BJP President: 1 ವಾರದಲ್ಲಿ ಎಲ್ಲವೂ ಸರಿಯಾಗುತ್ತೆ, ಮತ್ತೆ ನಾನೇ ರಾಜ್ಯಾಧ್ಯಕ್ಷನಾಗುತ್ತೇನೆ: ವಿಜಯೇಂದ್ರ

ಶಿವಮೊಗ್ಗ, ಫೆಬ್ರವರಿ 03: ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಶಯ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನಾ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯ ಅಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಎಲ್ಲವೂ ಕೂಡ ವ್ಯವಸ್ಥಿತವಾಗಿ ನಡೆಯುತ್ತಿವೆ. ಕೇಂದ್ರದ ವರಿಷ್ಠರು ನಿರ್ಧಾರ ಮಾಡಿದಂತೆ ಎಲ್ಲವೂ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹೇಳಿದರು.

I Will Become The President Again Says BY Vijayendra

ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ನಮ್ಮ ಎಲ್ಲಾ ಕಾರ್ಯಕರ್ತರು, ಪಕ್ಷದ ಹಿರಿಯರು ಒಟ್ಟಾಗಿ ಈ ಭ್ರಷ್ಟ ಹಾಗೂ ದುಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರವಾಗಿ ಹೋರಾಟವನ್ನು ಮಾಡಿಕೊಂಡು ಬಂದಿದ್ದೇವೆ. ನನ್ನ ಕಳೆದ ಒಂದು ವರ್ಷದ ಅವಧಿಯಲ್ಲಿ, ರಾಜ್ಯಾಧ್ಯಕ್ಷನಾಗಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜತೆಗೂ ಗೊತ್ತಿದೆ, ನಮ್ಮ ಕಾರ್ಯಕರ್ತರಿಗೂ ಗೊತ್ತಿದೆ. ಪಕ್ಷದ ಹಿರಿಯರು, ಶಾಸಕರಿಗೂ ಕೂಡ ಗೊತ್ತಿದೆ. ಎಲ್ಲರ ಸಹಕಾರದಿಂದ ರಾಜ್ಯದ ಅಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎನ್ನುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ರಾಜ್ಯ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಭ್ರಷ್ಟ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ ರೀತಿ ಕಾರ್ಯಕರ್ತರಿಗೆ ಗೊತ್ತಿದೆ. ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷನ ಬದಲಾಯಿಸುವಂತೆ ಅಗ್ರಹಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ದೆಹಲಿಗೆ ಹೋಗಲಿರುವ ಕುರಿತು ಮಾತನಾಡಿ, ತಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಜಾರಿಯಲ್ಲಿದೆ ಪಕ್ಷದ ಸಂಘಟನೆ ಚುನಾವಣೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ಹೇಳಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಮತ್ತು ದುಷ್ಟ ಸರ್ಕಾದ ವಿರುದ್ಧ ಪಕ್ಷದ ರಾಜ್ಯಾಧ್ಯಕ್ಷನಾಗಿ ಒಂದು ವರ್ಷದಿಂದ ಸಮರ್ಪಕವಾಗಿ ಕೆಲಸ ಮಾಡುತ್ತಿದ್ದೇನೆ ಮತ್ತು ತನ್ನನ್ನು ಮುಂದುವರಿಸುವ ವಿಶ್ವಾಸವಿದೆ. ಜಿಲ್ಲಾಧ್ಯಕ್ಷ ಚುನಾವಣೆಗೂ ಪೈಪೋಟಿ ಇತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೂ ಅದೇರೀತಿ ಪೈಪೋಟಿ ಇದೆ. ಎಲ್ಲವನ್ನು ಕೇಂದ್ರದ ವರಿಷ್ಠರು ಗಮನಿಸುತ್ತಿದ್ದಾರೆ.ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ ಎಂದರು.

ರಾಜ್ಯದ ಜನರಿಗೆ, ಪಕ್ಷದ ಕಾರ್ಯಕರ್ತರು, ಶಾಸಕರಿಗೆ ಪಕ್ಷದ ಸಂಘಟನೆಯಲ್ಲಿ ವಿಜಯೇಂದ್ರ ಮಾಡಿರುವ ಕೆಲಸ ಗೊತ್ತಿದೆ. ನನಗೆ ವಿಶ್ವಾಸವಿದೆ. ಎಲ್ಲರ ಸಹಕಾರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ಮುಂದುವರೆಯುವೆ. ಪಕ್ಷವನ್ನು ಮತ್ತೆ ಬಲಪಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+