನೆಸಿ ಕೊಳ್ಳುತ್ತೀರಬೇಕು" ಎಂದರು. ಇಷ್ಟೊಂದು ಆರೋಪಗಳು ಇದ್ದರೂ ಬಿಜೆಪಿ ನಾಯಕರು ಬೆಂಬಲ ನೀಡುತ್ತಿರುವ ಬಗ್ಗೆ ಕೇಳಿದಾಗ "ಬಿಜೆಪಿಯವರ ಸಮರ್ಥನೆ ನಮ್ಮ ರಾಜ್ಯದ ಜನತೆಗೆ ಅರ್ಥವಾಗಬೇಕು ಎಂದು ಹೇಳಿದರು.

ಕುಮಾರಸ್ವಾಮಿ ಅವರ ಗಂಗೇನಹಳ್ಳಿ ಡಿನೋಟಿಫಿಕೇಟಿನ್ ಪ್ರಕರಣದ ದಾಖಲೆ ಬಿಡುಗಡೆ ಮಾಡಲಾಗಿದ್ದು, ಮುಂದಿನ ರಾಜಕೀಯ ಹೋರಾಟ ಹೇಗಿರಲಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದರ ಬಗ್ಗೆ ಸಂಪೂರ್ಣ ವಿಚಾರ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ" ಎಂದರು.

ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ" ಎಂದು ಹೇಳಿದರು.

ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನೀವು (ಮಾಧ್ಯಮ)ಗಳು ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ವರದಿ ಮಾಡಿದ್ದೀರಿ. ನಾವು ಬದ್ಧತೆಯಿಂದ ನಾಗರೀಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ನಾನು ಬೇರೆ ರಾಜ್ಯಗಳಿಗೆಲ್ಲಾ ಭೇಟಿ ನೀಡಿದ್ದೇನೆ. ಅಲ್ಲಿನ ರಸ್ತೆಯ ವಿಡಿಯೋಗಳನ್ನು ಹಾಕಿದರೆ ಆ ರಾಜ್ಯಗಳಿಗೆ ಅವಮಾನವಾಗುತ್ತದೆ. ಅದಕ್ಕಿಂತ ಉತ್ತಮವಾಗಿ ನಮ್ಮವರು ಇಲ್ಲಿನ ರಸ್ತೆಗಳ ಪರಿವರ್ತನೆ ಮಾಡಬೇಕು ಎಂದು ಕೆಲಸ ಮಾಡಿದ್ದಾರೆ. ಅದರಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+