ಬಿಜೆಪಿಯಲ್ಲಿ ಬಂಡಾಯದ ಬೆಂಕಿ; ಟಿಕೆಟ್‌ ನೀಡದಿದ್ದರೂ ಸ್ಪರ್ಧೆ: ಸಿಡಿದೆದ್ದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ,ಏಪ್ರಿಲ್12:‌ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣೆಗೆ ಬಿಜೆಪಿ ಪಾಳಯದಲ್ಲಿ ಭರ್ಜರಿ ತಯಾರಿ ನಡೆಯುತ್ತಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯ ನಂತರ ಅಳೆದು ತೂಗಿ ಬಿಜೆಪಿ ಹೈಕಮಾಂಡ್‌ ಹಲವು ಲೆಕ್ಕಾಚಾರವನ್ನ ಹಾಕಿ 224 ಕ್ಷೇತ್ರಗಳ ಫೈಕಿ 189 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಬಿಜೆಪಿಗೂ ಬಂಡಾಯದ ಬೆಂಕಿ ತಟ್ಟಿದೆ.

ಈಗಾಗಲೇ ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿರುವ ಹೈಕಮಾಂಡ್‌ ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿದೆ.‌ ಇನ್ನೂ ಟಿಕೆಟ್‌ ಸಿಗುವ ನಿರೀಕ್ಷೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್‌ ಶೆಟ್ಟರ್‌ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾದ ಹುಬ್ಬಳ್ಳಿ ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ. 2023 ರ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದ ಜಗದೀಶ್‌ ಶೆಟ್ಟರ್‌ ಅವರ ಹೆಸರು ಮೊದಲಪಟ್ಟಿಯಲ್ಲಿ ಘೋಷಣೆ ಮಾಡದಿರುವುದರಿಂದ ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ.

I Will Contest Even If Ticket Not Given Says jagadish shettar

ಇನ್ನೂ ಟಿಕೆಟ್‌ ಘೋಷಣೆಯಾದ ಹಿನ್ನೆಲೆ ಅಸಮಾಧಾನದಿಂದ ಮಾಧ್ಯಮಗಳ ಜೊತೆಗೆ ಜಗದೀಶ್‌ ಶೆಟ್ಟರ್‌ ಮಾತನಾಡಿದ ಅವರು, ಹೈಕಮಾಂಡ್‌ ಟಿಕೆಟ್‌ ನೀಡದಿದ್ದರೂ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳನ್ನ ಪಡೆದು ಗೆದ್ದು ಬರುತ್ತೇನೆ ಎಂದು ಹೇಳಿದರು.

ಈ ಕುರಿತು ಹೈಕಮಾಂಡ್‌ ವರಿಷ್ಠರು ಫೋನ್‌ ಮಾಡಿದ್ರು, ನೀವು ಹಿರಿಯರಿದ್ದೀರಾ ಬೇರೆಯವರಿಗೆ ಅವಕಾಶ ಕೊಡಿ ಎಂದು ನನಗೆ ಹೈಕಮಾಂಡ್‌ ನಾಯಕರು ಹೇಳಿದರು. ಆದರೆ, ನನಗೆ ಪಕ್ಷದ ವರಿಷ್ಠರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದಲ್ಲಿ ನಾನು ಕಳೆದ 30 ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಹೈಕಮಾಂಡ್ ಬಳಿ ಹೇಳಿದ್ದೇನೆ. ಅಲ್ಲದೇ ನೂರಾರು ಜನರಿಗೆ ಟಿಕೆಟ್ ಕೊಡುವ ಕೆಲಸವನ್ನೂ ಮಾಡಿದ್ದೇನೆ. ನನಗೆ ಟಿಕೆಟ್ ನೀಡಬಾರದು ಎನ್ನಲು ಕಾರಣವೇನು? ಎಂದು ಪ್ರಶ್ನಿಸಿದ ಅವರು, ಕ್ಷೇತ್ರ ಸಮೀಕ್ಷೆಯಲ್ಲೂ ನನ್ನ ಪರವಾಗಿ ಪಾಸಿಟಿವ್‌ ಫಲಿತಾಂಶ ಬಂದಿದೆ. ನನ್ನ ವಿರುದ್ದ ಯಾವುದೇ ಕಪ್ಪುಚುಕ್ಕೆ ಇಲ್ಲ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

I Will Contest Even If Ticket Not Given Says jagadish shettar

ನಿಯತ್ತಾಗಿ ಕೆಲಸ ಮಾಡಿದ್ದಕ್ಕಾಗಿ ನನಗೆ ಈ ಶಿಕ್ಷೆ ನೀಡುತ್ತಿದ್ದೀರಾ ಎಂದು ಪ್ರಶ್ನಿಸಿದ ಅವರು, ಹೈಕಮಾಂಡ್ ಈ ರೀತಿ ಹೇಳಿದ್ದಕ್ಕೆ ನನ್ನ ಮನಸ್ಸಿಗೆ ಬೇಜಾರಾಗಿದೆ. ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ನನಗೆ ಟಿಕೆಟ್ ತಪ್ಪಿಸಲು ಮೈನಸ್ ಪಾಯಿಂಟ್ ಏನಾದರು ಇದ್ದರೆ ಹೇಳಿ. ಇನ್ನೂ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ನಾನು ಹುಬ್ಬಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದರು.

ಇನ್ನೂ ಈ ಬಾರಿಯ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಅತಿಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತೇನೆ. ನಾನು ರಾಜಕಾರಣದಿಂದ ಹಿಂದೆ ಸರಿಯುವ ಮಾತೇ ಇಲ್ಲ. ನಾನು ಇನ್ನೂ ಹತ್ತು ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+