Lok Sabha Election 2024: ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ: ಯದುವೀರ್‌

ಮೈಸೂರು, ಮಾರ್ಚ್‌ 18: ಲೋಕಸಭಾ ಚುನಾವಣಾ ಕಣ ರಂಗೇರಿದ್ದು ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ ಎಂದು ಕ್ಷೇತ್ರದ ಜನತೆಗೆ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕಳೆದ ಒಂಭತ್ತು ವರ್ಷದಿಂದ ನಮಗೆ ಒಳ್ಳೆಯ ಸ್ವಾಗತ ಕೊರಿದ್ದೀರಾ. ಮನೆ ಮಗನಾಗಿ ಸಹೋದರನಾಗಿ ನನ್ನ ಮೇಲೆ ಪ್ರೀತಿ ತೋರಿದ್ದಿರಾ. ಇದೆ ರೀತಿಯ ಪ್ರೀತಿ ವಿಶ್ವಾಸ ಮುಂದೆಯೂ ನಿಮ್ಮಿಂದ ನನಗೆ ಬೇಕಿದೆ.

I Will Come Into People s Place To Serve Says Yaduveer Wadiyar

ನನ್ನ ತತ್ವ ಸಿದ್ದಾಂತಗಳು ಬಿಜೆಪಿ ಪಕ್ಷಕ್ಕೆ ಹತ್ತಿರವಿದೆ. ನಮ್ಮ ಆಲೋಚನೆ ಮತ್ತೆ ಬಿಜೆಪಿ ಆಲೋಚನೆ ಒಂದೇ ತರ ಇದೆ. ಈ ಕಾರಣಕ್ಕಾಗಿ ನಾನು ಬಿಜೆಪಿಯನ್ನ ಆಯ್ಕೆ ಮಾಡಿಕೊಂಡೆ ಎಂದು ತಿಳಿಸಿದರು.ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ನಾನು ಸಾಮಾನ್ಯ ಎಂಪಿ ರೀತಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ತುಂಬಾ ದೊಡ್ಡ ನಿರೀಕ್ಷೆ ಇದೆ ಅಂತ ಅನ್ನಿಸುತ್ತಿಲ್ಲ. ನಾನು ರಾಜ ಅಂತ ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಏನು ಬೇಕಾದರೂ ಕರೆಯಿರಿ. ಇನ್ನು ಬೆಂಗಳೂರು ಅರಮನೆ ವಿಚಾರ ಕಾನೂನಾತ್ಮಕವಾಗಿ ನಡೆಯುತ್ತೆ ಎಂದು ಯದುವೀರ್ ತಿಳಿಸಿದರು.

ನನ್ನ ತಾಯಿ ನನ್ನ ಪರವಾಗಿ ಪ್ರಚಾರಕ್ಕೆ ಬರುವ ಅಗತ್ಯ ಇಲ್ಲ. ತಾಯಿ ಆಶೀರ್ವಾದದಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ. ಅವರು ನನ್ನ ಪರವಾಗಿ ಹೇಳಿಕೆ ಕೊಡಬೇಕೆಂಬುದು ಏನು ಇಲ್ಲ. ಅವರ ಸಹಕಾರ ನನ್ನ ಮೇಲೆ ಸದಾ ಇರುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ್ ಹೇಳಿದರು.

ದ್ರೋಹ ಮಾಡಲ್ಲ ಎಂದ ಪ್ರತಾಪ್ ಸಿಂಹ

ಪಕ್ಷವು ಯದುವೀರ್ ಅವರನ್ನು ಮೈಸೂರು-ಕೊಡಗು ಅಭ್ಯರ್ಥಿಯಾಗಿ ಮಾಡಿದೆ. ನಾನು ಪಕ್ಷಕ್ಕೂ, ಯದುವೀರ್ ಅವರಿಗೂ ದ್ರೋಹ ಮಾಡಲ್ಲ ಎಂದು ಹಾಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು. ನಾವು ನಾಮಪತ್ರ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಯದುವೀರ್ ರಾಜರಾಗಿ ನಾಡಿಗೆ ಪರಿಚಯ ಆಗಿದ್ದರೂ ಅಭ್ಯರ್ಥಿಯಾಗಿ ಮನವರಿಕೆ ಮಾಡಿಕೊಡಬೇಕು. ಇದು ತುಂಬಾ ದೊಡ್ಡ ಕ್ಷೇತ್ರ. ಕಡಕೊಳದಿಂದ ಕರ್ಕಿ 200 ಕಿ.ಮೀ. ಹೋಗಬೇಕು. ಜನರನ್ನು ತಲುಪಲು ಮಾಧ್ಯಮ ಮಾಖ್ಯ ಎಂದರು.

ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಕದಲ್ಲಿರುವವರಿಗೂ ದ್ರೋಹ‌ ಮಾಡಲ್ಲ. 2014 ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂತಾ ಹೈಕಮಂಡ್ ಹೇಳಿರಲಿಲ್ಲ. ನಾನು ಯಾಕೆ ಕೊಟ್ಟರಿ ಅಂತಾ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ಟಿಕೆಟ್ ತಪ್ಪಿಸಿದ್ದೀರಿ ಅಂತಾ ನಾನು ಕೇಳಿಯೂ ಇಲ್ಲ. ಅವರು ಹೇಳಿಯೂ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.

ಕಾಂಗ್ರೆಸ್ ಪಕ್ಷದಿಂದ ಆಫರ್ ಇತ್ತು ಇಲ್ವಾ ಎಂಬ ಯಾವ ಪ್ರಶ್ನೆಗಳು ಈಗ ಪ್ರಸ್ತುತ ಅಲ್ಲ. ನಮಗೆ ಯದುವೀರ್ ಅವರನ್ನು ಗೆಲ್ಲಿಸುವುದಷ್ಟೇ ಈಗ ಮುಖ್ಯ. ದೇಶಕ್ಕೆ ಮೋದಿ ಬೇಕು, ಮೋದಿ ಪರವಾಗಿ ಕೈ ಎತ್ತಲು ಮೈಸೂರಿನಿಂದ ಒಬ್ಬ ವ್ಯಕ್ತಿ ಬೇಕು ಇದಷ್ಟೇ ನಮಗೆ ಮುಖ್ಯ. ಪಕ್ಷ ನನಗೆ ತಾಯಿ ಇದ್ದಾಗೆ. ಇದು ಬರಿ ಬಾಯಿ ಮಾತಲ್ಲ. ಇದು ನನ್ನ ಮನಸಿನ ಮಾತು ಎಂದು ಸಂಸದ ಪ್ರತಾಪ ಸಿಂಹ ಹೇಳಿದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+