ನಾನೇ ಕರ್ನಾಟಕದ ಮುಂದಿನ ಸಿಎಂ ಎಂದ ಸಚಿವ.!
ಬೆಂಗಳೂರು, ಸೆಪ್ಟೆಂಬರ್, 08: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಕೇಳಿಬಂದಿದ್ದು, ಇದೇ ವಿಚಾರವನ್ನು ವಿಪಕ್ಷಗಳು ಅಸ್ತ್ರ ಮಾಡಿಕೊಂಡಿ ಸಿದ್ದರಾಮಯ್ಯ ವಿರುದ್ಧ ಕೆಂಡಕಾರುತ್ತಿದೆ. ಮತ್ತೊಂದೆಡೆ ಸಿಎಂ ಬದಲಾವಣೆ ಕೂಗುಗಳು ಕೂಡ ಕೇಳಿರುತ್ತಿವೆ. ಇದರ ನಡುವೆಯೇ ಕಾಂಗ್ರೆಸ್‌ನ ಸಚಿವರೊಬ್ಬರು ನಾನೇ ಮುಂದಿನ ಸಿಎಂ ಎಂದು ಹೇಳಿಕೊಂಡು ಗಮನ ಸೆಳೆದಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆಯ ಕೂಗು ಜೋರಾಗಿಯೇ ಕೇಳಿಬಂದಿದ್ದು, ಈ ನಡುವೆಯೇ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಚಿವ ಎಂ.ಬಿ ಪಾಟೀಲ್ ಸಹ ಸಿಎಂ ಆಗುವ ಬಯಕೆಯನ್ನು ವ್ಯಕ್ತಪಡಿಸಿ ಗಮನ ಸೆಳೆದಿದ್ದಾರೆ. ಹಾಗಾದರೆ ಅವರು ಏನೆಲ್ಲ ಹೇಳಿದ್ದಾರೆ ಎಂದು ಇಲ್ಲಿ ನೀಡಲಾಗಿದೆ ಗಮನಿಸಿ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆಯಂತೂ ಇಲ್ಲ, ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಅವರೇ ಮುಂದುವರೆಯುತ್ತಾರೆ. ಇನ್ನು ಸಿಎಂ ಆಗುವುದಕ್ಕೆ ಸೀನಿಯಾರಿಟಿ ಬೇಕಿಲ್ಲ. ಆದರೂ ಒಂದು ಮಾತು ಹೇಳುತ್ತೇನೆ. ಕಾಂಗ್ರೆಸ್‌ನಲ್ಲಿ ನಾನು ಕೂಡ ಸಿಎಂ ಆಗುತ್ತೇನೆ ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರ.
ಶಿವಾನಂದ ಪಾಟೀಲ್ ಅಂತೂ ಸಿಎಂ ಆಗುವುದಿಲ್ಲ. ಇನ್ನು ಅವರು ಇದೀಗ ಜನತಾ ದಳದಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ. ಸಿಎಂ ಬದಲಾವಣೆಯಂತಹ ಸನ್ನಿವೇಶ ಸದ್ಯ ಇದೀಗ ಬಂದಿಲ್ಲ. ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ, ಮುಂದೆಯೂ ಇರುತ್ತಾರೆ. ಮತ್ತೊಂದೆಡೆ ನಾನು ಕೂಡ ಹಿರಿಯ ಸದಸ್ಯನಿದ್ದೇನೆ. ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗುತ್ತೇನೆ ಎಂಂದು ಹೇಳಿದ್ದಾರೆ.
ಇನ್ನು ಮುಡಾ ಪ್ರಕರಣವನ್ನು ಬೇರೆ ಕಡೆ ತಿರುಗಿಸಲು ನಟ ದರ್ಶನ್ ಫೋಟೋ ಲೀಕ್ ಮಾಡಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರಹ್ಲಾದ್ ಜೋಶಿ ತಿಳಿದವರಾಗಿದ್ದಾರೆ. ಅವರು ಈ ರೀತಿ ಮಾತನಾಡುವುದು ಸರಿಯಲ್ಲ. ದರ್ಶನ್ ರಾಜಾತಿಥ್ಯ ವಿಚಾರ ಗಂಭೀರವಾದ ಪ್ರಕರಣ ಹಾಗೂ ಆರೋಪವಾಗಿದೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಆದ್ದರಿಂದ ದರ್ಶನ್ & ಗ್ಯಾಂಗ್ ಅನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ ಎಂದು ಹೇಳಿದರು.
ಸೈಟ್ ಹಂಚಿಕೆ ಆಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ, ಇದರಲ್ಲಿ ಸಿದ್ದರಾಮಯ್ಯನವರ ಪಾಲು ಏನಿದೆ? ಮುಡಾದಿಂದ ಯಾರೂ ಭಯಗೊಂಡಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ನಮಗೆ ಜಯ ಸಿಕ್ಕೆ ಸಿಗುತ್ತದೆ. ಹಗಲು ಕನಸ್ಸು ಬೇಡ , ರಾಜ್ಯಪಾಲರ ನಡವಳಿಕೆ ಮಾತ್ರ ಕಾನೂನು ಬಾಹಿರವಾಗಿದೆ ಎಂದು ಆಕ್ರೊಶ ಹೊರಹಾಕಿದರು.












Click it and Unblock the Notifications