ಪಕ್ಷ ಬಯಸಿದರೆ ಮಾತ್ರ ಕ್ಷೇತ್ರ ಬದಲಾಯಿಸುವೆ : ಬಿ. ನಾಗೇಂದ್ರ
ಬಳ್ಳಾರಿ, ಫೆಬ್ರವರಿ 07: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೂಡ್ಲಿಗಿ ಕ್ಷೇತ್ರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ, ಇಲ್ಲವಾದಲ್ಲಿ ಪಕ್ಷ ಸೂಚಿಸಿದ ಕ್ಷೇತ್ರದಿಂದ ಸ್ಪರ್ಧಿಸುವೆ. ನಾನು ಎಂದಿಗೂ ಕೂಡ್ಲಿಗಿ ಕ್ಷೇತ್ರದ ಜನರನ್ನು ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಬಿ. ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ
ಬಳ್ಳಾರಿ ಜಿಲ್ಲೆಯ ಕಾನಾಹೊಸಹಳ್ಳಿ ಗ್ರಾಮದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿ, ನಾನು ಅನೇಕರನ್ನು, ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರನ್ನು ಮಾತನಾಡಿಸಿ ಅಭಿಪ್ರಾಯ ಸಂಗ್ರಹ ಮಾಡಿರುವೆ. ಫೆಬ್ರವರಿ 10ರ ಶನಿವಾರ ಹೊಸಪೇಟೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ್ದ ಕಾಂಗ್ರೆಸ್ ಪಕ್ಷದ ಜನ ಪರ ಕಾರ್ಯಗಳನ್ನು ಮೆಚ್ಚಿ ಅ ಪಕ್ಷ ಸೇರುತಿದ್ದೇನೆ. ನಮ್ಮ ಬೆಂಬಲಿಗರು ಯಾವುದೇ ಕಾರಣಕ್ಕೂ ಗೊಂದಲಕ್ಕೆ ಗುರಿ ಆಗಬಾರದು. ನನ್ನ ಮೇಲೆ ವಿಶ್ವಾಸ, ನಂಬಿಕೆ ಹೊಂದಿರುವವರು ನನ್ನೊಂದಿಗೆ ಹೆಜ್ಜೆ ಹಾಕಿ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಂ.ಎಂ.ಜೆ. ಹರ್ಷವರ್ಧನ್, ಎಚ್. ರೇವಣ್ಣ, ತಾಲ್ಲೂಕು ಪಂಚಾಯ್ತಿ ಸದಸ್ಯ ಪಾಪನಾಯಕ, ಮುಖಂಡರಾದ ಜಿ. ಉಮೇಶ್, ಕಲ್ಲೇಶಪ್ಪ ಸೇರಿದಂತೆ ನೂರಾರು ಬೆಂಬಲಿಗರು ಸಭೆಯಲ್ಲಿ ಇದ್ದರು.
ಕಾನಹೊಸಹಳ್ಳಿಯಲ್ಲಿ ಮಂಗಳವಾರ ನಡೆದ ಬೆಂಬಲಿರ ಸಭೆಯಲ್ಲಿ ಕೂಡ್ಲಿಗಿ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಮಾತನಾಡಿದರು.












Click it and Unblock the Notifications